Viral Video: ಮೋಜು ಮಸ್ತಿಯಲ್ಲಿ ಇಂಡಿಯಾ ಲೆಜೆಂಡ್ಸ್: ಯುವರಾಜ್ ಸಿಂಗ್ ಮಸ್ತ್ ಡ್ಯಾನ್ಸ್
Yuvraj singh Dance Video: ಸೌತ್ ಆಫ್ರಿಕಾ ಲೆಜೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.
ಪ್ರಸ್ತುತ ನಡೆಯುತ್ತಿರುವ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ನಲ್ಲಿ ಇಂಡಿಯಾ ಲೆಜೆಂಡ್ಸ್ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಈ ಗೆಲುವಿನ ಖುಷಿಯಲ್ಲಿರುವ ಟೀಮ್ ಇಂಡಿಯಾದ ಮಾಜಿ ಆಟಗಾರರು ಇದೀಗ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ , ಇರ್ಫಾನ್ ಪಠಾಣ್, ಸುರೇಶ್ ರೈನಾ ಮುಂತಾದ ದಿಗ್ಗಜರು ಮೈದಾನದಲ್ಲೂ ಮೈದಾನದ ಹೊರಗೂ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಒದಗಿಸುತ್ತಿದ್ದಾರೆ. ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಪಂದ್ಯದ ನಂತರ ಪಾರ್ಟಿಯಲ್ಲಿ ಯುವರಾಜ್ ಸಿಂಗ್ ಮಸ್ತ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಇತರೆ ಆಟಗಾರರು ಕೂತಿದ್ದರೆ ಯುವಿ ಮಾತ್ರ ಭರ್ಜರಿ ಡ್ಯಾನ್ಸ್ ಮಾಡುವ ಮೂಲಕ ಎಲ್ಲರನ್ನು ರಂಜಿಸುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅಲ್ಲದೆ ಹಳೇ ಬಾಲಿವುಡ್ ಹಾಡುಗಳಿಗೆ ಸ್ಟೆಪ್ಸ್ ಹಾಕುವ ಮೂಲಕ ಎಲ್ಲರಿಗೂ ಮನರಂಜನೆ ಒದಗಿಸಿದರು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಿಯ ಮೋಜು ಮಸ್ತಿಗೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
Having fun with two legendary singers ? @IrfanPathan @ImRaina ? and of course the legend of legends @sachin_rt ? @munafpa99881129 @ManpreetGony @pragyanojha #roadsafetyworldseries #indialegends pic.twitter.com/wjP31UcYVZ
— Yuvraj Singh (@YUVSTRONG12) September 12, 2022
ಇನ್ನು ಯುವರಾಜ್ ಸಿಂಗ್ ಅವರ ಈ ಡ್ಯಾನ್ಸ್ ವಿಡಿಯೋಗೆ ಕಾಮೆಂಟ್ ಮಾಡಿರುವ ಇರ್ಫಾನ್ ಪಠಾಣ್, ನಮ್ಮ ತಂಡದಲ್ಲಿ ಅತ್ಯಂತ ದುಬಾರಿ ಚಿಯರ್ ಲೀಡರ್ ಇದ್ದಾರೆ ಎಂದು ಕಿಚಾಯಿಸಿದ್ದಾರೆ.
ಇದಕ್ಕೂ ಮುನ್ನ ಸೌತ್ ಆಫ್ರಿಕಾ ಲೆಜೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ಉತ್ತರವಾಗಿ ಸೌತ್ ಆಫ್ರಿಕಾ ತಂಡ ಕೇವಲ 156 ರನ್ ಗಳಿಸಲಷ್ಟೇ ಶಕ್ತವಾಯಿತು. ಇಂಡಿಯಾ ಲೆಜೆಂಡ್ಸ್ ಪರ ಸ್ಟುವರ್ಟ್ ಬಿನ್ನಿ 42 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.