AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್ ರೇಸ್​​ನಲ್ಲಿ 5 ತಂಡಗಳು

WTC Final 2027: ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ರೇಸ್‌ನಲ್ಲಿದೆ. ಭಾರತ ತಂಡವು ಯಾವುದೇ ಆತಂಕವಿಲ್ಲದೆ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಬೇಕಿದ್ದರೆ, ಮುಂಬರುವ ಪಂದ್ಯಗಳ ಪೈಕಿ ಕನಿಷ್ಠ 6 ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅತ್ಯಂತ ಅನಿವಾರ್ಯವಾಗಿದೆ. ಅದು ಸಹ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿಯೇ ಆಗಬೇಕಿದೆ.

WTC ಫೈನಲ್ ರೇಸ್​​ನಲ್ಲಿ 5 ತಂಡಗಳು
Wtc Final
ಝಾಹಿರ್ ಯೂಸುಫ್
|

Updated on: Aug 31, 2026 | 6:45 AM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025–2027ರ ಸರಣಿಯು ರೋಚಕ ಘಟ್ಟ ತಲುಪಿದೆ. ಕೊಲೊಂಬೊದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಆಡಿದ ದ್ವಿತೀಯ ಟೆಸ್ಟ್ ಪಂದ್ಯ ‘ಡ್ರಾ’ ನಲ್ಲಿ ಅಂತ್ಯಗೊಂಡ ಬೆನ್ನಲ್ಲೇ, ಫೈನಲ್ ತಲುಪುವ ತಂಡಗಳ ಸಮೀಕರಣ ಸಂಪೂರ್ಣ ಬದಲಾಗಿದೆ. ಪ್ರಸ್ತುತ ಅಂಕಪಟ್ಟಿಯ ಆಧಾರದ ಮೇಲೆ ಕೇವಲ ಐದು ತಂಡಗಳಿಗೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ಗೆ ತಲುಪಲು ನೇರ ಅವಕಾಶವಿದೆ. ಅದರಂತೆ ಯಾವ ತಂಡಗಳು ಫೈನಲ್​​ಗೇರಬಹುದು ಎಂದು ನೋಡುವುದಾದರೆ…

ಆಸ್ಟ್ರೇಲಿಯಾ (80.00% PCT): ಬಾಂಗ್ಲಾದೇಶ್ ವಿರುದ್ಧದ ಇನಿಂಗ್ಸ್ ಗೆಲುವಿನ ನಂತರ ಆಸ್ಟ್ರೇಲಿಯಾ ತಂಡವು ಅಂಕಪಟ್ಟಿಯಲ್ಲಿ ಅತ್ಯಂತ ಬಲಿಷ್ಠ ಸ್ಥಾನದಲ್ಲಿದೆ.

  • ಫೈನಲ್ ಹಾದಿ: ಆಸೀಸ್ ಪಡೆಗೆ ಇನ್ನು 12 ಟೆಸ್ಟ್ ಪಂದ್ಯಗಳು ಬಾಕಿ ಇವೆ. ಇವುಗಳಲ್ಲಿ ಕೇವಲ 5 ಗೆಲುವು ಮತ್ತು ಒಂದು ಡ್ರಾ ಸಾಧಿಸಿದರೂ ಅವರ PCT ಶೇ. 60ಕ್ಕಿಂತ ಹೆಚ್ಚಾಗಲಿದ್ದು, ಫೈನಲ್ ಹಾದಿ ಸುಲಭವಾಗಲಿದೆ. ಆದರೆ ಮುಂಬರುವ ದಿನಗಳಲ್ಲಿ ಆಸೀಸ್ ಪಡೆ ಸೌತ್ ಆಫ್ರಿಕಾ ಮತ್ತು ಭಾರತ ವಿರುದ್ಧ ಕಠಿಣ ಸವಾಲು ಎದುರಿಸಬೇಕಿದೆ.

ಸೌತ್ ಆಫ್ರಿಕಾ (75.00% PCT): ಕಡಿಮೆ ಪಂದ್ಯಗಳನ್ನು ಆಡಿದ್ದರೂ ಸೌತ್ ಆಫ್ರಿಕಾ ಅತ್ಯುತ್ತಮ ಪ್ರದರ್ಶನ ನೀಡಿದೆ. ಪಾಕಿಸ್ತಾನದಲ್ಲಿ ಡ್ರಾ ಹಾಗೂ ಭಾರತದ ವಿರುದ್ಧ 2-0 ಸರಣಿ ಗೆದ್ದಿರುವುದು ಇವರಿಗೆ ಪ್ಲಸ್ ಪಾಯಿಂಟ್ ಆಗಿದೆ

  • ಫೈನಲ್ ಹಾದಿ: ಸೌತ್ ಆಫ್ರಿಕಾ ಪಡೆಗೆ ಬಾಕಿ ಇರುವ 10 ಪಂದ್ಯಗಳಲ್ಲಿ 8 ಪಂದ್ಯಗಳು ತಾಯ್ನಾಡಿನಲ್ಲೇ ನಡೆಯಲಿವೆ. ಬಾಕಿ ಇರುವ ಪಂದ್ಯಗಳಲ್ಲಿ ಕನಿಷ್ಠ 6 ಅಥವಾ 7 ಪಂದ್ಯ ಗೆದ್ದರೆ ಸೌತ್ ಆಫ್ರಿಕಾ ಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ.

ನ್ಯೂಝಿಲೆಂಡ್ (72.22% PCT): ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಅಮೋಘ ಜಯ ಸಾಧಿಸಿರುವ ಕಿವೀಸ್ ಪಡೆ ಸದ್ದಿಲ್ಲದೆ ಮೂರನೇ ಸ್ಥಾನದಲ್ಲಿದೆ.

  • ಫೈನಲ್ ಹಾದಿ: ನ್ಯೂಝಿಲೆಂಡ್‌ಗೆ ಇನ್ನು 10 ಪಂದ್ಯಗಳು ಬಾಕಿ ಇವೆ. ತಾಯ್ನಾಡಿನಲ್ಲಿ ಶ್ರೀಲಂಕಾ ಮತ್ತು ಭಾರತದ ವಿರುದ್ಧ ನಡೆಯಲಿರುವ ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಕನಿಷ್ಠ ಒಂದೆರಡು ಪಂದ್ಯ ಗೆಲ್ಲಬೇಕಾದ ಅನಿವಾರ್ಯತೆ ಇವರಿಗಿದೆ.

ಬಾಂಗ್ಲಾದೇಶ್ (55.56% PCT): ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಪಂದ್ಯ ಗೆದ್ದು 1-1 ಸರಣಿ ಡ್ರಾ ಮಾಡಿಕೊಂಡಿರುವ ಬಾಂಗ್ಲಾದೇಶ ಇತಿಹಾಸ ಸೃಷ್ಟಿಸಲು ಕಾಯುತ್ತಿದೆ

  • ಫೈನಲ್ ಹಾದಿ: ಬಾಂಗ್ಲಾಗೆ ಇನ್ನು ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಇನ್ನುಳಿದ ಪಂದ್ಯಗಳಲ್ಲಿ ಕನಿಷ್ಠ 5 ಪಂದ್ಯಗಳನ್ನು ಗೆದ್ದರೆ ಮಾತ್ರ ಇವರು ರೇಸ್‌ನಲ್ಲಿ ಉಳಿಯಲಿದ್ದಾರೆ. ಇವರ ಮುಂದಿನ ಹಾದಿ ಅತ್ಯಂತ ಕಠಿಣವಾಗಿದೆ.

ಇದನ್ನೂ ಓದಿ: 47 ಎಸೆತಗಳಲ್ಲಿ ಪಂದ್ಯ ಮುಗಿಸಿದ ಶ್ರೀಲಂಕಾ!

ಭಾರತ (51.52% PCT): ಕೊಲೊಂಬೊದಲ್ಲಿ ಶ್ರೀಲಂಕಾ ವಿರುದ್ಧ ಗೆಲ್ಲಬೇಕಿದ್ದ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದರಿಂದ ಭಾರತಕ್ಕೆ ಭಾರಿ ಹಿನ್ನಡೆಯಾಗಿದೆ.

  • ಫೈನಲ್ ಹಾದಿ: ಶುಭ್‌ಮನ್ ಗಿಲ್ ನೇತೃತ್ವದ ಭಾರತ ತಂಡಕ್ಕೆ ಇನ್ನು ಕೇವಲ 7 ಟೆಸ್ಟ್ ಪಂದ್ಯಗಳು ಮಾತ್ರ ಬಾಕಿ ಇವೆ. ಇದರಲ್ಲಿ ನ್ಯೂಝಿಲೆಂಡ್ ವಿರುದ್ಧ 2 ಹಾಗೂ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಕನಿಷ್ಠ 6 ಮ್ಯಾಚ್ ಗೆಲ್ಲುವುದು ಅನಿವಾರ್ಯ. ಇನ್ನು ಒಂದಕ್ಕಿಂತ ಹೆಚ್ಚು ಪಂದ್ಯ ಸೋತರೆ ಭಾರತದ WTC ಫೈನಲ್ ಕನಸು ನುಚ್ಚುನೂರಾಗಲಿದೆ.
Follow Us
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..