ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗೆ ಅಗ್ರಸ್ಥಾನ ಅಲಂಕರಿಸುವ ಮೂಲಕ ಭಾರತ ತಂಡವು WTC ಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ತಂಡವನ್ನು ಮುಂದಿನ ಮೂರು ಪಂದ್ಯಗಳಲ್ಲಿ ಸೋಲಿಸಿ, ಒಂದು ಮ್ಯಾಚ್ ಅನ್ನು ಡ್ರಾ ಮಾಡಿಕೊಂಡರೆ ಭಾರತ ತಂಡವು ನೇರವಾಗಿ ಫೈನಲ್ಗೇರಬಹುದು.
ಅತ್ತ ನ್ಯೂಝಿಲೆಂಡ್ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ವಿಜಯ ಸಾಧಿಸಿದರೂ, ಮೊದಲ ಅಥವಾ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ.
ಅಂದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.
ಹಾಗೆಯೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿ, 1 ಪಂದ್ಯವನ್ನು ಡ್ರಾ ಮಾಡಿಕೊಂಡರೆ WTC ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬಹುದು.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-3 ಅಂತರದಿಂದ ಸೋತರೆ, ಉಳಿದ ತಂಡಗಳ ಸರಣಿಯ ಫಲಿತಾಂಶಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಲಿದೆ.
ಇಲ್ಲಿ ನ್ಯೂಝಿಲೆಂಡ್-ಇಂಗ್ಲೆಂಡ್ ನಡುವಣ ಸರಣಿಯು 1-1 ಅಂತರದಲ್ಲಿ ಅಂತ್ಯಗೊಳ್ಳಬೇಕು. ಹಾಗೆಯೇ ಸೌತ್ ಆಫ್ರಿಕಾ-ಶ್ರೀಲಂಕಾ/ಪಾಕಿಸ್ತಾನ್ ನಡುವಣ ಸರಣಿಯು 1-1 ಅಂತರದಲ್ಲಿ ಕೊನೆಗೊಳ್ಳಬೇಕು. ಅದೇ ರೀತಿ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಸರಣಿಯು 0-0 ಅಂತರದಿಂದ ಡ್ರಾಗೊಳ್ಳಬೇಕು.
ಹೀಗಾದಲ್ಲಿ ಆಸ್ಟ್ರೇಲಿಯಾ ತಂಡವು 58.77 ಶೇಕಡಾವಾರು ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಲಿದೆ. ಹಾಗೆಯೇ ಟೀಮ್ ಇಂಡಿಯಾ 53.51% ಅಂಕಗಳೊಂದಿಗೆ ದ್ವಿತೀಯ ಸ್ಥಾನದೊಂದಿಗೆ ಫೈನಲ್ಗೆ ಅರ್ಹತೆ ಪಡೆಯಲಿದೆ.
ಇದನ್ನೂ ಓದಿ: IPL 2025: ಐಪಿಎಲ್ ಅಖಾಡದಲ್ಲಿ 13 ಕನ್ನಡಿಗರು
ಅಂದರೆ ಇಲ್ಲಿ ಟೀಮ್ ಇಂಡಿಯಾ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಇಲ್ಲದಿದ್ದರೆ ಉಳಿದ ತಂಡಗಳ ಫಲಿತಾಂಶಗಳ ಮೇಲೆ ಭಾರತ ತಂಡದ WTC ಫೈನಲ್ ಭವಿಷ್ಯ ನಿರ್ಧಾರವಾಗಲಿದೆ.