Yashasvi Jaiswal: ದಾಖಲೆಯೊಂದಿಗೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Jul 12, 2023 | 8:24 PM

India vs West Indies 1st Test: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 15 ಪಂದ್ಯಗಳಲ್ಲಿ 26 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಒಟ್ಟು 1845 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

Yashasvi Jaiswal: ದಾಖಲೆಯೊಂದಿಗೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್
Yashasvi Jaiswal
Follow us on

India vs West Indies 1st: ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ಇಶಾನ್ ಕಿಶನ್ (Ishan Kishan) ಟೀಮ್ ಇಂಡಿಯಾ (Team India) ಪರ ಪಾದಾರ್ಪಣೆ ಮಾಡಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆಯೊಂದು ನಿರ್ಮಿಸಿರುವುದು ವಿಶೇಷ.

ಅಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ಸರಾಸರಿಯಲ್ಲಿ ರನ್ ಕಲೆಹಾಕಿ ಭಾರತದ ಪರ ಪಾದಾರ್ಪಣೆ ಮಾಡಿದ ಮೂರನೇ ಆಟಗಾರ ಎಂಬ ದಾಖಲೆ ಇದೀಗ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ.

ಕಾಂಬ್ಳಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 27 ಪಂದ್ಯಗಳಲ್ಲಿ 88.37 ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾಗ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು. ಹಾಗೆಯೇ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 23 ಪಂದ್ಯ​ಗಳಲ್ಲಿ 81.23 ರ ಸರಾಸರಿಯಲ್ಲಿ ರನ್​ಗಳಿಸಿದ್ದ ವೇಳೆ ಪ್ರವೀಣ್ ಆಮ್ರೆ ಭಾರತದ ಪರ ಪಾದಾರ್ಪಣೆ ಮಾಡಿದ್ದರು.

ಇದೀಗ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 15 ಪಂದ್ಯಗಳಲ್ಲಿ 80.21 ರ ಸರಾಸರಿಯಲ್ಲಿ 1845 ರನ್ ಪೇರಿಸಿರುವ ಯಶಸ್ವಿ ಜೈಸ್ವಾಲ್​ಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ. ಇದರೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ಸರಾಸರಿಯಲ್ಲಿ ರನ್ ಕಲೆಹಾಕಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Yashasvi Jaiswal: ರಾಹುಲ್ ದಾಖಲೆ ಉಡೀಸ್: ಯಶಸ್ವಿ ಜೈಸ್ವಾಲ್ ಸ್ಪೋಟಕ ಅರ್ಧಶತಕ

ಯಶಸ್ವಿ ಫಸ್ಟ್​ ಕ್ಲಾಸ್:

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 15 ಪಂದ್ಯಗಳಲ್ಲಿ 26 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಒಟ್ಟು 1845 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇನ್ನು 26 ಇನಿಂಗ್ಸ್​ಗಳಲ್ಲಿ ಜೈಸ್ವಾಲ್ ಬ್ಯಾಟ್​ನಿಂದ ಮೂಡಿಬಂದಿರುವುದು 227 ಫೋರ್​ಗಳು ಹಾಗೂ 24 ಸಿಕ್ಸ್​ಗಳು. ಅಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟರ್​ ಆಗಿ ಗುರುತಿಸಿಕೊಂಡಿರುವ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಅಬ್ಬರಿಸಿದರೂ ಅಚ್ಚರಿಪಡಬೇಕಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ:

ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.