Yuvraj Singh arrested: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ
Yuvraj Singh arrested In Haryana: ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು.
ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh arrested) ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ (Rohits sharma) ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಲವು ದಿನಗಳ ಹಿಂದೆ ಯುವರಾಜ್ ಸಿಂಗ್ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ, ಹಂಸಿ ಪೊಲೀಸರು ಆತನನ್ನು ಔಪಚಾರಿಕವಾಗಿ ಬಂಧಿಸಿ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ನಿರೀಕ್ಷಣಾ ಜಾಮೀನು ಪತ್ರಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ.
ಘಟನೆ ಹಿನ್ನೆಲೆ: 2020ರ ಜೂನ್ನಲ್ಲಿ ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಚಹಲ್ ಮಾಡೋ ಟಿಕ್-ಟಾಕ್ ವೀಡಿಯೊ ಬಗ್ಗೆ ಪ್ರಸ್ತಾಪಿಸಿದ್ದ ಯುವಿ , ಈ ಯುಜಿ ಹಾಗೂ ಕುಲ್ದೀಪ್ಗೆ ಬೇರೆ ಕೆಲಸ ಇಲ್ಲ ಎಂದಿದ್ದರು. ಇದೇ ವೇಳೆ ಜಾತಿಯನ್ನು ಪ್ರಸ್ತಾಪಿಸಿ ಹೀಯಾಳಿಸಿದ್ದರು.
ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ದಲಿತ ಮಾನವ ಹಕ್ಕುಗಳ ವಕೀಲ ಕನ್ವೀನರ್ ರಜತ್ ಕಲ್ಸನ್ ಅವರು ದೂರು ನೀಡಿದ್ದರು. ಅದರಂತೆ ಹರ್ಯಾಣದ ಹಿಸಾರ್‌ನ ಹಂಸಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 153, 153 ಎ, 295, 505 ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ
ಇದನ್ನೂ ಓದಿ: IPL 2021: ಈ ಬಾರಿಯ ಐಪಿಎಲ್ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?
ಇದನ್ನೂ ಓದಿ: IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ
(Yuvraj Singh arrested In Haryana)
Published On - 10:18 pm, Sun, 17 October 21