WTC Final: ಒಂದೇ ಪಂದ್ಯಕ್ಕೆ ಸುಸ್ತು; ಡಬ್ಲ್ಯುಟಿಸಿ ಪೈನಲ್​ನಿಂದ ಸೂರ್ಯಕುಮಾರ್ ಔಟ್..!

WTC Final: ಮಧ್ಯಮ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ಬಲವಾಗಿದ್ದ ಸೂರ್ಯರನ್ನು ಕೈಬಿಟ್ಟಿದ್ದು, ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ.

WTC Final: ಒಂದೇ ಪಂದ್ಯಕ್ಕೆ ಸುಸ್ತು; ಡಬ್ಲ್ಯುಟಿಸಿ ಪೈನಲ್​ನಿಂದ ಸೂರ್ಯಕುಮಾರ್ ಔಟ್..!
ಸೂರ್ಯಕುಮಾರ್ ಯಾದವ್
Follow us
ಪೃಥ್ವಿಶಂಕರ
|

Updated on:Apr 25, 2023 | 3:34 PM

ಟೆಸ್ಟ್ ವಿಶ್ವಕಪ್​ಗೆ ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ನಿರೀಕ್ಷೆಯಂತೆ ಟೀಂ ಇಂಡಿಯಾ (Team India) 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಐಪಿಎಲ್ ಮುಗಿದ ಕೂಡಲೇ ಆಸ್ಟ್ರೇಲಿಯಾ ವಿರುದ್ಧ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಜೂನ್ 7 ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ (World Test Championship final) ನಡೆಯಲಿದೆ. ಈ ಹಿಂದೆಯೇ ಹೇಳಿದಂತೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿದಿದ್ದ ಭಾಗಶಃ ತಂಡವನ್ನೇ ಡಬ್ಲ್ಯುಟಿಸಿ ಫೈನಲ್​ಗೆ ಕಣಕ್ಕಿಳಿಸಿದೆ. ಆದರೆ ಒಂದು ಪ್ರಮುಖ ಬದಲಾವಣೆ ಎಂದರೆ ಟೀಂ ಇಂಡಿಯಾದ ಮಾಜಿ ಉಪನಾಯಕ ಅಜಿಂಕ್ಯ ರಹಾನೆ (Ajinkya Rahane) ತಂಡಕ್ಕೆ ಮರಳಿದ್ದು, ಅವರು ಇಂಜುರಿಗೊಂಡಿರುವ ಶ್ರೇಯಸ್ ಅಯ್ಯರ್ (Shreyas Iyer) ಸ್ಥಾನವನ್ನು ತುಂಬಲಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಭಾರತಕ್ಕೆ ಆಘಾತವೆಂಬಂತೆ ತಂಡದ ಬೌಲಿಂಗ್ ವಿಭಾಗದ ಬೆನ್ನೆಲುಬಾಗಿದ್ದ ಜಸ್ಪ್ರೀತ್ ಬುಮ್ರಾ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಇವರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ಬಲವಾಗಿದ್ದ ಸೂರ್ಯರನ್ನು (Suryakumar Yadav) ಕೈಬಿಟ್ಟಿದ್ದು, ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ.

ವಾಸ್ತವವಾಗಿ ಸೂರ್ಯಕುಮಾರ್ ಯಾದವ್​ರನ್ನು ತಂಡದ ಮಧ್ಯಮ ಕ್ರಮಾಂಕದಲ್ಲಿ ಎಕ್ಸ್ ಫ್ಯಾಕ್ಟರ್ ಎಂದು ಪರಿಗಣಿಸಲಾಗಿತ್ತು. ತನ್ನ 360 ಡಿಗ್ರಿ ಆಟದಿಂದ ಯಾವುದೇ ಬೌಲರ್‌ನ ಲೈನ್ ಲೆಂಗ್ತ್ ಅನ್ನು ಹಾಳು ಮಾಡುವ ಸಾಮಥ್ಯ್ರವಿರುವ ಸೂರ್ಯರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತುಂಬಾ ಉತ್ಸುಕವಾಗಿತ್ತು. ಆದರೆ ಈಗ ಅದೇ ಸೂರ್ಯಕುಮಾರ್ ಯಾದವ್‌ರನ್ನು ಮ್ಯಾನೇಜ್​ಮೆಂಟ್ ತಿರಸ್ಕರಿಸಿದೆ.

IPL 2023: ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಹೊಡೆಸಿಕೊಂಡ ಬೌಲರ್ ಯಾರು ಗೊತ್ತಾ?

ಸೂರ್ಯನ ಮೇಲಿಲ್ಲ ನಂಬಿಕೆ

ಈ ಹಿಂದೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ನಡೆದ ಟೆಸ್ಟ್‌ನಲ್ಲಿ ಸೂರ್ಯಕುಮಾರ್ ಯಾದವ್‌ಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಆ ಪಂದ್ಯದಲ್ಲಿ ವಿಶೇಷವೆನ್ನನ್ನು ಮಾಡದ ಸೂರ್ಯ ಕೇವಲ 8 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದರು. ಈ ಪಂದ್ಯದ ನಂತರ, ಸೂರ್ಯರನ್ನು ಮುಂದಿನ ಮೂರು ಟೆಸ್ಟ್ ಪಂದ್ಯಗಳಿಂದ ತಂಡದಿಂದ ಕೈಬಿಡಲಾಗಿತ್ತು. ಈಗ ಪ್ರಶ್ನೆ ಏನೆಂದರೆ, ಟಿ20 ಮಾದರಿಯಲ್ಲಿ ನಂಬರ್ 1 ಬ್ಯಾಟರ್ ಆಗಿರುವ ಸೂರ್ಯರನ್ನು ಕೇವಲ ಒಂದೇ ಪಂದ್ಯಕ್ಕೆ ಸೀಮಿತಗೊಳಿಸಿದ್ಯಾಕೆ ಎಂಬುದು. ಸಾಮಾನ್ಯವಾಗಿ ಟೀಂ ಇಂಡಿಯಾ ಮ್ಯಾನೇಜ್​ಮೆಂಟ್ ಯಾವುದೇ ಆಟಗಾರನಿಗೆ ಸತತ ಅವಕಾಶಗಳನ್ನು ನೀಡುತ್ತಾ ಆತನ ಪ್ರತಿಭೆಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತದೆ. ಆದರೆ ಸೂರ್ಯಕುಮಾರ್ ಯಾದವ್ ವಿಚಾರದಲ್ಲಿ ಮಾತ್ರ ಹೀಗಾಗಿಲ್ಲ.

ಸೂರ್ಯಕುಮಾರ್​ಗೆ ಅವಕಾಶ ಸಿಗಬೇಕಿತ್ತು

ಬೆನ್ನುನೋವಿನ ಕಾರಣದಿಂದಾಗಿ ಶ್ರೇಯಸ್ ಅಯ್ಯರ್ ಕೆಲವು ತಿಂಗಳುಗಳ ಕಾಲ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಿಂದ ಹೊರಗಿಡಲಾಗಿತ್ತು. ಆಗಿನಿಂದಲೂ ಅಯ್ಯರ್ ಸ್ಥಾನಕ್ಕೆ ಸೂರ್ಯ ಎಂಟ್ರಿ ಗ್ಯಾರಂಟಿ ಎಂತಲೇ ಹೇಳಲಾಗುತ್ತಿತ್ತು. ಆದರೆ ಟೀಂ ಇಂಡಿಯಾ ಅಜಿಂಕ್ಯ ರಹಾನೆ ಮೇಲೆ ನಂಬಿಕೆ ಇಟ್ಟಿದ್ದು, ಅಯ್ಯರ್ ಬದಲಿಗೆ ತಂಡದಲ್ಲಿ ಸ್ಥಾನ ನೀಡಿದೆ. ಅಂದಹಾಗೆ, ರಹಾನೆ ರಣಜಿ ಟ್ರೋಫಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ಸದ್ಯ ನಡೆಯುತ್ತಿರುವ ಐಪಿಎಲ್​ನಲ್ಲೂ ರನ್ ಮಳೆ ಹರಿಸುತ್ತಿದ್ದಾರೆ. ಹೀಗಾಗಿ ರಹಾನೆಗೆ ಅವಕಾಶ ನೀಡಿದ್ದರಲ್ಲಿ ತಪ್ಪಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಏಕಾಂಗಿಯಾಗಿ ತಂಡದ ಗತಿಯನ್ನೇ ಬದಲಿಸುವ ಸಾಮಥ್ರ್ಯವಿರುವ ಸೂರ್ಯನಿಗೆ ಮಾತ್ರ ನಾಗ್ಪುರ ಟೆಸ್ಟ್‌ ಬಳಿಕ ಮತ್ತೊಂದು ಅವಕಾಶ ಏಕೆ ನೀಡಲಿಲ್ಲ ಎಂಬುದು ಪ್ರಶ್ನೆಯಾಗಿದೆ.

ವಾಸ್ತವವಾಗಿ ಈ ಹಿಂದಿನ ಇಂಗ್ಲೆಂಡ್​ ಪ್ರವಾಸವನ್ನು ಗಮನಿಸುವುದಾದರೆ, ಆಂಗ್ಲರ ನೆಲದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕ ಒಮ್ಮೊಮ್ಮೆ ರನ್ ಗಳಿಸಲು ಹಾಗೂ ಉತ್ತಮ ಜೊತೆಯಾಟ ನಡೆಸುವಲ್ಲಿ ಎಡುವುದನ್ನು ಕಂಡಿದ್ದೇವೆ. ಅಲ್ಲದೆ ಮೊದಲ ಸೆಷನ್‌ನಲ್ಲಿ ಸರಾಸರಿ 2 ರಿಂದ 3 ವಿಕೆಟ್‌ಗಳು ಬೀಳುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ವೇಗದ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಬ್ಯಾಟ್ಸ್‌ಮನ್‌ ತಂಡದಲ್ಲಿರುವುದು ಬಹಳ ಮುಖ್ಯ. ಈ ಹಿಂದೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ತಂಡಕ್ಕಾಗಿ ಇದೇ ಕೆಲಸ ಮಾಡುತ್ತಿದ್ದರು. ಇದೀಗ ಪಂತ್ ಅಲಭ್ಯತೆಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಪಾತ್ರವನ್ನು ನಿರ್ವಹಿಸಬಹುದಿತ್ತು. ಆದರೆ ಆಯ್ಕೆಗಾರರು ಅವರ ಮೇಲೆ ನಂಬಿಕೆ ಇಟ್ಟಿಲ್ಲದಿರುವುದು ಟೀಂ ಇಂಡಿಯಾಕ್ಕೆ ಕೊಂಚ ಹಿನ್ನಡೆಯುಂಟು ಮಾಡಿದೆ.

ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Tue, 25 April 23

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ