AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್‌ಗೇರಲು ಇನ್ನೆಷ್ಟು ಪಂದ್ಯಗಳನ್ನು ಗೆಲ್ಲಬೇಕು?

World Test Championship Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2026-27 ಫೈನಲ್‌ಗೆ ಭಾರತದ ಹಾದಿ ಕಠಿಣವಾಗಿದೆ. ಪ್ರಸ್ತುತ ಐದನೇ ಸ್ಥಾನದಲ್ಲಿರುವ ಟೀಂ ಇಂಡಿಯಾ, ಫೈನಲ್ ತಲುಪಲು ಉಳಿದಿರುವ 9 ಪಂದ್ಯಗಳಲ್ಲಿ ಕನಿಷ್ಠ 7 ಗೆಲ್ಲಬೇಕು. ಶ್ರೀಲಂಕಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ಧ ಸರಣಿಗಳಿದ್ದು, ಕೆಲವು ವಿದೇಶಿ ಪಂದ್ಯಗಳೂ ಇವೆ. ಇತರ ತಂಡಗಳ ಫಲಿತಾಂಶಗಳೂ ಮುಖ್ಯ. ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕನಸು ನನಸಾಗಲು ಪೂರ್ಣ ಲೆಕ್ಕಾಚಾರ ಇಲ್ಲಿದೆ.

WTC Final: ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್‌ಗೇರಲು ಇನ್ನೆಷ್ಟು ಪಂದ್ಯಗಳನ್ನು ಗೆಲ್ಲಬೇಕು?
Team India
ಪೃಥ್ವಿಶಂಕರ
|

Updated on:Aug 06, 2026 | 6:54 PM

Share

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಮೊದಲೆರಡು ಆವೃತ್ತಿಗಳಲ್ಲಿ ಫೈನಲ್​ಗೇರಿದ್ದ ಭಾರತ ತಂಡ (Team India) ಆ ಎರಡೂ ಆವೃತ್ತಿಗಳ ಫೈನಲ್‌ನಲ್ಲಿ ಎಡವಿತ್ತು. ಇನ್ನು ಮೂರನೇ ಆವೃತ್ತಿಯಲ್ಲಿ ಟೀಂ ಇಂಡಿಯಾಕ್ಕೆ ಫೈನಲ್​ಗೇರಲು ಸಾಧ್ಯವಾಗಿರಲಿಲ್ಲ. ಇದೀಗ ನಾಲ್ಕನೇ ಆವೃತ್ತಿಯಲ್ಲಾದರೂ ಫೈನಲ್​ಗೇರಿ ಚಾಂಪಿಯನ್‌ ಆಗಬೇಕೆಂಬ ಟೀಂ ಇಂಡಿಯಾದ ಕನಸು ನನಸಾಗುವ ಸಾಧ್ಯತೆಗಳು ಕ್ಷಿಣಿಸುತ್ತಿವೆ. ಆದಾಗ್ಯೂ ಗಿಲ್ ಪಡೆಗೆ ಈಗಲೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್​ಗೇರುವ ಅವಕಾಶವಿದೆ. ಹಾಗಿದ್ದರೆ ಭಾರತ ತಂಡ ಡಬ್ಲ್ಯೂಟಿಸಿ ನಾಲ್ಕನೇ ಆವೃತ್ತಿಯ ಫೈನಲ್​ಗೇರಲು ಏನು ಮಾಡಬೇಕು? ಉಳಿದಿರುವ ಪಂದ್ಯಗಳಲ್ಲಿ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಪೂರ್ಣ ಲೆಕ್ಕಾಚಾರ ಇಲ್ಲಿದೆ.

ಈ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು ಇನ್ನೂ ಒಂಬತ್ತು ಪಂದ್ಯಗಳನ್ನು ಆಡಬೇಕಾಗಿದೆ. ಶ್ರೀಲಂಕಾ ನಂತರ, ತಂಡವು ನ್ಯೂಜಿಲೆಂಡ್ ಮತ್ತು ನಂತರ ಆಸ್ಟ್ರೇಲಿಯಾ ವಿರುದ್ಧ ತವರು ಸರಣಿಯನ್ನು ಆಡಲಿದೆ. ಮುಖ್ಯವಾದ ವಿಷಯವೆಂದರೆ ಈ ಎಲ್ಲಾ ಮೂರು ಸರಣಿಗಳ ಪ್ರತಿಯೊಂದು ಪಂದ್ಯವೂ ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಪ್ರಸ್ತುತ, ಟೀಂ ಇಂಡಿಯಾ 48.15% ಗೆಲುವಿನ ಶೇಕಡಾವಾರುವಿನೊಂದಿಗೆ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ತಂಡವು ಈಗ ಪ್ರತಿ ಪಂದ್ಯವನ್ನು ಗೆದ್ದರೆ ಅದರ ಗೆಲುವಿನ ಶೇಕಡಾವಾರು 74.07 ಕ್ಕೆ ಏರುತ್ತದೆ.

ಭಾರತ ಫೈನಲ್​ಗೇರಬೇಕೆಂದರೆ ಏನು ಮಾಡಬೇಕು?

  • ಭಾರತ ತಂಡವು ಉಳಿದಿರುವ 9 ಪಂದ್ಯಗಳಲ್ಲಿ ಕನಿಷ್ಠ 7 ಪಂದ್ಯಗಳನ್ನು ಗೆಲ್ಲಬೇಕಾಗುತ್ತದೆ. ಆದಾಗ್ಯೂ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.
  • ಭಾರತ 7 ಕ್ಕಿಂತ ಕಡಿಮೆ ಪಂದ್ಯಗಳನ್ನು ಗೆದ್ದರೂ ಸಹ ಇತರ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ. ಆದಾಗ್ಯೂ, ಭಾರತ 8 ಅಥವಾ 9 ಪಂದ್ಯಗಳನ್ನು ಗೆದ್ದರೆ, ತಂಡವು ಫೈನಲ್‌ಗೆ ಸುರಕ್ಷಿತವಾಗಿ ಮತ್ತು ಆರಾಮವಾಗಿ ತಲುಪುತ್ತದೆ. ಆದಾಗ್ಯೂ ಟೀಂ ಇಂಡಿಯಾದ ಮುಂದಿನ ಹಾದಿ ಅಷ್ಟು ಸುಲಭವಲ್ಲ. ಏಕೆಂದರೆ ತಂಡದ ಮುಂದಿನ 4 ಪಂದ್ಯಗಳು ವಿದೇಶಿ ನೆಲದಲ್ಲಿ ನಡೆಯುತ್ತವೆ ಮತ್ತು ಕೊನೆಯ 5 ಪಂದ್ಯಗಳು ನಂಬರ್ 1 ಶ್ರೇಯಾಂಕಿತ ತಂಡವಾದ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತವೆ.
  • ಇದೆಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಟೀಂ ಇಂಡಿಯಾ 7 ಪಂದ್ಯಗಳನ್ನು ಗೆದ್ದರೆ ಅದರ ಗೆಲುವಿನ ಶೇಕಡಾವಾರು 62.96 ಕ್ಕೆ ಏರಲಿದೆ. ಇತ್ತ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ನ ಶೇಕಡಾವಾರು ಕೂಡ ಕಡಿಮೆಯಾಗಬೇಕಾಗುತ್ತದೆ.
  • ಭಾರತ 8 ಪಂದ್ಯಗಳನ್ನು ಗೆದ್ದರೆ, ಅದರ ಗೆಲುವಿನ ಶೇಕಡಾವಾರು 68.52 ಕ್ಕೆ ಏರಲಿದೆ. ಒಂದು ವೇಳೆ ಒಂಬತ್ತಕ್ಕೆ 9 ಪಂದ್ಯಗಳನ್ನು ಗೆದ್ದರೆ ಅದರ ಗೆಲುವಿನ ಶೇಕಡಾವಾರು 70 ಕ್ಕೆ ಏರಲಿದೆ. ಇದು ಸಾಧ್ಯವಾದರೆ ಟೀಂ ಇಂಡಿಯಾ ಸುಲಭವಾಗಿ ಫೈನಲ್‌ಗೇರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Thu, 6 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು