ಟೀಮ್ ಇಂಡಿಯಾ WTC ಫೈನಲ್ ತಲುಪುತ್ತಾ? ಇಲ್ಲಿ ಪಾಕಿಸ್ತಾನ್ ತಂಡವೇ ಎದುರಾಳಿ..!

World Test Championship: ಆಸ್ಟ್ರೇಲಿಯಾ ಇನ್ನೂ 10 ಪಂದ್ಯಗಳನ್ನು ಆಡಬೇಕಿದೆ. ಅದರಂತೆ ಶ್ರೀಲಂಕಾ ವಿರುದ್ಧ 1, ಭಾರತದ ವಿರುದ್ಧ 4, ವೆಸ್ಟ್ ಇಂಡೀಸ್ ವಿರುದ್ಧ 2 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳನ್ನು ಆಡಲಿದೆ.

ಟೀಮ್ ಇಂಡಿಯಾ WTC ಫೈನಲ್ ತಲುಪುತ್ತಾ? ಇಲ್ಲಿ ಪಾಕಿಸ್ತಾನ್ ತಂಡವೇ ಎದುರಾಳಿ..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 05, 2022 | 7:56 PM

ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್​ನಲ್ಲಿ ನಡೆದ ಇಂಗ್ಲೆಂಡ್ (India vs England) ವಿರುದ್ದದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India)  7 ವಿಕೆಟ್‌ಗಳಿಂದ ಸೋತಿದೆ. ಆದರೆ, ಈ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (WTC) ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. 5ನೇ ಮತ್ತು ಅಂತಿಮ ಟೆಸ್ಟ್‌ನಲ್ಲಿನ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಭಾರತದ ಸ್ಥಾನದ ಮೇಲೆ ಗಮನಾರ್ಹ ಪರಿಣಾಮ ಬೀರಿಲ್ಲ. ಆದರೆ ಈ ಸೋಲು ಟೆಸ್ಟ್​ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸುವ ಅವಕಾಶವನ್ನು ಕಡಿಮೆ ಮಾಡಿದೆ. ಏಕೆಂದರೆ ಪಾಯಿಂಟ್ ಟೇಬಲ್​ನಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾದ ಶೇಕಡಾವಾರು ಅಂಕಗಳು  77.78 ಇದ್ದರೆ ಸೌತ್ ಆಫ್ರಿಕಾವು 71.43 ಅಂಕಗಳನ್ನು ಹೊಂದಿದೆ. ಆದರೆ ಭಾರತ ತಂಡದ ಶೇಕಡಾವಾರು ಅಂಕ 53.47 ರಲ್ಲೇ ಉಳಿದಿದೆ.

ಅಂದರೆ ಇಲ್ಲಿ 5ನೇ ಸ್ಥಾನದಲ್ಲಿರುವ ಭಾರತವು ಫೈನಲ್‌ಗೆ ಪ್ರವೇಶಿಸಬೇಕಿದ್ದರೆ ಮುಂಬರುವ ಸರಣಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆಯಿದೆ. ಸದ್ಯ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 6 ಪಂದ್ಯಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕಿದೆ. ಅದರಂತೆ ತವರಿನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಮತ್ತು ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದರೆ ಶೇಕಡಾವಾರು ಅಂಕ 68. 98 ಗೆ ತಲುಪಲಿದೆ.

ಇದಾಗ್ಯೂ ಭಾರತ ತಂಡವು ಫೈನಲ್​ನಲ್ಲಿ ಅವಕಾಶ ಪಡೆಯಬೇಕಿದ್ದರೆ ಇತರೆ ತಂಡಗಳ ಫಲಿತಾಂಶವನ್ನು ಕೂಡ ಎದುರು ನೋಡಬೇಕಾಗುತ್ತದೆ. ಇಲ್ಲಿ ಮುಖ್ಯವಾಗಿ ಪಾಕಿಸ್ತಾನವೂ ಭಾರತದ ಫೈನಲ್ ಕನಸಿಗೆ ಎದುರಾಳಿಯಾಗಿ ಬರಬಹುದು. ಏಕೆಂದರೆ ಪಾಕಿಸ್ತಾನ 52.38 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನವು ಇನ್ನು 7 ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ ಇಂಗ್ಲೆಂಡ್ ವಿರುದ್ಧ 3 ಮತ್ತು ನ್ಯೂಜಿಲೆಂಡ್ ವಿರುದ್ಧ 2 ಪಂದ್ಯಗಳು ತವರಿನಲ್ಲಿ ಆಡಲಿದೆ. ಹಾಗೆಯೇ ಶ್ರೀಲಂಕಾ ವಿರುದ್ಧ 2 ಟೆಸ್ಟ್‌ಗಳನ್ನು ಆಡಬೇಕಿದೆ. ಒಂದು ವೇಳೆ ಮುಂಬರುವ ಪಂದ್ಯದಲ್ಲಿ ಟೀಮ್ ಇಂಡಿಯಾಗಿಂತ ಪಾಕಿಸ್ತಾನ್ ಭರ್ಜರಿ ಪ್ರದರ್ಶನ ನೀಡಿದ್ರೆ ಫೈನಲ್​ಗೆ ಪ್ರವೇಶಿಸುವ ಅವಕಾಶ ಭಾರತಕ್ಕಿಂತ ಪಾಕ್​ಗೆ ಇರಲಿದೆ.

ಹೀಗಾಗಿ ಭಾರತ ತಂಡವು ಮುಂಬರುವ ಪಂದ್ಯಗಳಲ್ಲಿ ಗೆಲುವು ದಾಖಲಿಸುವ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪ್ರವೇಶಿಸಲು ಇತರೆ ತಂಡಗಳ ಫಲಿತಾಂಶಗಳನ್ನು ಕೂಡ ಅವಲಂಭಿಸಬೇಕಾಗಿ ಬಂದಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಾತ್ರಿಪಡಿಸಿಕೊಳ್ಳುವ ಅವಕಾಶವನ್ನು ಸಹ ಹೊಂದಿದೆ.

ಏಕೆಂದರೆ ಆಸ್ಟ್ರೇಲಿಯಾ ಇನ್ನೂ 10 ಪಂದ್ಯಗಳನ್ನು ಆಡಬೇಕಿದೆ. ಅದರಂತೆ ಶ್ರೀಲಂಕಾ ವಿರುದ್ಧ 1, ಭಾರತದ ವಿರುದ್ಧ 4, ವೆಸ್ಟ್ ಇಂಡೀಸ್ ವಿರುದ್ಧ 2 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳನ್ನು ಆಡಲಿದೆ. ದಕ್ಷಿಣ ಆಫ್ರಿಕಾ ಇನ್ನೂ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ತಲಾ ಮೂರು ಪಂದ್ಯಗಳನ್ನು ಆಡಲಿದ್ದು, ಹಾಗೆಯೇ ವೆಸ್ಟ್ ಇಂಡೀಸ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಈ ಎರಡು ತಂಡಗಳು ಮುಂಬರುವ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಉಳಿದ ತಂಡಗಳ ಫೈನಲ್ ಕನಸು ಕೂಡ ಕಮರಿ ಹೋಗಲಿದೆ.

ಇನ್ನು ಟೀಮ್ ಇಂಡಿಯಾ ವಿರುದ್ದ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಇಂಗ್ಲೆಂಡ್ ತಂಡ ಪಾಯಿಂಟ್ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದ್ದು, ಇದಾಗ್ಯೂ ಫೈನಲ್ ಪ್ರವೇಶಿಸುವ ಅವಕಾಶ ತುಂಬಾ ಕ್ಷೀಣ. ಹೀಗಾಗಿ ಟಾಪ್-5 ನಲ್ಲಿರುವ ತಂಡಗಳ ನಡುವೆಯೇ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪೈಪೋಟಿ ಕಂಡು ಬರಲಿದೆ.

Published On - 7:55 pm, Tue, 5 July 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ