WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಫೈಟ್​ಗೆ ಡೇಟ್ ಫಿಕ್ಸ್

WTC Final Date: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ವೇಳಾಪಟ್ಟಿಯಂತೆ 2021 ರಿಂದ 2023 ರ ಒಳಗೆ ಪ್ರತಿ ತಂಡಗಳು ಒಟ್ಟು 6 ಟೆಸ್ಟ್​ ಸರಣಿಗಳನ್ನು ಆಡಲಾಗಿದೆ. ಇದರಲ್ಲಿ ಮೂರು ಟೆಸ್ಟ್ ಸರಣಿ ತವರಿನಲ್ಲಿ ನಡೆದರೆ, ಮೂರು ಸರಣಿಗಳನ್ನು ವಿದೇಶಿದಲ್ಲಿ ಆಡಲಾಗಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಫೈಟ್​ಗೆ ಡೇಟ್ ಫಿಕ್ಸ್
WTC Final
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 13, 2023 | 3:59 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಫೈಟ್​ಗೆ ವೇದಿಕೆ ಸಿದ್ದವಾಗಿದೆ. ಜೂನ್ 7 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ (Australia) ಹಾಗೂ ಭಾರತ (Team India) ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿ ಕೂಡ ಫೈನಲ್​ ಪಂದ್ಯವು ತಟಸ್ಥ ಮೈದಾನದಲ್ಲಿ ನಡೆಯಲಿದ್ದು, ಅದರಂತೆ ಅಂತಿಮ ಪಂದ್ಯಕ್ಕೆ ಇಂಗ್ಲೆಂಡ್​ನ ಓವಲ್ ಮೈದಾನ ಆತಿಥ್ಯವಹಿಸಲಿದೆ.

2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯವು ಇಂಗ್ಲೆಂಡ್​ನ ಸೌತಂಪ್ಟನ್​ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 217 ರನ್​ ಕಲೆಹಾಕಿದರೆ, ನ್ಯೂಜಿಲೆಂಡ್ ತಂಡವು 249 ರನ್ ಪೇರಿಸಿತ್ತು. 32 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದ ಭಾರತ ತಂಡವು ಕೇವಲ 170 ರನ್​ಗಳಿಗೆ ಆಲೌಟ್ ಆಗಿತ್ತು.

ಅಂತಿಮ ಇನಿಂಗ್ಸ್​ ಕೇವಲ 138 ರನ್​ಗಳ ಟಾರ್ಗೆಟ್ ಪಡೆದ ನ್ಯೂಜಿಲೆಂಡ್ ತಂಡವು 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಕಿವೀಸ್ ಪಡೆಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಚಾಂಪಿಯನ್​ ಪಟ್ಟವನ್ನು ಅಲಂಕರಿಸಿತ್ತು. ಇದೀಗ 2 ವರ್ಷಗಳ ಬಳಿಕ ಮತ್ತೊಮ್ಮೆ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ಈ ಬಾರಿ ಭಾರತ ತಂಡದ ಎದುರಾಳಿ ಆಸ್ಟ್ರೇಲಿಯಾ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇತ್ತ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಪಾರುಪತ್ಯ ಮರೆದಿರುವ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ತಟಸ್ಥ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿರುವ ಆಸ್ಟ್ರೇಲಿಯಾ ಬಳಗದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಏನಿದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಎಂಬುದು ಟೆಸ್ಟ್ ಆಡುವ 9 ದೇಶಗಳ ನಡುವಣ ಸರಣಿ. ಅಂದರೆ ಏಕದಿನ ಹಾಗೂ ಟಿ20 ವಿಶ್ವಕಪ್​ ಮಾದರಿಯಲ್ಲೇ ಟೆಸ್ಟ್​ ವಿಶ್ವಕಪ್​ ಅನ್ನು ಆಯೋಜಿಸಲಾಗುತ್ತದೆ. ಆದರೆ ಇಲ್ಲಿ 2 ವರ್ಷಗಳ ಅವಧಿಯಲ್ಲಿನ ಟೆಸ್ಟ್ ಸರಣಿಗಳ ಫಲಿತಾಂಶಗಳ ಮೇಲೆ ಎರಡು ತಂಡಗಳು ಫೈನಲ್​ಗೆ ಅರ್ಹತೆ ಪಡೆಯುತ್ತದೆ ಎಂಬುದಷ್ಟೇ ವ್ಯತ್ಯಾಸ.

ಅಂದರೆ​ 2021 ರಿಂದ 2023 ರವರೆಗೆ ನಡೆದ ಟೆಸ್ಟ್ ಸರಣಿಗಳ ಆಧಾರದ ಈ ಮೇಲೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ನಡೆಯಲಿದೆ.​ ಇಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಕಾಣಿಸಿಕೊಂಡಿದ್ದು, ಈ ತಂಡಗಳಲ್ಲಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ಟೀಮ್​ಗಳು ಫೈನಲ್​ಗೆ ಅರ್ಹತೆ ಪಡೆಯುತ್ತವೆ. ಆದರೆ ಇಲ್ಲಿ ಗೆಲುವಿನ ಶೇಕಡಾವಾರು (ಪರ್ಸಂಟೇಜ್) ಮೇಲೆ ಪಾಯಿಂಟ್ಸ್​ ಟೇಬಲ್​ನಲ್ಲಿ ಸ್ಥಾನ ನೀಡಲಾಗುತ್ತದೆ.

ಅದರಂತೆ ಗೆಲುವುಗಳ ಸಂಖ್ಯೆ, ಡ್ರಾ ಪಂದ್ಯಗಳ ಸಂಖ್ಯೆ ಕೂಡ ಇಲ್ಲಿ ಗಣನೆಗೆ ಬರಲಿದೆ. ಇದರಿಂದ ಹೆಚ್ಚು ಪಂದ್ಯ ಗೆದ್ದ ತಂಡ ಅಧಿಕ ಪಾಯಿಂಟ್ ಪಡೆದರೂ, ಗೆಲುವು ಹಾಗೂ ಡ್ರಾ ಸಾಧಿಸಿದ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೇಲೇರಬಹುದು. ಇಲ್ಲಿ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ. ಇದರಿಂದ ಸರಣಿಗಳ ಪಂದ್ಯಾವಳಿಯ ಲೆಕ್ಕಚಾರ ಸಮಗೊಳ್ಳಲಿದೆ.

ಇಲ್ಲಿ ಗೆದ್ದ ಪಂದ್ಯಗಳಿಗೆ ಮತ್ತು ಡ್ರಾ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ಪಾಯಿಂಟ್ಸ್​ ಟೇಬಲ್​ನಲ್ಲಿ ರ್‍ಯಾಂಕ್ ಪಡೆದುಕೊಳ್ಳುತ್ತವೆ. ಇದರಿಂದ ಪಂದ್ಯಗಳಿಗೆ ಅಥವಾ ಸರಣಿಗೆ ಅನುಸಾರವಾಗಿ ಶ್ರೇಯಾಂಕ ಪಟ್ಟಿ ಬದಲಾಗಬಹುದು. ಅಲ್ಲದೆ ಪಾಯಿಂಟ್ ಟೇಬಲ್​ನಲ್ಲೂ ಪಂದ್ಯಕ್ಕನುಸಾರವಾಗಿ ಪೈಪೋಟಿ ಕಂಡು ಬರಲಿದೆ. ಅಂತಿಮವಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಅರ್ಹತೆ ಪಡೆಯುತ್ತದೆ.

ಇದನ್ನೂ ಓದಿ: Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ

ಎಷ್ಟು ಸರಣಿಗಳನ್ನು ಆಡಲಾಗುತ್ತದೆ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ವೇಳಾಪಟ್ಟಿಯಂತೆ 2021 ರಿಂದ 2023 ರ ನಡುವೆ ಪ್ರತಿ ತಂಡಗಳು ಒಟ್ಟು 6 ಟೆಸ್ಟ್​ ಸರಣಿಗಳನ್ನು ಆಡಿದೆ. ಇದರಲ್ಲಿ ಮೂರು ಟೆಸ್ಟ್ ಸರಣಿ ತವರಿನಲ್ಲಿ ನಡೆದರೆ, ಮೂರು ಸರಣಿಗಳನ್ನು ವಿದೇಶಿದಲ್ಲಿ ಆಡಲಾಗಿದೆ. ಈ ಬಾರಿ ಭಾರತ ತಂಡವು ನ್ಯೂಜಿಲೆಂಡ್, ಶ್ರೀಲಂಕಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡಿದೆ. ಇದರಲ್ಲಿ ನ್ಯೂಜಿಲೆಂಡ್, ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ ಸರಣಿ ಆಡಿದೆ.

ಇದೀಗ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಸರಣಿ ಮುಕ್ತಾಯಗೊಂಡಿದೆ. ಡಬ್ಲ್ಯೂಟಿಸಿ​ ಪಾಯಿಂಟ್​ ಟೇಬಲ್​ನಲ್ಲಿ ಅತೀ ಹೆಚ್ಚು ಅಂಕಗಳನ್ನು ಕಲೆಹಾಕಿರುವ ಆಸ್ಟ್ರೇಲಿಯಾ (ಶೇ. 68.52) ಹಾಗೂ ಭಾರತ (ಶೇ. 58.8) ತಂಡ ಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ