AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final Date: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಡೇಟ್ ಫಿಕ್ಸ್

WTC Final Start Date: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಲು ಇಲ್ಲಿ ಟೀಮ್ ಇಂಡಿಯಾಗೆ ಇರುವ ಪ್ಲಸ್ ಪಾಯಿಂಟ್ ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲೇ ಸರಣಿ ಆಡುತ್ತಿರುವುದು.

WTC Final Date: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಡೇಟ್ ಫಿಕ್ಸ್
Team India
TV9 Web
| Updated By: ಝಾಹಿರ್ ಯೂಸುಫ್|

Updated on: Feb 08, 2023 | 6:59 PM

Share

World Test Championship 2023 Final: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023 ರ ಫೈನಲ್ ಪಂದ್ಯದ ದಿನಾಂಕವನ್ನು ಘೋಷಿಸಿದೆ. ಜೂನ್​ 7 ರಿಂದ WTC ಫೈನಲ್ ಪಂದ್ಯವು ಶುರುವಾಗಲಿದ್ದು, ಜೂನ್ 11 ರವರೆಗೆ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನು ಪ್ರತಿಕೂಲ ಹವಾಮಾನದಿಂದ ದಿನದಾಟವನ್ನು ಮುಂದೂಡಿದರೆ ಜೂನ್ 12 ಅನ್ನು ಮೀಸಲು ದಿನವಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಕುತೂಹಲಕಾರಿ ವಿಷಯ ಎಂದರೆ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವ ತಂಡಗಳು ಯಾವುವು ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ.

ಇದಾಗ್ಯೂ ಆಸ್ಟ್ರೇಲಿಯಾ ತಂಡವು ಫೈನಲ್ ಆಡುವುದು ಖಚಿತವಾಗಿದೆ. ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್​​ನಲ್ಲಿ ಆಸೀಸ್ ಪಡೆಯು ಅಗ್ರಸ್ಥಾನದಲ್ಲಿದೆ. ಹೀಗಾಗಿ ಫೈನಲ್ ಫೈಟ್​ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಆದರೆ ಮತ್ತೊಂದೆಡೆ ಫೈನಲ್​ ಪ್ರವೇಶಿಸಲು ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ಟೀಮ್ ಇಂಡಿಯಾ ಫೈನಲ್​ ಪ್ರವೇಶಿಸುವುದು ಹೇಗೆ?

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಭಾರತ ತಂಡವು ಫೆಬ್ರವರಿ 9 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಥವಾ 3-1 ಅಥವಾ 2-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ ಪ್ರವೇಶಿಸಬಹುದು. ಏಕೆಂದರೆ ಟೀಮ್ ಇಂಡಿಯಾ ಕಷ್ಟದಿಂದ 2-0 ಅಂತರದಿಂದ ಗೆದ್ದರೂ ಶೇ.60.65 ಅಂಕ ಪಡೆಯಲಿದೆ. ಅದೇ ವೇಳೆಗೆ ಆಸ್ಟ್ರೇಲಿಯಾ ತಂಡ ಪಾಯಿಂಟ್​ ಶೇ.63.16 ಅಂಕಗಳಿಗೆ ಕುಸಿಯಲಿದೆ. ಅದರಂತೆ ಫೈನಲ್​ನಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಬಹುದು.

ಶ್ರೀಲಂಕಾ ಫೈನಲ್ ಪ್ರವೇಶಿಸುವುದು ಹೇಗೆ?

ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತರೆ ಮಾತ್ರ ಶ್ರೀಲಂಕಾಗೆ ಅವಕಾಶ ಇರಲಿದೆ. ಇಲ್ಲಿ ಸೋಲುವ ಲೆಕ್ಕಚಾರ ಕೂಡ ಗಣನೆಗೆ ಬರಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3-1 ಅಥವಾ, 2-0, 1-0 ಸರಣಿ ಅಂತರದಿಂದ ಸೋತರೆ ಶ್ರೀಲಂಕಾ ತಂಡಕ್ಕೆ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.

ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನು ಗೆಲ್ಲಬೇಕು. ಇಲ್ಲಿ ಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

ಇಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನು ಡ್ರಾ ಮಾಡಿಕೊಂಡರೆ, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಲ್ಲಿ ಶ್ರೀಲಂಕಾ ಸರಣಿ ಗೆದ್ದರೆ ಭಾರತ ತಂಡವು ಫೈನಲ್ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿ ಆಸೀಸ್ ವಿರುದ್ಧದ ಸರಣಿಯು ಭಾರತದ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಭಾರತ ತಂಡಕ್ಕೆ ಉತ್ತಮ ಅವಕಾಶ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಲು ಇಲ್ಲಿ ಟೀಮ್ ಇಂಡಿಯಾಗೆ ಇರುವ ಪ್ಲಸ್ ಪಾಯಿಂಟ್ ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲೇ ಸರಣಿ ಆಡುತ್ತಿರುವುದು. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಕೊನೆಯ ಸರಣಿಯನ್ನು ಟೀಮ್ ಇಂಡಿಯಾ ಭಾರತದಲ್ಲೇ ಆಡುತ್ತಿದೆ. ಆದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್​ನಲ್ಲಿ ಸರಣಿ ಆಡಬೇಕಿದೆ. ಹೀಗಾಗಿ ತವರಿನ ಬೆಂಬಲದೊಂದಿಗೆ ಸರಣಿ ಗೆಲ್ಲುವ ಅವಕಾಶ ಭಾರತ ತಂಡದ ಮುಂದಿದೆ.

ಮತ್ತೊಂದೆಡೆ ನ್ಯೂಜಿಲೆಂಡ್​ನಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನ ಕೊನೆಯ ಟೆಸ್ಟ್ ಪಂದ್ಯಗಳನ್ನು ಆಡಲಿರುವ ಶ್ರೀಲಂಕಾ ತಂಡಕ್ಕೆ ದೊಡ್ಡ ಸವಾಲು ಎದುರಾಗುವ ಸಾಧ್ಯತೆ ಹೆಚ್ಚು. ಏಕೆಂದರೆ ಶ್ರೀಲಂಕಾ ತಂಡ ಇದುವರೆಗೆ ನ್ಯೂಜಿಲೆಂಡ್​ನಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಲು ಭಾರತ ತಂಡಕ್ಕೆ ಉತ್ತಮ ಅವಕಾಶವಿದೆ. ಅದರಂತೆ ಭಾರತ ತಂಡವು ಮತ್ತೊಮ್ಮೆ WTC ಫೈನಲ್ ಆಡಲಿದೆಯಾ ಕಾದು ನೋಡಬೇಕಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ