AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಸ್ವಾಲ್ ಪರ ಬ್ಯಾಟ್ ಬೀಸಿ, ರಿಂಕು ಸಿಂಗ್ ವಿಚಾರದಲ್ಲಿ ಎಚ್ಚರಿಕೆ ನೀಡಿದ ಗೌತಮ್ ಗಂಭೀರ್

Team India: ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಜೈಸ್ವಾಲ್ ಟೀಂ ಇಂಡಿಯಾದ ಖಾಯಂ ಸದಸ್ಯನಾಗಿರಬೇಕು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಜೈಸ್ವಾಲ್ ಪರ ಬ್ಯಾಟ್ ಬೀಸಿ, ರಿಂಕು ಸಿಂಗ್ ವಿಚಾರದಲ್ಲಿ ಎಚ್ಚರಿಕೆ ನೀಡಿದ ಗೌತಮ್ ಗಂಭೀರ್
ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್
ಪೃಥ್ವಿಶಂಕರ
|

Updated on: Jul 23, 2023 | 12:19 PM

Share

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs West Indies) ಪರ ಟೆಸ್ಟ್ ಕ್ರಿಕೆಟ್​ಗೆ ಪರ್ದಾಪಣೆ ಮಾಡಿರುವ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal), ಆಡಿರುವ ಎರಡೂ ಟೆಸ್ಟ್ ಪಂದ್ಯಗಳಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೆರಿಬಿಯನ್ ದೈತ್ಯರನ್ನು ದಿಟ್ಟವಾಗಿ ಎದುರಿಸಿರುವ ಯಶಸ್ವಿಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಖಾಯಂ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಆದರೆ ಭವಿಷ್ಯದ ಟಿ20 ತಂಡವನ್ನು ಕಟ್ಟುವ ಸಲುವಾಗಿ ಬಿಸಿಸಿಐಗೆ (BCCI) ಕಿವಿಮಾತೊಂದನ್ನು ಹೇಳಿರುವ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir), ಯಶಸ್ವಿ ಜೈಸ್ವಾಲ್ ಅವರನ್ನು ಟೆಸ್ಟ್ ತಂಡ ಮಾತ್ರವಲ್ಲದೆ, ಟಿ20 ಹಾಗೂ ಏಕದಿನ ತಂಡಕ್ಕೂ ಆಯ್ಕೆ ಮಾಡಬೇಕು ಎಂದಿದ್ದಾರೆ. ಅಲ್ಲದೆ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ (T20 World Cup) ಜೈಸ್ವಾಲ್ ಟೀಂ ಇಂಡಿಯಾದ ಖಾಯಂ ಸದಸ್ಯನಾಗಿರಬೇಕು ಎಂದಿದ್ದಾರೆ.

ಯಶಸ್ವಿ ಆಯ್ಕೆಯ ಬಗ್ಗೆ ಸೂಕ್ತ ಕಾರಣವನ್ನೂ ನೀಡಿರುವ ಗಂಭೀರ್, ಜೈಸ್ವಾಲ್ ಐಪಿಎಲ್ ಮಾತ್ರವಲ್ಲದೆ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ರನ್‌ ಕಲೆಹಾಕಿದ್ದಾರೆ. ಹೀಗಾಗಿ ಅವರಿಗೆ ಭಾರತ ತಂಡದಲ್ಲಿ ಮೂರು ಮಾದರಿಯಲ್ಲೂ ಸ್ಥಾನ ನೀಡಬೇಕು ಎಂದಿದ್ದಾರೆ. ಪ್ರಸ್ತುತ ವಿಂಡೀಸ್ ಪ್ರವಾಸಕ್ಕೆ ಮಾತ್ರವಲ್ಲದೆ ಜೈಸ್ವಾಲ್​ರನ್ನು ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡಬೇಕು ಎಂದಿದ್ದಾರೆ.

Yashasvi Jaiswal: 228 ರನ್‌ ಕಲೆಹಾಕಿ ಧವನ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!

ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದ್ದಾರೆ

ಮುಂದುವರೆದು ಮಾತನಾಡಿದ ಗಂಭೀರ್, ಟೀಂ ಇಂಡಿಯಾಕ್ಕೆ ಆಟಗಾರರನ್ನು ಆಯ್ಕೆ ಮಾಡುವಾಗ ಕೇವಲ ಐಪಿಎಲ್ ಪ್ರದರ್ಶನವೊಂದನ್ನೇ ಗಣನೆಗೆ ತೆಗೆದುಕೊಳ್ಳಬಾರದು. ಭಾರತದಲ್ಲಿ, ಸಮಸ್ಯೆಯೆಂದರೆ ನಾವು 2 ತಿಂಗಳ ಐಪಿಎಲ್ ಅನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರೆ ಯಾರು ಉತ್ತಮವಾಗಿ ಆಡುತ್ತಾರೋ ಅವರನ್ನು ನಾವು ಭಾರತ ತಂಡಕ್ಕೆ ಆಯ್ಕೆ ಮಾಡುತ್ತೇವೆ. ಆದರೆ ಜೈಸ್ವಾಲ್ ಐಪಿಎಲ್‌ನಲ್ಲಿ ಮಾತ್ರವಲ್ಲದೆ ದೇಶೀಯ ಕ್ರಿಕೆಟ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ.

ಮೂರು ಮಾದರಿಯಲ್ಲೂ ಅವಕಾಶ ನೀಡಿ

ಅವರು ದೇಶೀಯ ಕ್ರಿಕೆಟ್‌ನಲ್ಲಿ ದ್ವಿಶತಕ ಮತ್ತು ಟ್ರಿಪಲ್ ಸೆಂಚುರಿಯನ್ನು ಸಿಡಿಸಿದ್ದಾರೆ. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ್ದಾರೆ. ಅವರು ಐಪಿಎಲ್‌ನಲ್ಲಿ ಮಾಡಿರುವುದು ಕೇಕ್ ಮೇಲಿನ ಐಸಿಂಗ್ ಮಾತ್ರ ಆದ್ದರಿಂದ ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಭಾಗವಾಗಲು ಅರ್ಹರು ಎಂದು ಗಂಭೀರ್ ಹೇಳಿದ್ದಾರೆ.

ಸ್ಥಿರತೆಯನ್ನು ಪ್ರದರ್ಶಿಸುವ ಅಗತ್ಯವಿದೆ

ಇನ್ನು ಗೇಮ್ ಫಿನಿಶರ್ ರಿಂಕು ಸಿಂಗ್ ಬಗ್ಗೆಯೂ ಮಾತನಾಡಿರುವ ಗಂಭೀರ್, ರಿಂಕು ಸಿಂಗ್ ವಿಷಯದಲ್ಲ ಆಯ್ಕೆದಾರರು ಮತ್ತು ತಂಡದ ಆಡಳಿತ ಮಂಡಳಿ ಎಚ್ಚರ ವಹಿಸಬೇಕು ಎಂದಿದ್ದಾರೆ. ಜೈಸ್ವಾಲ್‌ನಂತೆ, ರಿಂಕು ಕೂಡ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಗೇಮ್ ಫಿನಿಶರ್ ಆಗಿ ಕೆಲವು ಅದ್ಭುತ ನಾಕ್‌ಗಳನ್ನು ಆಡಿದರು. ಆದಾಗ್ಯೂ, ಟಿ20 ತಂಡದಲ್ಲಿ ರಿಂಕು ಸ್ಥಾನ ಪಡೆಯಬೇಕೆಂದರೆ ಅವರು ಮುಂದಿನ ಸೀಸನ್​ನ ದೇಶೀಯ ಕ್ರಿಕೆಟ್ ಮತ್ತು ಐಪಿಎಲ್​ನಲ್ಲಿ ಇದೇ ರೀತಿಯ ಸ್ಥಿರತೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂದು ಗಂಭೀರ್ ನಂಬಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ