Yudhvir Singh: ಜಮ್ಮು ಕಾಶ್ಮೀರದ ಯುವ ವೇಗಿಗೆ ಟೀಮ್ ಇಂಡಿಯಾದಿಂದ ಬುಲಾವ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹೊಸಮುಖವಾಗಿ ಎಡಗೈ ವೇಗಿ ಯಶ್ ದಯಾಳ್ ಆಯ್ಕೆಯಾಗಿದ್ದು, ಇವರ ಜೊತೆ ಸರ್ಫರಾಝ್ ಖಾನ್ ಹಾಗೂ ಆಕಾಶ್​ ದೀಪ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Yudhvir Singh: ಜಮ್ಮು ಕಾಶ್ಮೀರದ ಯುವ ವೇಗಿಗೆ ಟೀಮ್ ಇಂಡಿಯಾದಿಂದ ಬುಲಾವ್
Yudhvir Singh
Follow us
| Updated By: ಝಾಹಿರ್ ಯೂಸುಫ್

Updated on: Sep 10, 2024 | 7:23 AM

ಜಮ್ಮು ಕಾಶ್ಮೀರದ ಯುವ ವೇಗಿ ಯುಧ್ವೀರ್ ಸಿಂಗ್ ಚರಕ್ ಅವರನ್ನು ಭಾರತ ತಂಡದ ಕ್ಯಾಂಪ್​ಗೆ ಆಯ್ಕೆ ಮಾಡಲಾಗಿದೆ. ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನೆಟ್ ಬೌಲರ್​ ಆಗಿ ಭಾರತ ತಂಡದ ಶಿಬಿರವನ್ನು ಕೂಡಿಕೊಳ್ಳುವಂತೆ ಆಯ್ಕೆ ಸಮಿತಿ ಯುಧ್ವೀರ್​ಗೆ ತಿಳಿಸಿದೆ. ಅದರಂತೆ ಸೆಪ್ಟೆಂಬರ್ 12 ರಿಂದ ಆರಂಭವಾಗಲಿರುವ ಟೀಮ್ ಇಂಡಿಯಾ ಶಿಬಿರದಲ್ಲಿ ಜಮ್ಮು ಕಾಶ್ಮೀರದ ವೇಗಿ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಯುಧ್ವೀರ್ ಸಿಂಗ್ ಚರಕ್ ಅತ್ಯುತ್ತಮ ವೇಗದ ಬೌಲಿಂಗ್​ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಬುಚ್ಚಿ ಬಾಬು ಟೂರ್ನಿ, ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಆಯ್ಕೆ ಸಮಿತಿ ಇದೀಗ ಯುವ ವೇಗಿಯನ್ನು ನೆಟ್ ಬೌಲರ್ ಆಗಿ ಆಯ್ಕೆ ಮಾಡಿಕೊಂಡಿದೆ.

ಯುಧ್ವೀರ್ ಸಿಂಗ್ ಚರಕ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿರುವ ಯುಧ್ವೀರ್ ಕಳೆದ ಸೀಸನ್​ನಲ್ಲಿ 5 ಪಂದ್ಯಗಳನ್ನಾಡಿದ್ದರು. ಈ ವೇಳೆ 4 ವಿಕೆಟ್ ಕಬಳಿಸಿದ್ದರು. ಇದೇ ವೇಳೆ ಉತ್ತಮ ವೇಗದ ಬೌಲಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಇದೀಗ ಯುವ ವೇಗಿಯನ್ನು ನೆಟ್ ಬೌಲರ್​ ಆಗಿ ಆಯ್ಕೆ ಮಾಡಲಾಗಿದ್ದು, ಈ ಮೂಲಕ ಅನುಭವಿ ಆಟಗಾರರೊಂದಿಗೆ ಬೆರೆಯಲು ಅವಕಾಶ ಕಲ್ಪಿಸಲಾಗಿದೆ.

ಭಾರತ-ಬಾಂಗ್ಲಾದೇಶ್ ಟೆಸ್ಟ್ ಸರಣಿ:

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹೊಸಮುಖವಾಗಿ ಎಡಗೈ ವೇಗಿ ಯಶ್ ದಯಾಳ್ ಆಯ್ಕೆಯಾಗಿದ್ದು, ಇವರ ಜೊತೆ ಸರ್ಫರಾಝ್ ಖಾನ್ ಹಾಗೂ ಆಕಾಶ್​ ದೀಪ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗೆಯೇ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಈ ಸರಣಿಯೊಂದಿಗೆ ಟೆಸ್ಟ್ ಕ್ರಿಕೆಟ್​​ಗೆ ಮರಳಲಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ
1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ