IPL Points Table 2023: ಪಾಯಿಂಟ್ ಟೇಬಲ್​ನಲ್ಲಿ ಮೇಲೇರಿದ ಆರ್​ಸಿಬಿ: ಆರೆಂಜ್ ಕ್ಯಾಪ್​ನತ್ತ ಯಶಸ್ವಿ ಜೈಸ್ವಾಲ್

IPL 2023 Orange-Purple Cap: ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL Points Table 2023: ಪಾಯಿಂಟ್ ಟೇಬಲ್​ನಲ್ಲಿ ಮೇಲೇರಿದ ಆರ್​ಸಿಬಿ: ಆರೆಂಜ್ ಕ್ಯಾಪ್​ನತ್ತ ಯಶಸ್ವಿ ಜೈಸ್ವಾಲ್
Yashasvi Jaiswal and Faf Duplessis
Follow us
Vinay Bhat
|

Updated on: May 12, 2023 | 10:18 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 56 ಪಂದ್ಯಗಳು ಮುಕ್ತಾಯಗೊಂಡಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಗುರುವಾರ ನಡೆದ ಕೋಲ್ಕತ್ತಾ ನೈಡ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್​ 9 ವಿಕೆಟ್​ಗಳ ಜಯ ಕಂಡಿತು. ಇಂದು ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ (MI vs GT) ಸೆಣೆಸಾಟ ನಡೆಸಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಪ್ರದರ್ಶನ ತೋರಿ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಬಹುತೇಕ ಕಾಲಿಟ್ಟಿದೆ. ಆಡಿದ 11 ಪಂದ್ಯಗಳಲ್ಲಿ ಎಂಟು ಗೆಲುವು, ಮೂರು ಸೋಲುಂಡು +0.951 ರನ್​ರೇಟ್​ನೊಂದಿಗೆ 16 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.493 ರನ್​ರೇಟ್ ಹೊಂದಿದೆ.
  • ಕೆಕೆಆರ್ ವಿರುದ್ಧ ಗೆಲ್ಲುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿದ 11 ಪಂದ್ಯದಲ್ಲಿ 5 ಸೋಲು, ಆರು ಗೆಲುವು ಕಂಡು 12 ಅಂಕ ಸಂಪಾದಿಸಿ -0.255 ರನ್​ರೇಟ್ ಹೊಂದಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು 11 ಅಂಕ ಸಂಪಾದಿಸಿ +0.294 ರನ್​ರೇಟ್​ ಹೊಂದಿದೆ.
  • ಕೆಕೆಆರ್ ಸೋತ ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಸ್ಥಾನ ಮೇಲೇರಿ ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಐದು ಗೆಲುವು, ಏಳರಲ್ಲಿ ಸೋಲುಂಡು -0.357 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಲ್ಲಿ ಆರು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.441ರನ್​ರೇಟ್​ನೊಂದಿಗೆ ಏಳನೇ ಸ್ಥಾನಲ್ಲಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಆರರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.472 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಏಳು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.605 ರನ್​ರೇಟ್ ಹೊಂದಿದೆ.

IPL 2023: 7 ಪಂದ್ಯಗಳು 19 ರನ್​: ಇದು RCB ಬ್ಯಾಟ್ಸ್​ಮನ್​ಗಳ ವೈಫಲ್ಯದ ಕಥೆ..!

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಆರು ಅರ್ಧಶತಕ ಸಿಡಿಸಿ ಒಟ್ಟು 576 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದು ಫಾಫ್​ಗಿಂತ 1 ರನ್ ಹಿಂದೆಯಿದ್ದಾರಷ್ಟೆ. ಇವರು ಆಡಿದ 12 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 575 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ಶುಭ್​ಮನ್ ಗಿಲ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 11 ಪಂದ್ಯಗಳಿಂದ 469 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
Sanju Samson: ಜೈಸ್ವಾಲ್ ಶತಕ ತಪ್ಪಿಸಲು ಕ್ರೀಡಾ ಸ್ಫೂರ್ತಿ ಮರೆತ ಕೆಕೆಆರ್ ಬೌಲರ್​ಗೆ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ
Image
ಮೈದಾನದಲ್ಲಿ KKR Vs RR ಪಂದ್ಯ ವೀಕ್ಷಿಸಿದ ಜಾಕ್ವೆಲಿನ್; ಕೋಲ್ಕತ್ತಾ ಸೋಲನ್ನು ನಟಿಯ ಹಣೆಗೆ ಕಟ್ಟಿದ ಫ್ಯಾನ್ಸ್
Image
MI vs GT, IPL 2023: ಐಪಿಎಲ್​ನಲ್ಲಿಂದು ಮುಂಬೈ-ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ: ಜಿಟಿ ಗೆದ್ದರೆ ಪ್ಲೇ ಆಫ್​ಗೆ ಲಗ್ಗೆ
Image
ISSF World Cup: ISSF ಶೂಟಿಂಗ್ ವಿಶ್ವಕಪ್: ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಕನ್ನಡತಿ ದಿವ್ಯಾ

ಪರ್ಪಲ್ ಕ್ಯಾಪ್:

ಕೆಕೆಆರ್ ವಿರುದ್ಧ 4 ವಿಕೆಟ್ ಕಿತ್ತು ರಾಜಸ್ಥಾನ್ ತಂಡದ ಸಿನ್ನರ್ ಯುಜ್ವೇಂದ್ರ ಚಹಲ್ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 12 ಪಂದ್ಯಗಳಲ್ಲಿ 21 ವಿಕೆಟ್ ಪಡೆದುಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು ಆಡಿರುವ ಹನ್ನೊಂದು ಪಂದ್ಯಗಳಲ್ಲಿ 19 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಕೂಡ 11 ಪಂದ್ಯಗಳಿಂದ 19 ವಿಕೆಟ್ ಕಿತ್ತು ತೃತೀಯ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್