Year Ender 2024: ಟೀಂ ಇಂಡಿಯಾದ 11 ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿದ ವರ್ಷವಿದು

Year Ender 2024: ಭಾರತ ಕ್ರಿಕೆಟ್​ಗೆ 2024 ಬಹಳ ವಿಶೇಷವಾಗಿತ್ತು. ಈ ವರ್ಷ ಟೀಂ ಇಂಡಿಯಾ ಹಲವು ಮೈಲಿಗಲ್ಲುಗಳನ್ನು ಸಾಧಿಸಿತು. ಅದರಲ್ಲೂ ಈ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಚಾಂಪಿಯನ್ ಆಯಿತು. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದ ಭಾರತ, ಒಂದೇ ಪಂದ್ಯವನ್ನೂ ಸೋಲದೆ ಫೈನಲ್‌ ತಲುಪಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸಿತು. ರೋಹಿತ್ ಶರ್ಮಾ ನಾಯಕತ್ವದ ತಂಡದ ಗೆಲುವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯವಾಗಿದೆ.

Year Ender 2024: ಟೀಂ ಇಂಡಿಯಾದ 11 ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿದ ವರ್ಷವಿದು
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 14, 2024 | 6:18 PM

ಭಾರತ ಕ್ರಿಕೆಟ್​ಗೆ 2024 ಬಹಳ ವಿಶೇಷವಾಗಿತ್ತು. ಈ ವರ್ಷ ಟೀಂ ಇಂಡಿಯಾ ಹಲವು ಮೈಲಿಗಲ್ಲುಗಳನ್ನು ಸಾಧಿಸಿತು. ಅದರಲ್ಲಿ ಪ್ರಮುಖವಾಗಿ ಬರೋಬ್ಬರಿ 11 ವರ್ಷಗಳ ನಂತರ ಟೀಂ ಇಂಡಿಯಾ ತನ್ನ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿಕೊಂಡಿತ್ತು. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ ಈ ಬಾರಿಯ ಟಿ20 ವಿಶ್ವಕಪ್​ ಟೀಂ ಇಂಡಿಯಾದ ಕೈಸೇರಿತ್ತು. ವೆಸ್ಟ್ ಇಂಡೀಸ್​ನ ಕೆನ್ಸಿಂಗ್ಟನ್ ಓವಲ್ ಬಾರ್ಬಡೋಸ್ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಿದ್ದ ಟೀಂ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಈ ವಿಶ್ವಕಪ್​ನ ಇನ್ನೊಂದು ವಿಶೇಷವೆಂದರೆ ಇಡೀ ಟೂರ್ನಿಯಲ್ಲಿ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಶ್ವಕಪ್ ಕಣಕ್ಕಿಳಿದಿದ್ದ ಭಾರತ ತಂಡ ಬಲಿಷ್ಠ ತಂಡಗಳನ್ನು ಮಣಿಸಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿತ್ತು.

ದಿಗ್ಗಜರ ವಿದಾಯ

ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಗೆಲುವಿನೊಂದಿಗೆ ತಂಡದ ಲೆಜೆಂಡರಿ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿದ್ದರು. ಇವರ ಜೊತೆಗೆ ಅಂದು ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್​ ಕೂಡ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು.

ಪಂದ್ಯ ಹೀಗಿತ್ತು

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 176 ರನ್ ಗಳಿಸಿತು. ತಂಡದ ಪರ ವಿರಾಟ್ ಕೊಹ್ಲಿ ಗರಿಷ್ಠ 76, ಅಕ್ಷರ್ ಪಟೇಲ್ 47 ಮತ್ತು ಶಿವಂ ದುಬೆ 27 ರನ್​ಗಳ ಕಾಣಿಕೆ ನೀಡಿದರು. ಇತ್ತ ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಮತ್ತು ಎನ್ರಿಕ್ ನೋಕಿಯಾ ತಲಾ 2 ವಿಕೆಟ್ ಪಡೆದರೆ, ಮಾರ್ಕೊ ಯಾನ್ಸೆನ್ ಮತ್ತು ಕಗಿಸೊ ರಬಾಡ ತಲಾ 1 ವಿಕೆಟ್ ಪಡೆದರು.

177 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕತವಾಗಿ 7 ರನ್​ಗಳಿಂದ ಚಾಂಪಿಯನ್ ಪಟ್ಟವನ್ನು ಕಳೆದುಕೊಂಡಿತು. ಆಫ್ರಿಕಾ ಪರ ಏಕಾಂಗಿ ಹೋರಾಟ ನಡೆಸಿದ್ದ ಹೆನ್ರಿಕ್ ಕ್ಲಾಸೆನ್ 52 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ 39 ರನ್, ಟ್ರಿಸ್ಟಾನ್ ಸ್ಟಬ್ಸ್ 31 ರನ್ ಡೇವಿಡ್ ಮಿಲ್ಲರ್ 21 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಕೂಡ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sat, 14 December 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ