AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2025 final: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಉಭಯ ತಂಡಗಳ ಪ್ಲೇಯಿಂಗ್-11 ಹೀಗಿದೆ

WTC 2025 final: 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವು ಜೂನ್ 11 ರಿಂದ ಲಾರ್ಡ್ಸ್‌ನಲ್ಲಿ ಆರಂಭವಾಗಿದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಚಾಂಪಿಯನ್‌ಶಿಪ್‌ಗಾಗಿ ಪೈಪೋಟಿ ನಡೆಸುತ್ತಿವೆ. ಆಸ್ಟ್ರೇಲಿಯಾ ತನ್ನ ಎರಡನೇ ಚಾಂಪಿಯನ್‌ಶಿಪ್‌ಗೆ ಆಶಿಸುತ್ತಿದ್ದರೆ, ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಪ್ರಶಸ್ತಿಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತಿದೆ. ಎರಡೂ ತಂಡಗಳು ತಮ್ಮ ಬಲಿಷ್ಠ ಬಳಗದೊಂದಿಗೆ ಕಣಕ್ಕಿಳಿದಿವೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದೆ.

WTC 2025 final: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಉಭಯ ತಂಡಗಳ ಪ್ಲೇಯಿಂಗ್-11 ಹೀಗಿದೆ
Wtc Final 2025
Follow us
ಪೃಥ್ವಿಶಂಕರ
|

Updated on:Jun 11, 2025 | 3:20 PM

2023-25ರ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ (World Test Championship Final) ಪಂದ್ಯವು ಜೂನ್ 11 ರಿಂದ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ (Australia vs South Africa) ನಡುವೆ ಆರಂಭವಾಗಿದೆ. ಸತತ ಎರಡು ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡ ಎಂಬ ದಾಖಲೆ ಬರೆಯುವ ಇರಾದೆಯೊಂದಿಗೆ ಆಸ್ಟ್ರೇಲಿಯಾ ತಂಡ ಕಣಕ್ಕಿಳಿಯುತ್ತಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡವು ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಯುವ ತವಕದಲ್ಲಿದೆ. ಹೀಗಾಗಿ ಉಭಯ ತಂಡಗಳು ಕೂಡ ತಮ್ಮ ಬಲಿಷ್ಠ ಆಡುವ ಹನ್ನೊಂದರ ಬಳಗವನ್ನು ಕಟ್ಟಿಕೊಂಡು ಬಹಳ ದಿನಗಳಿಂದ ಅಭ್ಯಾಸದಲ್ಲಿ ನಿರತವಾಗಿವೆ. ಉಭಯ ತಂಡಗಳಲ್ಲೂ ಪಂದ್ಯವನ್ನು ತಿರುಗಿಸಬಲ್ಲ ಆಟಗಾರರಿರುವ ಕಾರಣ ಈ ಫೈನಲ್ ಪಂದ್ಯ ಮತ್ತಷ್ಟು ರೋಚಕತೆ ಹೆಚ್ಚಿಸಿದೆ. ಇನ್ನು ಈ ಫೈನಲ್ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್

ಟಾಸ್ ಸೋತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್‌ ಮಾಡುವುದಾಗಿ ಹೇಳಿದರು. ಡೇವಿಡ್ ವಾರ್ನರ್ ನಿವೃತ್ತಿಯ ಬಳಿಕ ಆಸ್ಟ್ರೇಲಿಯಾದ ಆರಂಭಿಕ ಜೋಡಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇದೀಗ ಫೈನಲ್ ಪಂದ್ಯದಲ್ಲೂ ಆರಂಭಿಕ ಜೋಡಿ ಬದಲಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಮಾರ್ನಸ್ ಲಬುಶೇನ್, ಉಸ್ಮಾನ್ ಖವಾಜಾ ಜೊತೆ ಓಪನಿಂಗ್ ಮಾಡಲಿದ್ದಾರೆ. ಲಬುಶೇನ್ ಅವರ ಫಾರ್ಮ್ ತಂಡಕ್ಕೆ ಕಳವಳಕಾರಿ ವಿಷಯವಾಗಿದೆಯಾದರೂ, ತಂಡದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಕೌಂಟಿ ಕ್ರಿಕೆಟ್‌ನಲ್ಲಿ ಮೂರು ಶತಕಗಳನ್ನು ಬಾರಿಸುವ ಮೂಲಕ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲಿಂಗ್‌ನಲ್ಲಿ ಅನುಭವದ ಕೊರತೆಯಿಲ್ಲ. ತಂಡವು ಆಸ್ಟ್ರೇಲಿಯಾದ ಸಾರ್ವಕಾಲಿಕ ಟಾಪ್ 10 ವಿಕೆಟ್ ಪಡೆದವರ ನಾಲ್ವರು ಬೌಲರ್‌ಗಳನ್ನು ಒಳಗೊಂಡಿದೆ. ಅವರಲ್ಲಿ ನಾಥನ್ ಲಿಯಾನ್ (553, ಮೂರನೇ), ಮಿಚೆಲ್ ಸ್ಟಾರ್ಕ್ (382, ನಾಲ್ಕನೇ), ನಾಯಕ ಪ್ಯಾಟ್ ಕಮ್ಮಿನ್ಸ್ (294, ಎಂಟನೇ) ಮತ್ತು ಹೇಜಲ್‌ವುಡ್ (279, 10ನೇ) ಸೇರಿದ್ದಾರೆ.

ಆಫ್ರಿಕಾಗೆ ಬೌಲರ್​ಗಳೇ ಜೀವಾಳ

ಇತ್ತ ದಕ್ಷಿಣ ಆಫ್ರಿಕಾ ತಂಡ ಅನುಭವಿಗಳು ಮತ್ತು ಯುವ ಆಟಗಾರರಿಂದ ತುಂಬಿದೆ. ಅಲ್ಲದೆ ಸತತ ಏಳು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಡಬ್ಲ್ಯುಟಿಸಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಬ್ಯಾಟಿಂಗ್‌ ವಿಭಾಗದಲ್ಲಿ ನಾಯಕ ಬವುಮಾ, ಅನುಭವಿ ಐಡೆನ್ ಮಾರ್ಕ್ರಾಮ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ತಂಡಕ್ಕೆ ಬಲ ತುಂಬಿದರೆ, ಬೌಲಿಂಗ್ ವಿಭಾಗದಲ್ಲಿ ಅನುಭವಿ ಕಗಿಸೋ ರಬಾಡಗೆ ಮಾರ್ಕೊ ಯಾನ್ಸೆನ್ ಸಾಥ್ ನೀಡಲಿದ್ದಾರೆ. ದಕ್ಷಿಣ ಆಫ್ರಿಕಾ ಪರ ಆಡಮ್ ಮಾರ್ಕ್ರಾಮ್ ಮತ್ತು ರಯಾನ್ ರಿಕಲ್ಟನ್ ಇನ್ನಿಂಗ್ಸ್ ಆರಂಭಿಸಲಿದ್ದು, ನಾಯಕ ಬವುಮಾ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

WTC Final 2025: ಟೆಸ್ಟ್ ಚಾಂಪಿಯನ್‌ಶಿಪ್‌ ಗೆಲ್ಲುವ ತಂಡವನ್ನು ಹೆಸರಿಸಿದ ಡಿವಿಲಿಯರ್ಸ್- ಫಿಂಚ್

ಉಭಯ ತಂಡಗಳು

ಆಸ್ಟ್ರೇಲಿಯಾದ ಪ್ಲೇಯಿಂಗ್-11: ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಕ್ಯಾಮರೂನ್ ಗ್ರೀನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್.

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್-11: ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಯಾನ್ ರಿಕಲ್ಟನ್, ವಿಯಾನ್ ಮುಲ್ಡರ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಬೆಡಿಂಗ್‌ಹ್ಯಾಮ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Wed, 11 June 25

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ