AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಆಸೀಸ್ ಎದುರು ಐಪಿಎಲ್​ ಹೀರೋ ಗಿಲ್ ಆಟ ನಡೆಯಲ್ಲ ಎಂದ ಟೀಂ ಇಂಡಿಯಾ ಮಾಜಿ ಕೋಚ್!

WTC Final 2023: ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಟೀಂ ಇಂಡಿಯಾದ ಮಾಜಿ ಕೋಚ್ ಗ್ರೆಗ್ ಚಾಪೆಲ್, ಆಸ್ಟ್ರೇಲಿಯಾ ವಿರುದ್ಧ ಅದೂ ಇಂಗ್ಲೆಂಡ್ ನೆಲದಲ್ಲಿ ಗಿಲ್ ಆಟ ನಡೆಯಲ್ಲ ಎಂದು ಹೇಳುವ ಮೂಲಕ ಯುವ ಬ್ಯಾಟರ್​ನ ಬ್ಯಾಟಿಂಗ್ ಕ್ಷಮತೆಯನ್ನು ಪ್ರಶ್ನಿಸಿದ್ದಾರೆ.

WTC Final 2023: ಆಸೀಸ್ ಎದುರು ಐಪಿಎಲ್​ ಹೀರೋ ಗಿಲ್ ಆಟ ನಡೆಯಲ್ಲ ಎಂದ ಟೀಂ ಇಂಡಿಯಾ ಮಾಜಿ ಕೋಚ್!
ಶುಭ್​ಮನ್ ಗಿಲ್
ಪೃಥ್ವಿಶಂಕರ
|

Updated on: Jun 04, 2023 | 11:44 AM

Share

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship ) ಫೈನಲ್‌ಗೆ ಮೂರು ದಿನಗಳು ಬಾಕಿ ಉಳಿದಿವೆ. ಆಸ್ಟ್ರೇಲಿಯಾ ಹಾಗೂ ಭಾರತ (India vs Australia) ನಡುವಿನ ಅಂತಿಮ ಪಂದ್ಯ ಜೂನ್ 7 ರಿಂದ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಕೆಲ ಆಟಗಾರರ ಪ್ರದರ್ಶನದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದರಲ್ಲಿ ಭಾರತದ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ (Shubman Gill) ಹೆಸರೂ ಸೇರಿದೆ. ಆದಾಗ್ಯೂ, ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಟೀಂ ಇಂಡಿಯಾದ ಮಾಜಿ ಕೋಚ್ ಗ್ರೆಗ್ ಚಾಪೆಲ್ (Greg Chappell), ಆಸ್ಟ್ರೇಲಿಯಾ ವಿರುದ್ಧ ಅದೂ ಇಂಗ್ಲೆಂಡ್ ನೆಲದಲ್ಲಿ ಗಿಲ್ ಆಟ ನಡೆಯಲ್ಲ ಎಂದು ಹೇಳುವ ಮೂಲಕ ಯುವ ಬ್ಯಾಟರ್​ನ ಬ್ಯಾಟಿಂಗ್ ಕ್ಷಮತೆಯನ್ನು ಪ್ರಶ್ನಿಸಿದ್ದಾರೆ.

ವಾಸ್ತವವಾಗಿ ಹೇಳಬೇಕೆಂದರೆ 2023 ಶುಭ್​ಮನ್​ ಗಿಲ್ ವೃತ್ತಿ ಜೀವನದ ದಿಕ್ಕನೇ ಬದಲಿಸಿದ ವರ್ಷವಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕ ಹಾಗೂ ದ್ವಿಶತಕವನ್ನು ಬಾರಿಸುವುದರೊಂದಿಗೆ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಂಡಿರುವ ಗಿಲ್, ಇತ್ತೀಚೆಗೆ ಮುಕ್ತಾಯಗೊಂಡ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ಅನ್ನು ಸಹ ಗೆದ್ದರು. ಹೀಗಾಗಿ ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗಕ್ಕೆ ಗಿಲ್ ಪ್ರಮುಖ ಅಸ್ತ್ರ ಎಂಬುದು ವಿಶ್ವಿ ಕ್ರಿಕೆಟ್ ಪಂಡಿತರ ವಾದವಾಗಿದೆ. ಆದರೆ ಈ ವಾದವನ್ನು ಅಲ್ಲಗಳೆದಿರುವ ಚಾಪೆಲ್, ಡಬ್ಲ್ಯುಟಿಸಿ ಫೈನಲ್​ನಲ್ಲಿ ಗಿಲ್ ಆಟ ನಡೆಯುವುದಿಲ್ಲ. ಆತನಿಗೆ ಆಸೀಸ್ ಬೌಲರ್‌ಗಳನ್ನು ಎದುರಿಸುವ ತಂತ್ರ ಗೊತ್ತಿಲ್ಲ ಎಂದಿದ್ದಾರೆ.

WTC Final 2023: ಡಬ್ಲ್ಯುಟಿಸಿ ಫೈನಲ್​ನಲ್ಲಿ ಧೋನಿ ದಾಖಲೆ ಮುರಿಯಲಿದ್ದಾರೆ ಕೊಹ್ಲಿ- ರೋಹಿತ್..!

ಆರಂಭದಲ್ಲೇ ಕಟ್ಟಿ ಹಾಕಬಹುದು

ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಗ್ರೆಗ್ ಚಾಪೆಲ್, ನಾನು ಶುಭ್​ಮನ್ ಗಿಲ್ ಬಗ್ಗೆ ಹೆಚ್ಚು ವಿವರವಾಗಿ ಹೇಳಲು ಬಯಸುವುದಿಲ್ಲ. ಈಗಾಗಲೇ ಆಸ್ಟ್ರೇಲಿಯಾ ತಂಡ ಗಿಲ್ ಬಗ್ಗೆ ಅಧ್ಯಯನ ನಡೆಸಿದೆ ಎಂಬುದು ನನಗೆ ಖಾತ್ರಿಯಿದೆ. ಆದರೆ ನಾನು ಗಿಲ್ ಬಗ್ಗೆ ಹೇಳಬೇಕೆಂದರೆ, ಈ ಯುವ ಆರಂಭಿಕ ಆಟಗಾರನಿಗೆ ತಮ್ಮ ಇನ್ನಿಂಗ್ಸ್‌ನ ಆರಂಭಿಕ ಹಂತದಲ್ಲಿ, ಆಫ್ ಸ್ಟಂಪ್‌ನ ಹೊರಗೆ ಹೋಗುವ ಚೆಂಡುಗಳನ್ನು ಎದುರಿಸುವುದು ಕಷ್ಟಕರ ಎಂಬುದು ಸಾಕಷ್ಟು ಬಾರಿ ಸಾಭೀತಾಗಿದೆ. ಅಲ್ಲದೆ ಚೆಂಡು ಸ್ವಲ್ಪ ಹೆಚ್ಚುವರಿ ಬೌನ್ಸ್ ತೆಗೆದುಕೊಂಡರೆ, ಗಿಲ್ ತೊಂದರೆಗೆ ಒಳಗಾಗುವ ಸಾಧ್ಯತೆಗಳಿವೆ. ಆದರೆ, ಅವರೊಬ್ಬ ಉತ್ತಮ ಆಟಗಾರ ಎನ್ನುವುದರಲ್ಲಿ ಎರಡು ಮಾತಿಲ್ಲ. ಒಂದು ವೇಳೆ ಆಸೀಸ್ ವೇಗಿಗಳು ಗಿಲ್​ ವೀಕ್ ಇರುವ ಜಾಗದಲ್ಲಿ ಬೌಲಿಂಗ್ ಮಾಡದಿದ್ದರೆ, ಆತ ತುಂಬಾ ಅಪಾಯಕಾರಿಯಾಗಲಿದ್ದಾನೆ ಎಂದು ಚಾಪೆಲ್ ಹೇಳಿದ್ದಾರೆ.

ಮಿಚೆಲ್ ಸ್ಟಾರ್ಕ್ ಎದುರು ಗಿಲ್‌ ಆಟ ನಡೆಯಲ್ಲ

ಮುಂದುವರೆದು ಮಾತನಾಡಿದ ಚಾಪೆಲ್, ಗಿಲ್ ಈಗಾಗಲೇ ಇಂಗ್ಲೆಂಡ್ ಪ್ರವಾಸ ಮಾಡಿದ್ದಾರೆ. ಅಲ್ಲಿ ಅವರ ಪ್ರದರ್ಶನ ಹೇಳಿಕೊಳ್ಳುವಂತೆನ್ನಿಲ್ಲ. ಹೀಗಾಗಿ ಆಸ್ಟ್ರೇಲಿಯಾದ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿದರೆ, ಗಿಲ್ ಇಂಗ್ಲಿಷ್ ಪರಿಸ್ಥಿತಿಗಳಲ್ಲಿ ಕಷ್ಟಪಡುವುದನ್ನು ಕಾಣಬಹುದು. ವಿಶೇಷವಾಗಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಎದುರಿಸುವಲ್ಲಿ ಗಿಲ್ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚುವರಿ ವೇಗ ಮತ್ತು ಬೌನ್ಸ್‌ಗೆ ಹೆಸರುವಾಸಿಯಾಗಿರುವ ಸ್ಟಾರ್ಕ್, ಗಿಲ್​ಗೆ ತೊಂದರೆಕೊಡುವುದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್