ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡವು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಭಾರತ ತಂಡ WTC ಫೈನಲ್ಗೆ ಅರ್ಹತೆ ಪಡೆದಿಲ್ಲ ಎಂಬುದು ವಿಶೇಷ.
ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವು ಇನ್ನೂ 8 ಪಂದ್ಯಗಳನ್ನಾಡಬೇಕಿದೆ. ಈ ಎಂಟು ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಫೈನಲ್ ಅರ್ಹತೆ ನಿರ್ಧಾರವಾಗಲಿದೆ.
ಇಲ್ಲಿ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೂರ್ನಿ ಆಡಲಿದೆ. ಈ ಎಂಟು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.
ಅಂದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ ಫೈನಲ್ಗೆ ಅರ್ಹತೆಗಿಟ್ಟಿಸಿಕೊಳ್ಳುವುದು ಬಹುತೇಕ ಕನ್ಫರ್ಮ್. ಹೀಗಾಗಿ ಭಾರತ ತಂಡದ ಪಾಲಿಗೆ ಮುಂದಿನ ಸರಣಿ ತುಂಬಾ ಮಹತ್ವದ್ದು.
Published On - 10:35 am, Wed, 2 October 24