Yashasvi Jaiswal: ಆಂಗ್ಲರ ನಾಡಲ್ಲಿ ಇತಿಹಾಸ ನಿರ್ಮಿಸಿದ ಯಶಸ್ವಿ ಜೈಸ್ವಾಲ್: 58 ವರ್ಷಗಳ ದಾಖಲೆ ಉಡೀಸ್
India vs England 1st Test: ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಆಡುತ್ತಿದೆ, ಆದ್ದರಿಂದ ಎಲ್ಲರ ಕಣ್ಣುಗಳು ಈ ಸರಣಿಯ ಮೇಲೆ ಇದೆ. ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಮೇಲೂ ಬೆಟ್ಟದಷ್ಟು ನಿರೀಕ್ಷೆಗಳಿವೆ. ನಿರೀಕ್ಷೆಯನ್ನು ಹುಸಿ ಮಾಡದ ಯಶಸ್ವಿ ಮೊದಲು ಕೆಎಲ್ ರಾಹುಲ್ ಜೊತೆಗೆ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು.

ಬೆಂಗಳೂರು (ಜೂ. 20): ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20 ರಿಂದ ಆರಂಭವಾಗಿದ್ದು, ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಲೀಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಟಾಸ್ ಸೋತ ನಂತರ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ಇಳಿಯಿತು ಅಂದುಕೊಂಡಂತೆ ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತು ಕೆಎಲ್ ರಾಹುಲ್ ಜೋಡಿ ಉತ್ತಮ ಆರಂಭವನ್ನು ನೀಡಿತು. ಮೊದಲ ವಿಕೆಟ್‌ಗೆ 91 ರನ್‌ಗಳ ಜೊತೆಯಾಟ ಆಡಿತು. ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯ ಆಡುತ್ತಿರುವ ಜೈಸ್ವಾಲ್, ತಮ್ಮ ಇನ್ನಿಂಗ್ಸ್‌ನಲ್ಲಿ 87 ರನ್‌ಗಳ ಗಡಿ ದಾಟಿದ ತಕ್ಷಣ, ಲೀಡ್ಸ್‌ನಲ್ಲಿ 58 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾದರು.
ಫಾರೂಕ್ ಇಂಜಿನಿಯರ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್:
ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಆಡುತ್ತಿದೆ, ಆದ್ದರಿಂದ ಎಲ್ಲರ ಕಣ್ಣುಗಳು ಈ ಸರಣಿಯ ಮೇಲೆ ಇದೆ. ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಮೇಲೂ ಬೆಟ್ಟದಷ್ಟು ನಿರೀಕ್ಷೆಗಳಿವೆ. ನಿರೀಕ್ಷೆಯನ್ನು ಹುಸಿ ಮಾಡದ ಯಶಸ್ವಿ ಮೊದಲು ಕೆಎಲ್ ರಾಹುಲ್ ಜೊತೆಗೆ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು, ನಂತರ ನಾಯಕ ಶುಭ್ಮನ್ ಗಿಲ್ ಜೊತೆಗೆ, ಅವರು ಮೂರನೇ ವಿಕೆಟ್‌ಗೆ 100 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ಗಳಿಸುವಲ್ಲಿ ಯಶಸ್ವಿಯಾದರು.
ಜೈಸ್ವಾಲ್ ತಮ್ಮ ಇನ್ನಿಂಗ್ಸ್‌ನಲ್ಲಿ 88 ರನ್‌ಗಳನ್ನು ಪೂರ್ಣಗೊಳಿಸಿದ ತಕ್ಷಣ, ಲೀಡ್ಸ್ ಮೈದಾನದಲ್ಲಿ ಭಾರತೀಯ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು. ಈ ಮೊದಲು ಈ ದಾಖಲೆ 1967 ರಲ್ಲಿ ಈ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 87 ರನ್‌ಗಳನ್ನು ಗಳಿಸಿದ ಫಾರೂಕ್ ಎಂಜಿನಿಯರ್ ಹೆಸರಿನಲ್ಲಿತ್ತು.
IND vs ENG: ಲೀಡ್ಸ್‌ನಲ್ಲಿ ಮೊದಲ ದಿನವೇ ಇತಿಹಾಸ ಸೃಷ್ಟಿಸಿದ ರಾಹುಲ್-ಜೈಸ್ವಾಲ್ ಜೋಡಿ
ಇಂಗ್ಲೆಂಡ್‌ನಲ್ಲಿ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿದ ಐದನೇ ಕಿರಿಯ ಭಾರತೀಯ
ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿದ ಐದನೇ ಭಾರತೀಯ ಯುವ ಆರಂಭಿಕ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ರವಿಶಾಸ್ತ್ರಿ ಮತ್ತು ಸುನಿಲ್ ಗವಾಸ್ಕರ್ ಅವರಂತಹ ದಂತಕಥೆಗಳ ಕ್ಲಬ್‌ಗೆ ಜೈಸ್ವಾಲ್ ಸೇರಿದ್ದಾರೆ. ಜೈಸ್ವಾಲ್ 23 ವರ್ಷ 174 ದಿನಗಳಲ್ಲಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಅರ್ಧಶತಕ ಗಳಿಸಿದರು. ಈ ಪಟ್ಟಿಯಲ್ಲಿ ಮೊದಲಿಗರು ರವಿಶಾಸ್ತ್ರಿ, ಅವರು 20 ವರ್ಷ 42 ದಿನಗಳಲ್ಲಿ ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿದ್ದರು.
ಆಕರ್ಷಕ ಶತಕ ಸಿಡಿಸಿದ ಜೈಸ್ವಾಲ್
ಆಂಗ್ಲರ ನಾಡಲ್ಲಿ ಜೈಸ್ವಾಲ್ ತಮ್ಮ ಚೊಚ್ಚಲ ಶತಕ ಕೂಡ ಸಿಡಿಸಿದ್ದಾರೆ. 144 ಎಸೆತಗಳಲ್ಲಿ 16 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಶತಕ ಪೂರೈಸಿದ್ದಾರೆ. ಆರಂಭದಿಂದಲೂ ಇಂಗ್ಲೆಂಡ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಜೈಸ್ವಾಲ್, ಮೈದಾನದಲ್ಲಿ ಬೌಂಡರಿಗಳ ಮಳೆ ಸುರಿಸಿದರು. ಈ ಮೈದಾನದಲ್ಲಿ ಮೊದಲ ದಿನದಂದು ಬ್ಯಾಟಿಂಗ್ ಮಾಡುವುದು ಸುಲಭವಲ್ಲ. ಇದರ ಹೊರತಾಗಿಯೂ, ಯಶಸ್ವಿ ಇಂಗ್ಲಿಷ್ ಬೌಲರ್‌ಗಳನ್ನು ಧೈರ್ಯದಿಂದ ಎದುರಿಸಿದರು ಮತ್ತು ಎರಡನೇ ಸೆಷನ್‌ನಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ಯಶಸ್ವಿ ಅವರ 5 ನೇ ಶತಕವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 pm, Fri, 20 June 25




