AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಫಾಫ್ ಕೈಯಿಂದ ಜಾರಿದ ಆರೆಂಜ್ ಕ್ಯಾಪ್: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಯಾರಿಗೆ?

IPL 2023 Orange-Purple Cap: ಮುಂಬೈ-ಆರ್​ಆರ್​ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಫಾಫ್ ಕೈಯಿಂದ ಜಾರಿದ ಆರೆಂಜ್ ಕ್ಯಾಪ್: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಯಾರಿಗೆ?
Faf Duplessis and yashasvi jaiswal
Vinay Bhat
|

Updated on: May 01, 2023 | 12:19 PM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 42 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್- ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್- ರಾಜಸ್ಥಾನ್ ರಾಯಲ್ಸ್ (MI vs RR) ನಡುವೆ ನಡೆದ ಎರಡೂ ಪಂದ್ಯ ಕೂಡ ರಣರೋಚಕವಾಗಿತ್ತು. ಹಾಗಾದರೆ, ಮುಂಬೈ-ಆರ್​ಆರ್​ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಎಂಟು ಪಂದ್ಯಗಳಲ್ಲಿ ಆರು ಗೆಲುವು, ಎರಡು ಸೋಲುಂಡು +0.638 ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದು ಗೆಲುವು, ಮೂರು ಸೋಲು ಕಂಡು 10 ಅಂಕ ಸಂಪಾದಿಸಿ +0.841 ರನ್​ರೇಟ್​ ಹೊಂದಿದೆ.
  • ಮುಂಬೈ ವಿರುದ್ಧ ಸೋತ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕರಲ್ಲಿ ಸೋಲುಂಡು +0.800 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿದೆ. +0.329 ರನ್​ರೇಟ್ ಹೊಂದಿದೆ.
  • ಚೆನ್ನೈ ವಿರುದ್ಧ ಗೆದ್ದ ಬಳಿಕ ಪಂಜಾಬ್ ಕಿಂಗ್ಸ್ ಆಡಿದ ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.447ರನ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು 8 ಅಂಕ ಸಂಪಾದಿಸಿ -0.139 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಆರ್​ಆರ್​ ವಿರುದ್ಧ ಗೆಲುವು ಸಾಧಿಸಿ ಒಂದು ಸ್ಥಾನ ಮೇಲೇರಿ ಏಳನೇ ಸ್ಥಾನದಲ್ಲಿದೆ. ಆಡಿದ 8 ಪಂದ್ಯದಲ್ಲಿ ತಲಾ ನಾಲ್ಕು ಸೋಲು, ನಾಲ್ಕು ಗೆಲುವು ಕಂಡು 8 ಅಂಕ ಸಂಪಾದಿಸಿ -0.502 ರನ್​ರೇಟ್ ಹೊಂದಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್​ನಲ್ಲಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಮೂರು ಗೆಲುವು, ಆರರಲ್ಲಿ ಸೋಲುಂಡು -0.147 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯದಲ್ಲಿ ಐದರಲ್ಲಿ ಸೋಲು ಮೂರರಲ್ಲಿ ಜಯ ಕಂಡು 6 ಅಂಕ ಸಂಪಾದಿಸಿ -0.577 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೆ ಜಯ ಸಾಧಿಸಿ 4 ಅಂಕ ಸಂಪಾದಿಸಿ -0.898 ರನ್​ರೇಟ್ ಹೊಂದಿದೆ.

LSG vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಲಖನೌ ವಿರುದ್ಧದ ಪಂದ್ಯಕ್ಕೆ ಮಾಡಿದೆ ಮಾಸ್ಟರ್ ಪ್ಲಾನ್

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೈಯಲ್ಲಿದ್ದ ಆರೆಂಜ್ ಕ್ಯಾಪ್ ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ಕಿತ್ತುಕೊಂಡಿದ್ದಾರೆ. ಇವರು ಆಡಿದ ಒಂಬತ್ತು ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 428 ರನ್ ಕಲೆಹಾಕಿದ್ದಾರೆ. ಡುಪ್ಲೆಸಿಸ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು ಆಡಿದ ಎಂಟು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 422 ರನ್ ಗಳಿಸಿದ್ದಾರೆ. ಸಿಎಸ್​ಕೆ ತಂಡದ ಡೆವೊನ್ ಕಾನ್ವೇ ಮೂರನೇ ಸ್ಥಾನದಲ್ಲಿದ್ದು ಒಂಬತ್ತು ಪಂದ್ಯಗಳಿಂದ 414 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
Rohit Sharma Out: ಹುಟ್ಟುಹಬ್ಬದ ದಿನ ರೋಹಿತ್ ಶರ್ಮಾಗೆ ಬಹುದೊಡ್ಡ ಮೋಸ: ಇದು ಅಂಪೈರ್ ಮಾಡಿದ ಎಡವಟ್ಟು
Image
RCB Playing XI vs LSG: ಹ್ಯಾಜಲ್​ವುಡ್ ಅಲ್ಲ: ಲಖನೌ ವಿರುದ್ಧ ಗೆಲ್ಲಲು ಆರ್​ಸಿಬಿ ಮಾಸ್ಟರ್ ಪ್ಲಾನ್: ಆ ಪ್ಲೇಯರ್ ಇಂದು ಕಣಕ್ಕೆ
Image
Rohit Sharma: ತಾಳ್ಮೆ ಕಳೆದುಕೊಂಡ ರೋಹಿತ್ ಶರ್ಮಾ: ಪಿಚ್ ಮಧ್ಯೆ ನಿಂತು ಅಂಪೈರ್​ನ ಮೈಚಳಿ ಬಿಡಿಸಿದ ಹಿಟ್​ಮ್ಯಾನ್: ವಿಡಿಯೋ
Image
Tim David: ಕೊನೆಯ ಓವರ್​ನಲ್ಲಿ ಬೇಕಿತ್ತು 17 ರನ್ಸ್: ಸತತ 3 ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್ ರೋಚಕ ವಿಡಿಯೋ ನೋಡಿ

ಪರ್ಪಲ್ ಕ್ಯಾಪ್:

ಸಿಕೆಸ್​ಕೆ ತಂಡದ ತುಷಾರ್ ದೇಶಪಾಂಡೆ 9 ಪಂದ್ಯಗಳಿಂದ 17 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಅರ್ಶ್​ದೀಪ್ ಸಿಂಗ್ 9 ಪಂದ್ಯಗಳಿಂದ ಒಟ್ಟು 15 ವಿಕೆಟ್ ಕಿತ್ತು ಎರಡನೇ ಸ್ಥಾನದಲ್ಲಿದ್ದಾರೆ. ಆರ್​ಸಿಬಿ ತಂಡದ ಮೊಹಮ್ಮದ್ ಸಿರಾಜ್ ಆಡಿದ ಎಂಟು ಪಂದ್ಯಗಳಿಂದ 14 ವಿಕೆಟ್ ಕಬಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ