AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಭರ್ಜರಿ ಜಯ: WTC ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ!

Sri Lanka vs India, 1st Test: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ, ತನ್ನ ಪ್ರಥಮ ಇನಿಂಗ್ಸ್‌ನಲ್ಲಿ 462 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 284 ರನ್‌ಗಳಿಗೆ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್‌ನಲ್ಲಿ  ಟೀಮ್ ಇಂಡಿಯಾ 193 ರನ್‌ಗಳಿಗೆ ಸರ್ವಪತನ ಕಂಡಿತು. ಮೊದಲ ಇನಿಂಗ್ಸ್‌ನಲ್ಲಿನ ಹಿನ್ನಡೆಯೊಂದಿಗೆ 372 ರನ್‌ಗಳ ಕಠಿಣ ಗುರಿ  ಪಡೆದ ಶ್ರೀಲಂಕಾ ದ್ವಿತೀಯ ಇನಿಂಗ್ಸ್‌ನಲ್ಲಿ ಕೇವಲ 206 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 165 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಭಾರತಕ್ಕೆ ಭರ್ಜರಿ ಜಯ: WTC ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Aug 19, 2026 | 3:13 PM

Share

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬೆನ್ನಲ್ಲೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಪಾಯಿಂಟ್ಸ್ ಪಟ್ಟಿಯಲ್ಲಿ ಮಹತ್ವದ ಬದಲಾವಣೆಗಳಾಗಿವೆ.

ಮಳೆಯ ಅಡೆತಡೆಗಳ ನಡುವೆಯೂ ನಡೆದ ಈ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತು. ಮೊದಲ ಇನಿಂಗ್ಸ್‌ನಲ್ಲಿ ದೇವದತ್ ಪಡಿಕ್ಕಲ್ ಬಾರಿಸಿದ ಆಕರ್ಷಕ ಶತಕ (167 ರನ್) ಹಾಗೂ ಚೊಚ್ಚಲ ಪಂದ್ಯವಾಡಿದ ಯುವ ಸ್ಪಿನ್ನರ್ ಮಾನವ್ ಸುತಾರ್ ಅವರ 10 ವಿಕೆಟ್‌ಗಳ ಮಾರಕ ದಾಳಿಯ ನೆರವಿನಿಂದ ಭಾರತ ಲಂಕಾ ಪಡೆಯನ್ನು ಧೂಳೀಪಟ ಮಾಡಿದೆ.

ಅಂಕ ಪಟ್ಟಿಯಲ್ಲಿ ಭಾರತದ ಸ್ಥಾನವೇನು?

ಈ ಗೆಲುವಿನಿಂದಾಗಿ ಭಾರತ 12 ಪ್ರಮುಖ ಅಂಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ಇದರೊಂದಿಗೆ ತಂಡದ ಗೆಲುವಿನ ಶೇಕಡಾವಾರು (PCT) ಪ್ರಮಾಣವು ಶೇ. 48.15 ರಿಂದ ಶೇ. 53.33 ಕ್ಕೆ ಏರಿಕೆಯಾಗಿದೆ. ಆದಾಗ್ಯೂ, ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ಇತ್ತೀಚೆಗೆ ಪಡೆದ ಐತಿಹಾಸಿಕ ಗೆಲುವಿನಿಂದಾಗಿ, ಭಾರತ ಸದ್ಯಕ್ಕೆ ಐದನೇ ಸ್ಥಾನದಲ್ಲೇ ಮುಂದುವರಿದಿದೆ. ಮತ್ತೊಂದೆಡೆ, ಮುಖಭಂಗ ಅನುಭವಿಸಿದ ಶ್ರೀಲಂಕಾ ಶೇ. 33.33 PCT ಯೊಂದಿಗೆ ಆರನೇ ಸ್ಥಾನದಲ್ಲಿ ಉಳಿದುಕೊಂಡಿದೆ.

WTC ಅಂಕ ಪಟ್ಟಿ:

ಸ್ಥಾನ ತಂಡ ಪಂದ್ಯ ಗೆಲುವು ಸೋಲು ಡ್ರಾ ಪಾಯಿಂಟ್ಸ್ ಗೆಲುವಿನ ಶೇಕಡಾವಾರು (PCT)
1 ಆಸ್ಟ್ರೇಲಿಯಾ 9 7 2 0 84 77.78%
2 ಸೌತ್ ಆಫ್ರಿಕಾ 4 3 1 0 36 75.00%
3 ನ್ಯೂಝಿಲೆಂಡ್ 6 4 1 1 52 72.22%
4 ಬಾಂಗ್ಲಾದೇಶ 5 3 1 1 40 66.67%
5 ಭಾರತ 10 5 4 1 64 53.33%
6 ಶ್ರೀಲಂಕಾ 5 1 3 1 20 33.33%
7 ಇಂಗ್ಲೆಂಡ್ 13 4 8 1 38 24.36%
8 ಪಾಕಿಸ್ತಾನ್ 6 2 4 0 16 22.22%
9 ವೆಸ್ಟ್ ಇಂಡೀಸ್ 12 2 8 2 30 20.83%

ಟೀಮ್ ಇಂಡಿಯಾ ಮುಂದಿರುವ ಸವಾಲುಗಳೇನು?

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ಗೆ ತಲುಪುವುದು ಅಷ್ಟೊಂದು ಸುಲಭವಾಗಿಲ್ಲ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನೂ ಕನಿಷ್ಠ 6 ಗೆಲುವುಗಳ ಅವಶ್ಯಕತೆಯಿದೆ. ಅಂದರೆ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಜಯ ಸಾಧಿಸಬೇಕು. ಹಾಗೆಯೇ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲ್ಲಬೇಕಿದೆ. ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಲೆಕ್ಕಾಚಾರ ಈ ಕೆಳಗಿನಂತಿದೆ…

ಶ್ರೀಲಂಕಾ ವಿರುದ್ಧ ಕ್ಲೀನ್ ಸ್ವೀಪ್: ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆದ್ದು 2-0 ಯಿಂದ ಸರಣಿ ಕೈವಶ ಮಾಡಿಕೊಂಡರೆ ಭಾರತದ PCT ಶೇ. 57.58 ಕ್ಕೆ ಏರಲಿದೆ.

ನ್ಯೂಝಿಲೆಂಡ್ ವಿರುದ್ಧದ ಸರಣಿ: ಕಿವೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಬೇಕು.

ಆಸ್ಟ್ರೇಲಿಯಾ ವಿರುದ್ಧ ತವರಿನ ಸರಣಿ: ಮುಂಬರುವ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಕನಿಷ್ಠ 3 ಅಥವಾ 4 ಪಂದ್ಯಗಳಲ್ಲಿ ಸೋಲಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ.

ಇದನ್ನೂ ಓದಿ: ರಿಷಭ್ ಪಂತ್ ಆರ್ಭಟಕ್ಕೆ ಗಿಲ್ ದಾಖಲೆ ಉಡೀಸ್!

ಒಟ್ಟಾರೆಯಾಗಿ ಹೇಳುವುದಾದರೆ, ಗಾಲೆ ಮೈದಾನದಲ್ಲಿ ಸಿಕ್ಕ ಈ ಭರ್ಜರಿ ಜಯ ಟೀಮ್ ಇಂಡಿಯಾ ಪಾಲಿಗೆ ಹೊಸ ಭರವಸೆ ಮೂಡಿಸಿದೆ. ಆದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ತಲುಪುವ ಹಾದಿ ಮಾತ್ರ ಅಷ್ಟು ಸುಲಭವಾಗಿಲ್ಲ. ಮುಂಬರುವ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಗಳು ಭಾರತದ ಪಾಲಿಗೆ ನಿಜವಾದ ಅಗ್ನಿಪರೀಕ್ಷೆಯಾಗಲಿವೆ. ಈ ಕಠಿಣ ಸವಾಲುಗಳನ್ನು ಮೆಟ್ಟಿ ನಿಂತು ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ