AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಆಂಗ್ಲರ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Yashasvi Jaiswal's Stunning Century: ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಅದ್ಭುತವಾದ ಶತಕ ಸಿಡಿಸಿದ್ದಾರೆ. 144 ಎಸೆತಗಳಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ ಅವರು ಶತಕ ಪೂರ್ಣಗೊಳಿಸಿದರು. ಕೆ.ಎಲ್. ರಾಹುಲ್ ಜೊತೆ ಅವರು ಮೊದಲ ವಿಕೆಟ್‌ಗೆ 91 ರನ್‌ಗಳ ಜೊತೆಯಾಟವನ್ನು ನಿರ್ಮಿಸಿದರು, ಇದು ಇಂಗ್ಲೆಂಡ್‌ನಲ್ಲಿ ಭಾರತದ ಆರಂಭಿಕರಿಂದ ದಾಖಲಾದ ಅತ್ಯಧಿಕ ಜೊತೆಯಾಟವಾಗಿದೆ.

IND vs ENG: ಆಂಗ್ಲರ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್
Yashasvi Jaiswal
ಪೃಥ್ವಿಶಂಕರ
|

Updated on:Jun 20, 2025 | 8:45 PM

Share

ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಲೀಡ್ಸ್‌ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಜೈಸ್ವಾಲ್ 144 ಎಸೆತಗಳಲ್ಲಿ 16 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಶತಕ ಪೂರೈಸಿದ್ದಾರೆ. ಆರಂಭದಿಂದಲೂ ಇಂಗ್ಲೆಂಡ್‌ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿದ ಜೈಸ್ವಾಲ್, ಮೈದಾನದಲ್ಲಿ ಬೌಂಡರಿಗಳ ಮಳೆ ಸುರಿಸಿದರು. ಅಲ್ಲದೆ ಮತ್ತೊಬ್ಬ ಆರಂಭಿಕ ಕೆಎಲ್ ರಾಹುಲ್ (KL Rahul) ಜೊತೆ ಸೇರಿ ಮೊದಲ ವಿಕೆಟ್​ಗೆ ದಾಖಲೆಯ 91 ರನ್​ಗಳ ಜೊತೆಯಾಟವನ್ನು ಕಟ್ಟಿದರು. ಇವರಿಬ್ಬರ ಜೊತೆಯಾಟ ಇಂಗ್ಲೆಂಡ್‌ ನೆಲದಲ್ಲಿ ಅದರಲ್ಲೂ ಲೀಡ್ಸ್ ಮೈದಾನದಲ್ಲಿ ಭಾರತದ ಆರಂಭಿಕರಿಂದ ದಾಖಲಾದ ಅತ್ಯಧಿಕ ಜೊತೆಯಾಟ ಎಂಬ ದಾಖಲೆಯನ್ನು ಸೃಷ್ಟಿಸಿತು.

ಈ ಸಾಧನೆ ಮಾಡಿದ ಐದನೇ ಭಾರತೀಯ

ಇಂಗ್ಲೆಂಡ್‌ ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಯಶಸ್ವಿ ಜೈಸ್ವಾಲ್ 96 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಆ ಬಳಿಕ ಮುಂದಿನ 48 ಎಸೆತಗಳಲ್ಲಿ ಉಳಿದ 50 ರನ್​ಗಳನ್ನು ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ ಐದನೇ ಶತಕವನ್ನು ಪೂರೈಸಿದರು. ಇದರೊಂದಿಗೆ, ಇಂಗ್ಲೆಂಡ್‌ನಲ್ಲಿ ತಮ್ಮ ಮೊದಲ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೈಸ್ವಾಲ್​ಗೂ ಮೊದಲು ಮುರಳಿ ವಿಜಯ್, ವಿಜಯ್ ಮಂಜ್ರೇಕರ್, ಸೌರವ್ ಗಂಗೂಲಿ ಹಾಗೂ ಸಂದೀಪ್ ಪಾಟೀಲ್ ಶತಕದ ಸಾಧನೆ ಮಾಡಿದ್ದರು.

ಇಂಗ್ಲೆಂಡ್ ವಿರುದ್ಧ ದ್ವಿಶತಕ

ವಾಸ್ತವವಾಗಿ ಇದು ಜೈಸ್ವಾಲ್ ಅವರ ಇಂಗ್ಲೆಂಡ್ ವಿರುದ್ಧದ ಆರನೇ ಪಂದ್ಯವಾಗಿದೆ. ವಿಶೇಷವೆಂದರೆ ಜೈಸ್ವಾಲ್ ಈ ತಂಡದ ವಿರುದ್ಧದ ಪ್ರತಿ ಟೆಸ್ಟ್‌ನಲ್ಲಿಯೂ 50+ ರನ್ ಕಲೆಹಾಕಿದ್ದಾರೆ. ಇದಕ್ಕೂ ಮೊದಲು, ಅವರು ಇಂಗ್ಲೆಂಡ್ ವಿರುದ್ಧ 2 ದ್ವಿಶತಕಗಳನ್ನು ಬಾರಿಸಿದ್ದಾರೆ. ಇದೆಲ್ಲದರ ಜೊತೆಗೆ ಇದು ಇಂಗ್ಲೆಂಡ್‌ ನೆಲದಲ್ಲಿ ಜೈಸ್ವಾಲ್ ಅವರ ಮೊದಲ ಟೆಸ್ಟ್ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

IND vs ENG: ಲೀಡ್ಸ್‌ನಲ್ಲಿ ಮೊದಲ ದಿನವೇ ಇತಿಹಾಸ ಸೃಷ್ಟಿಸಿದ ರಾಹುಲ್-ಜೈಸ್ವಾಲ್ ಜೋಡಿ

ಮೊದಲ ಭಾರತೀಯ ಆರಂಭಿಕ ಆಟಗಾರ

ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದು, ಲೀಡ್ಸ್‌ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ಯಾವುದೇ ಭಾರತೀಯ ಆರಂಭಿಕ ಆಟಗಾರ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಯಶಸ್ವಿ ಜೈಸ್ವಾಲ್ ಅವರ ಟೆಸ್ಟ್ ವೃತ್ತಿಜೀವನದ ಕೇವಲ 20 ನೇ ಪಂದ್ಯ ಇದಾಗಿದ್ದು, ಅವರು ಇಲ್ಲಿಯವರೆಗೆ 5 ಶತಕಗಳನ್ನು ಬಾರಿಸಿದ್ದಾರೆ. ಈ ಪೈಕಿ 3 ಶತಕಗಳು ಭಾರತದ ಹೊರಗೆ ಬಂದಿವೆ.

Published On - 8:09 pm, Fri, 20 June 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ