IND vs ENG 5th Test: ಯಶಸ್ವಿ ಜೈಸ್ವಾಲ್​ಗೆ ಬೇಕು 125 ರನ್ಸ್: ನಿರ್ಮಾಣವಾಗಲಿದೆ ಯಾರೂ ಮಾಡಿರದ ದಾಖಲೆ

Yashasvi Jaiswal Record: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ-ಇಂಗ್ಲೆಂಡ್ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಜೈಸ್ವಾಲ್ ಕನಿಷ್ಠ 125 ರನ್ ಗಳಿಸಿದರೆ, ಭಾರತದಲ್ಲಿ ಆಡಿದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಯಶಸ್ವಿ ಆಗಲಿದ್ದಾರೆ.

IND vs ENG 5th Test: ಯಶಸ್ವಿ ಜೈಸ್ವಾಲ್​ಗೆ ಬೇಕು 125 ರನ್ಸ್: ನಿರ್ಮಾಣವಾಗಲಿದೆ ಯಾರೂ ಮಾಡಿರದ ದಾಖಲೆ
Yashasvi Jaiswal
Follow us
Vinay Bhat
|

Updated on:Mar 07, 2024 | 7:29 AM

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತದ ಸ್ಟಾರ್ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ರೆಡ್ ಹಾಟ್ ಫಾರ್ಮ್‌ನಲ್ಲಿದ್ದಾರೆ. ಇದುವರೆಗೆ ಆಡಿರುವ ನಾಲ್ಕು ಟೆಸ್ಟ್‌ಗಳಲ್ಲಿ ಎರಡು ದ್ವಿಶತಕ ಹಾಗೂ ಎರಡು ಅರ್ಧಶತಕಗಳ ನೆರವಿನಿಂದ 22ರ ಹರೆಯದ ಕ್ರಿಕೆಟಿಗ 655 ರನ್ ಗಳಿಸಿದ್ದಾರೆ. ಇದುವರೆಗೆ ಆಡಿದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಭಾರತೀಯ ಬ್ಯಾಟರ್‌ನ ಜಂಟಿ ಗರಿಷ್ಠ ಮೊತ್ತ ಇದಾಗಿದೆ. ಮೊದಲ ನಾಲ್ಕು ಟೆಸ್ಟ್‌ಗಳಲ್ಲಿ ಅನೇಕ ದಾಖಲೆಗಳನ್ನು ಮುರಿದ ನಂತರ, ಜೈಸ್ವಾಲ್ ಗುರುವಾರ (ಮಾರ್ಚ್ 7) ಧರ್ಮಶಾಲಾದಲ್ಲಿ ಪ್ರಾರಂಭವಾಗುವ ಐದನೇ ಟೆಸ್ಟ್‌ನಲ್ಲಿ ತಮ್ಮ ಹೆಸರಿಗೆ ಇನ್ನಷ್ಟು ಮೈಲಿಗಲ್ಲುಗಳನ್ನು ಸೇರಿಸಲು ಕಾದು ಕುಳಿತಿದ್ದಾರೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿರುವ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಜೈಸ್ವಾಲ್ ಕನಿಷ್ಠ 125 ರನ್ ಗಳಿಸಿದರೆ, ಭಾರತದಲ್ಲಿ ಆಡಿದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಯಶಸ್ವಿ ಆಗಲಿದ್ದಾರೆ. 1948-49ರ ಭಾರತದಲ್ಲಿ ಆಡಿದ ಸರಣಿಯಲ್ಲಿ ಭಾರತದ ವಿರುದ್ಧ ಐದು ಟೆಸ್ಟ್‌ಗಳಲ್ಲಿ ಒಟ್ಟು 779 ರನ್‌ಗಳನ್ನು ಗಳಿಸಿದ ವೆಸ್ಟ್ ಇಂಡೀಸ್‌ನ ಪ್ರಸಿದ್ಧ ವಿಕೆಟ್‌ಕೀಪರ್-ಬ್ಯಾಟರ್ ಎವರ್ಟನ್ ವೀಕ್ಸ್ ಅವರ 75 ವರ್ಷಗಳ ಹಳೆಯ ದಾಖಲೆಯನ್ನು ಜೈಸ್ವಾಲ್ ಮುರಿಯಲಿದ್ದಾರೆ.

ಇಂದಿನಿಂದ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?

ಭಾರತದಲ್ಲಿ ಆಡಿದ ಟೆಸ್ಟ್ ಸರಣಿಯಲ್ಲಿ ಭಾರತೀಯ ಬ್ಯಾಟರ್‌ನಿಂದ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯು ದಂತಕಥೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1978-79 ರಲ್ಲಿ ವೆಸ್ಟ್ ಇಂಡೀಸ್ ಭಾರತ ಪ್ರವಾಸದ ಸಮಯದಲ್ಲಿ, ಗವಾಸ್ಕರ್ ಆರು ಟೆಸ್ಟ್‌ಗಳಲ್ಲಿ 732 ರನ್ ಗಳಿಸಿದ್ದರು.

ಜೈಸ್ವಾಲ್ ಅವರು ಧರ್ಮಶಾಲಾ ಟೆಸ್ಟ್‌ನಲ್ಲಿ ಕನಿಷ್ಠ 125 ರನ್ ಗಳಿಸಿದರೆ, ಅವರು ಭಾರತದಲ್ಲಿ ಆಡಿದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗುತ್ತಾರೆ. ಅಂದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಆಡಿದ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗುತ್ತಾರೆ.

ಮತ್ತೆ ಲಯ ತಪ್ಪಿದ ಆರ್​ಸಿಬಿ; ಗುಜರಾತ್​ಗೆ ಮೊದಲ ಜಯ

1000 ಟೆಸ್ಟ್ ರನ್ ಪೂರೈಸಿದ ಅತಿ ವೇಗದ ಭಾರತೀಯ

ಜುಲೈ 12, 2023 ರಂದು ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕಾಗಿ ಟೆಸ್ಟ್ ಪಾದಾರ್ಪಣೆ ಮಾಡಿದ ಜೈಸ್ವಾಲ್, ಇದುವರೆಗೆ ಆಡಿದ ಎಂಟು ಟೆಸ್ಟ್‌ಗಳಲ್ಲಿ 971 ರನ್ ಗಳಿಸಿದ್ದಾರೆ. ಅವರು ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 29 ರನ್ ಗಳಿಸಿದರೆ, ಟೆಸ್ಟ್‌ನಲ್ಲಿ ವೇಗವಾಗಿ 1000 ರನ್ ಗಳಿಸಿದ ಭಾರತೀಯ ಬ್ಯಾಟರ್ ಆಗಲಿದ್ದಾರೆ. ಸದ್ಯಕ್ಕೆ, ಭಾರತಕ್ಕಾಗಿ ತಮ್ಮ 11 ನೇ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದ ಗವಾಸ್ಕರ್ ಮತ್ತು ಚೇತೇಶ್ವರ ಪೂಜಾರ ಜಂಟಿಯಾಗಿ ದಾಖಲೆ ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Thu, 7 March 24

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ