AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2027: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಗೆ 3 ತಂಡಗಳ ಸೇರ್ಪಡೆ

World Test Championship: 2021 ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಭಾರತ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇನ್ನು 2023 ರಲ್ಲಿ ನಡೆದ ಫೈನಲ್​​ನಲ್ಲಿ ಭಾರತಕ್ಕೆ ಸೋಲುಣಿಸಿ ಆಸ್ಟ್ರೇಲಿಯನ್ನರು ಚಾಂಪಿಯನ್ ಪಟ್ಟಕ್ಕೇರಿದ್ದರು. 2025 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾಗೆ ಸೋಲುಣಿಸಿ ಸೌತ್ ಆಫ್ರಿಕಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.

WTC 2027: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಗೆ 3 ತಂಡಗಳ ಸೇರ್ಪಡೆ
Wtc 2027
ಝಾಹಿರ್ ಯೂಸುಫ್
|

Updated on: Nov 12, 2025 | 11:54 AM

Share

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಗೆ ಮೂರು ತಂಡಗಳನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ಇರುವ 9 ತಂಡಗಳೊಂದಿಗೆ ಅಫ್ಘಾನಿಸ್ತಾನ್, ಝಿಂಬಾಬ್ವೆ ಹಾಗೂ ಐರ್ಲೆಂಡ್ ತಂಡಗಳು ಕೂಡ 2027 ರಿಂದ ಶುರುವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಕಣಕ್ಕಿಳಿಯಲಿದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.

2025 ರಿಂದ 2027 ರ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 9 ತಂಡಗಳೇ ಕಣಕ್ಕಿಳಿಯುತ್ತಿದ್ದು, ಇದಾಗ್ಯೂ ಐದನೇ ಸೀಸನ್​ಗೆ (WTC 2027) ಮೂರು ತಂಡಗಳನ್ನು ಸೇರ್ಪಡೆಗೊಳಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಅಫ್ಘಾನಿಸ್ತಾನ್, ಐರ್ಲೆಂಡ್ ಹಾಗೂ ಝಿಂಬಾಬ್ವೆ ತಂಡಗಳು ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಆಡಲಿದೆ.

ಏನಿದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ​?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಎಂಬುದು ಟೆಸ್ಟ್ ತಂಡಗಳ ನಡುವಣ ಐಸಿಸಿ ಕ್ರಿಕೆಟ್ ಪಂದ್ಯಾವಳಿ. 2021 ರಿಂದ ಶುರುವಾದ ಈ ಸರಣಿಯಲ್ಲಿ ಫೈನಲ್ ಪಂದ್ಯದ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಸದ್ಯ 9 ಟೆಸ್ಟ್ ಆಡುವ ರಾಷ್ಟ್ರಗಳು ಈ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಎರಡು ಸ್ಥಾನ ಪಡೆಯುವ ತಂಡಗಳು ಫೈನಲ್ ಆಡಲಿದೆ.

ಆದರೆ ಇಲ್ಲಿ ಗೆಲುವಿನ ಶೇಕಡಾವಾರು (ಪರ್ಸಂಟೇಜ್) ಮೇಲೆ ಪಾಯಿಂಟ್ಸ್​ ಟೇಬಲ್​ನಲ್ಲಿ ಸ್ಥಾನ ನಿರ್ಧಾರವಾಗುತ್ತದೆ. ಅದರಂತೆ ಗೆಲುವುಗಳ ಸಂಖ್ಯೆ, ಡ್ರಾ ಪಂದ್ಯಗಳ ಸಂಖ್ಯೆ ಕೂಡ ಇಲ್ಲಿ ಗಣನೆಗೆ ಬರಲಿದೆ. ಇದರಿಂದ ಹೆಚ್ಚು ಪಂದ್ಯ ಗೆದ್ದ ತಂಡ ಅಧಿಕ ಪಾಯಿಂಟ್ ಪಡೆದರೂ, ಗೆಲುವು ಹಾಗೂ ಡ್ರಾ ಸಾಧಿಸಿದ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಅವಕಾಶವಿದೆ.

ಅಂದರೆ ಇಲ್ಲಿ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ. ಇದರಿಂದ ಸರಣಿಗಳ ಪಂದ್ಯಾವಳಿಯ ಲೆಕ್ಕಚಾರ ಸಮಗೊಳ್ಳಲಿದೆ. ಇಲ್ಲಿ ಗೆದ್ದ ಪಂದ್ಯಗಳಿಗೆ ಮತ್ತು ಡ್ರಾ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ಪಾಯಿಂಟ್ಸ್​ ಟೇಬಲ್​ನಲ್ಲಿ ರ್‍ಯಾಂಕ್ ಪಡೆದುಕೊಳ್ಳುತ್ತವೆ.

ಇದರಿಂದ ಪಂದ್ಯಗಳಿಗೆ ಅಥವಾ ಸರಣಿಗೆ ಅನುಸಾರವಾಗಿ ಶ್ರೇಯಾಂಕ ಪಟ್ಟಿ ಬದಲಾಗಬಹುದು. ಅಲ್ಲದೆ ಪಾಯಿಂಟ್ ಟೇಬಲ್​ನಲ್ಲೂ ಪಂದ್ಯಕ್ಕನುಸಾರವಾಗಿ ಪೈಪೋಟಿ ಕಂಡು ಬರಲಿದೆ. ಅಂತಿಮವಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡಲಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯು ಟೆಸ್ಟ್ ಪಂದ್ಯಗಳ ಒಂದು ಸೈಕಲ್ ಎಂಬುದು. ಅಂದರೆ ಈ ಹಿಂದಿನಂತೆ ಎಲ್ಲಾ ತಂಡಗಳು ಟೆಸ್ಟ್ ಸರಣಿಯನ್ನು ಆಡುತ್ತವೆ. ಆದರೆ ಈ ಸರಣಿಗಳ ಪಂದ್ಯಗಳ ಗೆಲುವು, ಸೋಲು ಮತ್ತು ಡ್ರಾಗಳ ಲೆಕ್ಕಾಚಾರಗಳನ್ನು ಮಾತ್ರ ಐಸಿಸಿ ತೆಗೆದುಕೊಳ್ಳುತ್ತದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​ಗಳಲ್ಲಿ ತಂಡಗಳ ಸ್ಥಾನಗಳನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ಅನಗತ್ಯ ದಾಖಲೆ ಸರಿಗಟ್ಟಿದ ಬಾಬರ್ ಆಝಂ

ಹಾಗೆಯೇ ಈ ಸರಣಿಗಳನ್ನು ಆಯಾ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಾರೆ. ಆದರೆ ಫೈನಲ್ ಪಂದ್ಯವನ್ನು ಆಯೋಜಿಸುವುದು ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಗಳನ್ನು ಆಯಾ ಕ್ರಿಕೆಟ್ ಬೋರ್ಡ್ ಆಯೋಜಿಸಿದರೂ, ಚಾಂಪಿಯನ್ ಪಟ್ಟಕ್ಕಾಗಿ ನಡೆಯಲಿರುವ ಫೈನಲ್ ಪಂದ್ಯದ ಆಯೋಜನೆಯ ಹಕ್ಕು ಐಸಿಸಿ ಬಳಿ ಇದೆ. ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯನ್ನು ಸಹ ಐಸಿಸಿ ಟೂರ್ನಿ ಎಂದು ಪರಿಗಣಿಸಲಾಗುತ್ತಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಕಣಕ್ಕಿಳಿಯುವ ತಂಡಗಳು:

  1. ಭಾರತ
  2. ಪಾಕಿಸ್ತಾನ್
  3. ಆಸ್ಟ್ರೇಲಿಯಾ
  4. ನ್ಯೂಝಿಲೆಂಡ್
  5. ಶ್ರೀಲಂಕಾ
  6. ಬಾಂಗ್ಲಾದೇಶ್
  7. ವೆಸ್ಟ್ ಇಂಡೀಸ್
  8. ಇಂಗ್ಲೆಂಡ್
  9. ಸೌತ್ ಆಫ್ರಿಕಾ
  10. ಝಿಂಬಾಬ್ವೆ (2027 ರಿಂದ)
  11. ಅಫ್ಘಾನಿಸ್ತಾನ್ (2027 ರಿಂದ)
  12. ಐರ್ಲೆಂಡ್ (2027 ರಿಂದ)
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು