AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2025 final: ಒಂದೇ ಓವರ್​ನಲ್ಲಿ 2 ವಿಕೆಟ್; ಕಗಿಸೊ ರಬಾಡ ಆ್ಯಕ್ಷನ್ ರಿಪ್ಲೈ

WTC 2025 final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮೊದಲ ಮತ್ತು ಎರಡನೇ ಇನ್ನಿಂಗ್ಸ್‌ಗಳಲ್ಲಿ ಉಸ್ಮಾನ್ ಖವಾಜಾ ಮತ್ತು ಕ್ಯಾಮರೂನ್ ಗ್ರೀನ್ ಅವರನ್ನು ಒಂದೇ ರೀತಿಯಲ್ಲಿ ಔಟ್ ಮಾಡುವ ಮೂಲಕ ಅವರು ಆಸ್ಟ್ರೇಲಿಯಾ ತಂಡವನ್ನು ಕಂಗಾಲಾಗಿಸಿದ್ದಾರೆ.

WTC 2025 final: ಒಂದೇ ಓವರ್​ನಲ್ಲಿ 2 ವಿಕೆಟ್; ಕಗಿಸೊ ರಬಾಡ ಆ್ಯಕ್ಷನ್ ರಿಪ್ಲೈ
Kagiso Rabada
ಪೃಥ್ವಿಶಂಕರ
|

Updated on: Jun 12, 2025 | 10:36 PM

Share

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ (Australia vs South Africa) ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ (WTC Final 2025) ಪಂದ್ಯದಲ್ಲಿ ಉಭಯ ತಂಡಗಳಿಂದ ಅದ್ಭುತ ಪ್ರದರ್ಶನ ಕಂಡುಬಂದಿದೆ. ಇದಕ್ಕೆ ಕಾರಣ ಎರಡೂ ತಂಡಗಳ ವೇಗದ ಬೌಲರ್‌ಗಳು. ಎರಡನೇ ದಿನದಾಟ ಮುಗಿಯುವುದಕ್ಕೂ ಮುನ್ನವೇ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಕೂಡ ಮುಗಿಯುವ ಹಂತಕ್ಕೆ ಬಂದಿದೆ. ಇದಕ್ಕೆ ಕಾರಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಕಗಿಸೊ ರಬಾಡ (Kagiso Rabada). ತಮ್ಮ ವೇಗ ಮತ್ತು ತೀಕ್ಷ್ಣವಾದ ಬೌಲಿಂಗ್ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾದ 5 ವಿಕೆಟ್ ಉರುಳಿಸಿದ್ದ ರಬಾಡ, ಇದೀಗ 2ನೇ ಇನ್ನಿಂಗ್ಸ್​ನಲ್ಲೂ ಅದೇ ಕೆಲಸವನ್ನು ಮುಂದುವರೆಸಿದ್ದಾರೆ. ಅದರಲ್ಲೂ ರಬಾಡ ಆಸ್ಟ್ರೇಲಿಯಾದ ಇಬ್ಬರು ಬ್ಯಾಟ್ಸ್‌ಮನ್‌ಗಳನ್ನು ಎರಡೂ ಇನ್ನಿಂಗ್ಸ್‌ಗಳಲ್ಲಿ ಒಂದೇ ರೀತಿಯಲ್ಲಿ ಔಟ್ ಮಾಡುವ ಮೂಲಕ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ 5 ವಿಕೆಟ್

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಈ ಫೈನಲ್ ಪಂದ್ಯದ ಮೊದಲ ದಿನದಂದು, ಕಗಿಸೊ ರಬಾಡ ಆಸ್ಟ್ರೇಲಿಯಾದ ಐವರು ಬ್ಯಾಟ್ಸ್‌ಮನ್‌ಗಳನ್ನು ಬಲಿ ತೆಗೆದುಕೊಂಡಿದ್ದರು. ಇದರಿಂದಾಗಿ, ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 212 ರನ್‌ಗಳಿಗೆ ಆಲೌಟ್ ಆಯಿತು. ರಬಾಡ ಆಸ್ಟ್ರೇಲಿಯಾದ ಅಗ್ರ ಮತ್ತು ಮಧ್ಯಮ ಕ್ರಮಾಂಕವನ್ನು ನಾಶಮಾಡಿದರು.ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಇಬ್ಬರು ಬ್ಯಾಟ್ಸ್‌ಮನ್‌ಗಳು ರಬಾಡ ದಾಳಿಗೆ ಬಲಿಪಶುಗಳಾಗಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್‌ಗಳೆಂದರೆ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಮತ್ತು ಮೂರನೇ ಕ್ರಮಾಂಕದಲ್ಲಿ ಬಂದ ಕ್ಯಾಮರೂನ್ ಗ್ರೀನ್.

WTC 2025 final: ರಬಾಡ ದಾಳಿಗೆ ತತ್ತರಿಸಿದ ಆಸೀಸ್ 212 ರನ್​ಗಳಿಗೆ ಆಲೌಟ್

ಆಕ್ಷನ್ ರಿಪ್ಲೇ ತೋರಿಸಿದ ರಬಾಡ

ಜೂನ್ 11 ರಂದು ಪ್ರಾರಂಭವಾದ ಈ ಫೈನಲ್ ಪಂದ್ಯದ ಮೊದಲ ದಿನದಂದು, ರಬಾಡ ಮೊದಲು ಉಸ್ಮಾನ್ ಖವಾಜಾ (0) ಅವರನ್ನು ಔಟ್ ಮಾಡಿದರೆ ನಂತರ ಅದೇ ಓವರ್‌ನಲ್ಲಿ ಕ್ಯಾಮರೂನ್ ಗ್ರೀನ್ (4) ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಮೊದಲ ಇನ್ನಿಂಗ್ಸ್‌ನಲ್ಲಿ ವಿಫಲರಾಗಿದ್ದರು. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಇವರಿಬ್ಬರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ರಬಾಡ ಎರಡನೇ ಇನ್ನಿಂಗ್ಸ್​ನಲ್ಲೂ ಇವರಿಬ್ಬರನ್ನು ಕಾಡಿದರು. ಮೊದಲ ಇನ್ನಿಂಗ್ಸ್‌ನ ‘ಆಕ್ಷನ್ ರಿಪ್ಲೇ’ ತೋರಿಸಿದ ರಬಾಡ ಮತ್ತೆ ಎರಡನೇ ಇನ್ನಿಂಗ್ಸ್‌ನಲ್ಲಿ ಖವಾಜಾ ಮತ್ತು ಗ್ರೀನ್ ಅವರನ್ನು ಒಂದೇ ಓವರ್‌ನಲ್ಲಿ ಔಟ್ ಮಾಡಿದರು. ಈ ಬಾರಿಯೂ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಂಪೂರ್ಣ ವಿಫಲರಾದರು. ಖವಾಜ 6 ರನ್ ಗಳಿಸಿದರೆ, ಗ್ರೀನ್ ಈ ಬಾರಿ ತಮ್ಮ ಖಾತೆಯನ್ನು ತೆರೆಯಲು ಸಹ ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ