Breaking News: ಡಬ್ಲ್ಯುಟಿಸಿ ಫೈನಲ್​ಗೆ ಅಧಿಕೃತವಾಗಿ ಎಂಟ್ರಿಕೊಟ್ಟ ಟೀಂ ಇಂಡಿಯಾ..!

WTC Final 2023: ಅಂತಿಮವಾಗಿ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟಿಕೆಟ್ ಪಡೆದುಕೊಂಡಿದೆ.

Breaking News: ಡಬ್ಲ್ಯುಟಿಸಿ ಫೈನಲ್​ಗೆ ಅಧಿಕೃತವಾಗಿ ಎಂಟ್ರಿಕೊಟ್ಟ ಟೀಂ ಇಂಡಿಯಾ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Mar 13, 2023 | 12:56 PM

ಅಂತಿಮವಾಗಿ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ (World Test Championship final) ಅಧಿಕೃತವಾಗಿ ಟಿಕೆಟ್ ಪಡೆದುಕೊಂಡಿದೆ. ನ್ಯೂಜಿಲೆಂಡ್​ನ ಕ್ರೈಸ್ಟ್‌ಚರ್ಚ್​ನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ (Sri Lanka Vs New Zealand) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಕಿವೀಸ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾದ (Team India) ಫೈನಲ್ ಹಾದಿಯನ್ನು ಸುಗಮಗೊಳಿಸಿದೆ. ವಾಸ್ತವವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ಪೈಪೋಟಿ ಏರ್ಪಟ್ಟಿತ್ತು. ಈಗಾಗಲೇ ಆಸ್ಟ್ರೇಲಿಯಾ (Australia) ಫೈನಲ್​ಗೆ ಎಂಟ್ರಿಕೊಟ್ಟಿದ್ದು, ಎರಡನೇ ಫೈನಲಿಸ್ಟ್​ ಆಗಲು ಇಂಡಿಯಾ ಹಾಗೂ ಲಂಕಾ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹೀಗಾಗಿ ಇಂಡಿಯಾ ನೇರವಾಗಿ ಫೈನಲ್ಗೇರಬೇಕಿದ್ದರೆ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಥವಾ 3-1 ಅಂತರದಿಂದ ಗೆಲ್ಲಬೇಕಾಗಿತ್ತು.​ ಆದರೆ ಅಂತಿಮ ಟೆಸ್ಟ್ ಪಂದ್ಯ ಡ್ರಾದತ್ತ ಸಾಗಿರುವುದರಿಂದ ಭಾರತಕ್ಕೆ ಲಂಕಾ ಸೋಲುವುದು ಅನಿವಾರ್ಯವಾಗಿತ್ತು. ಇತ್ತ ಲಂಕಾ ಫೈನಲ್​ಗೇರಲು ನ್ಯೂಜಿಲೆಂಡ್ ವಿರುದ್ಧದ ಎರಡೂ ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಿತ್ತು.

ಆದರೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ರೋಚಕ ಸೋಲು ಅನುಭವಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಿಂದ ಹೊರಬಿದ್ದಿದೆ. ಹೀಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯ ಡ್ರಾಗೊಂಡರು ಸಹ ಭಾರತ, ಫೈನಲ್​ಗೇರುವಲ್ಲಿ ಯಾವುದೇ ಅಡೆತಡೆಗಳಿಲ್ಲದಂತ್ತಾಗಿದೆ. ಇದೀಗ ಫೈನಲ್​ಗೇರುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದ ಸಾಧನೆ ಮಾಡಿದೆ.

IND vs AUS: ಪಂದ್ಯದ ನಡುವೆ ಭಾರತಕ್ಕೆ ಬಿಗ್ ಶಾಕ್; ತಂಡದಿಂದ ಹೊರಬಿದ್ದ ಶ್ರೇಯಸ್ ಅಯ್ಯರ್!

2021 ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಿದ್ದವು. ಆದರೆ ಆ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳಿಂದ ಸೋಲು ಅನುಭವಿಸಬೇಕಾಯಿತು. ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ಅವಕಾಶ ಟೀಂ ಇಂಡಿಯಾಗೆ ಸಿಕ್ಕಿದೆ.

ಭಾರತದ ಫೈನಲ್ ಪಯಣ ಹೇಗಿತ್ತು?

  1. ಇಂಗ್ಲೆಂಡ್ ವಿರುದ್ಧದ ಸರಣಿ 2-2ರಲ್ಲಿ ಡ್ರಾ ಆಗಿತ್ತು.
  2. ತವರಿನಲ್ಲಿ ಭಾರತ 1-0 ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು.
  3. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಸರಣಿ ಸೋತಿತ್ತು
  4. ಭಾರತ 2-0 ಅಂತರದಿಂದ ಶ್ರೀಲಂಕಾವನ್ನು ಸೋಲಿಸಿತು
  5. ಭಾರತ 2-0 ಅಂತರದಿಂದ ಬಾಂಗ್ಲಾದೇಶವನ್ನು ಸೋಲಿಸಿತು.
  6. ಪ್ರಸ್ತುತ ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿದೆ.

ನ್ಯೂಜಿಲೆಂಡ್​ಗೆ ರೋಚಕ ಜಯ

ವಾಸ್ತವವಾಗಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾ ಗೆಲ್ಲುವ ಅವಕಾಶ ಹೊಂದಿತ್ತು. ಆದರೆ ಪಂದ್ಯದ ಕೊನೆಯ ದಿನದಂದು ಮಳೆ ಸುರಿದಿದ್ದರಿಂದ ಮೊದಲ ಸೆಷನ್‌ನ ಆಟ ಸಂಪೂರ್ಣವಾಗಿ ರದ್ದಾಯಿತು. ಅಂತಿಮವಾಗಿ ಶ್ರೀಲಂಕಾ, ನ್ಯೂಜಿಲೆಂಡ್‌ಗೆ 285 ರನ್‌ಗಳ ಗೆಲುವಿನ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆಯ ಆರಂಭಿಕ 3 ವಿಕೆಟ್​ಗಳನ್ನು ಬೇಗನೆ ಉರುಳಿಸುವ ಮೂಲಕ ಶ್ರೀಲಂಕಾ, ಆತಿಥೇಯರಿಗೆ ಆಘಾತ ನೀಡಿತ್ತು. ಆದರೆ ಆ ಬಳಿಕ ಜೊತೆಯಾದ ಕೇನ್ ವಿಲಿಯಮ್ಸನ್ ಮತ್ತು ಡ್ಯಾರೆಲ್ ಮಿಚೆಲ್ ಜೋಡಿ ಇಡೀ ಪಂದ್ಯದ ದಿಕ್ಕನೇ ಬದಲಿಸಿತು.

ಅಜೇಯ 121 ರನ್ ಗಳಿಸಿದ ನಾಯಕ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಗೆಲುವಿನ ಹೀರೋ ಎನಿಸಿಕೊಂಡರು. ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ಡ್ಯಾರೆಲ್ ಮಿಚೆಲ್ ಎರಡನೇ ಇನಿಂಗ್ಸ್‌ನಲ್ಲಿ 86 ಎಸೆತಗಳಲ್ಲಿ 81 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ 1-0 ಅಂತರದ ಮುನ್ನಡೆ ಸಾಧಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Mon, 13 March 23

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ