Yashasvi jaiswal: ಚೊಚ್ಚಲ ಅರ್ಧಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

India vs West Indies 1st Test: ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಲ್ಲಿ ತುಸು ಎಚ್ಚರದಿಂದ ಬ್ಯಾಟ್ ಬೀಸಿದ ಜೈಸ್ವಾಲ್ ಆ ಬಳಿಕ ಆತ್ಮ ವಿಶ್ವಾಸದಿಂದಲೇ ವಿಂಡೀಸ್ ಬೌಲರ್​ಗಳನ್ನು ಎದುರಿಸಿದರು.

Yashasvi jaiswal: ಚೊಚ್ಚಲ ಅರ್ಧಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್
Yashasvi jaiswal
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2023 | 8:55 PM

India vs West Indies 1st Test: ಡೊಮಿನಿಕಾದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಹಾಫ್ ಸೆಂಚುರಿಸಿದ ಸಾಧಕರ ಪಟ್ಟಿಗೆ ಜೈಸ್ವಾಲ್ ಕೂಡ ಸೇರ್ಪಡೆಯಾದರು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್​ ಆರಂಭಿಸಿದ ವೆಸ್ಟ್ ಇಂಡೀಸ್ ವಿರುದ್ಧ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಮೋಡಿ ಮಾಡಿದ್ದರು. ತೇಜ್​ನರೈನ್ ಚಂದ್ರಪಾಲ್ ವಿಕೆಟ್ ಕಬಳಿಸುವ ಶುಭಾರಂಭ ಮಾಡಿದ ಅಶ್ವಿನ್ ಒಟ್ಟು 5 ವಿಕೆಟ್ ಉರುಳಿಸಿದರು. ಮತ್ತೊಂದೆಡೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು. ಪರಿಣಾಮ ಕೇವಲ 150 ರನ್​ಗಳಿಗೆ ವೆಸ್ಟ್ ಇಂಡೀಸ್ ಆಲೌಟ್ ಆಯಿತು.

ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಲ್ಲಿ ತುಸು ಎಚ್ಚರದಿಂದ ಬ್ಯಾಟ್ ಬೀಸಿದ ಜೈಸ್ವಾಲ್ ಆ ಬಳಿಕ ಆತ್ಮ ವಿಶ್ವಾಸದಿಂದಲೇ ವಿಂಡೀಸ್ ಬೌಲರ್​ಗಳನ್ನು ಎದುರಿಸಿದರು. ಅಲ್ಲದೆ ರೋಹಿತ್ ಶರ್ಮಾ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ ಅಲ್ಝಾರಿ ಜೋಸೆಫ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಯಶಸ್ವಿ ಜೈಸ್ವಾಲ್ 104 ಎಸೆತಗಳಲ್ಲಿ ತಮ್ಮ

ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ಭಾರತದ 13ನೇ ಆರಂಭಿಕ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಅನುಭವವನ್ನು ಧಾರೆಯೆರದ ರೋಹಿತ್ ಶರ್ಮಾ 106 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

40 ಓವರ್​ ಮುಕ್ತಾಯದ ವೇಳೆ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 120 ರನ್​ ಕಲೆಹಾಕಿದ್ದು, ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (55) ಹಾಗೂ ರೋಹಿತ್ ಶರ್ಮಾ (51) ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ರೇಮನ್ ರೀಫರ್ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್) , ಜೇಸನ್ ಹೋಲ್ಡರ್ , ರಹಕೀಮ್ ಕಾರ್ನ್‌ವಾಲ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ