AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯನ್ ಪ್ರೀಮಿಯರ್​ ಲೀಗ್​ಗೆ ಯುವರಾಜ್ ಸಿಂಗ್ ರಿಎಂಟ್ರಿ!

ಭಾರತೀಯ ಕ್ರಿಕೆಟ್‌ನ ದಂತಕಥೆ, ಸಿಕ್ಸರ್‌ ಕಿಂಗ್ ಯುವರಾಜ್ ಸಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಅಧಿಕೃತವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಆಟಗಾರನಾಗಿ ಜಗತ್ತಿನ ಬಲಿಷ್ಠ ಬೌಲರ್‌ಗಳನ್ನೇ ಧೂಳೀಪಟ ಮಾಡುತ್ತಿದ್ದ ಯುವಿ, ಈಗ ಕೋಚ್ ಆಗಿ ಡೆಲ್ಲಿಯ ಯುವ ಬ್ಯಾಟರ್‌ಗಳಿಗೆ ಅಬ್ಬರದ ಬ್ಯಾಟಿಂಗ್ ಪಾಠ ಹೇಳಿಕೊಡಲು ಡಗೌಟ್‌ಗೆ ಮರಳುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್​ ಲೀಗ್​ಗೆ ಯುವರಾಜ್ ಸಿಂಗ್ ರಿಎಂಟ್ರಿ!
Yuvraj SinghImage Credit source: IPL
ಝಾಹಿರ್ ಯೂಸುಫ್
|

Updated on: Oct 15, 2026 | 12:20 PM

Share

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಲ್​ರೌಂಡರ್, ವಿಶ್ವಕಪ್‌ ಹೀರೊ ಯುವರಾಜ್ ಸಿಂಗ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಅವರು ಬ್ಯಾಟ್ ಹಿಡಿದು ಮೈದಾನಕ್ಕಿಳಿಯುತ್ತಿಲ್ಲ, ಬದಲಿಗೆ ಮುಂಬರುವ ಐಪಿಎಲ್ 2027ರ ಆವೃತ್ತಿಗಾಗಿ ಡೆಲ್ಲಿ ಕ್ಯಾಪಿಟಲ್ಸ್  ತಂಡದ ಸಹಾಯಕ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಯುವಿ ಅವರ ಕ್ರಿಕೆಟ್ ಜೀವನದಲ್ಲಿ ಇದು ಮೊದಲ ಅಧಿಕೃತ ಪೂರ್ಣ ಪ್ರಮಾಣದ ಕೋಚಿಂಗ್ ಜವಾಬ್ದಾರಿಯಾಗಿದೆ. ಈ ಹಿಂದೆ ಅವರು ಶುಭ್‌ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಅವರಂತಹ ಯುವ ಆಟಗಾರರಿಗೆ ವೈಯಕ್ತಿಕವಾಗಿ ಮಾರ್ಗದರ್ಶನ ನೀಡಿದ್ದಾರಾದರೂ, ಐಪಿಎಲ್ ತಂಡವೊಂದರ ಕೋಚಿಂಗ್ ಸ್ಟಾಫ್ ಸೇರುತ್ತಿರುವುದು ಇದೇ ಮೊದಲು.

ಡೆಲ್ಲಿ ಕ್ಯಾಪಿಟಲ್ಸ್ ಇತ್ತೀಚೆಗಷ್ಟೇ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ತನ್ನ ಮುಖ್ಯ ತರಬೇತುದಾರರನ್ನಾಗಿ ಘೋಷಿಸಿತ್ತು. ಇದೀಗ ಗಂಗೂಲಿ ಅವರ ನೇತೃತ್ವದ ಕೋಚಿಂಗ್ ತಂಡಕ್ಕೆ ಯುವರಾಜ್ ಸಿಂಗ್ ಸೇರ್ಪಡೆಯಾಗಿದ್ದಾರೆ.

ತಮ್ಮ ಹೊಸ ಜವಾಬ್ದಾರಿಯ ಕುರಿತು ಡೆಲ್ಲಿ ಕ್ಯಾಪಿಟಲ್ಸ್ ಸಂದರ್ಶನದಲ್ಲಿ ಮಾತನಾಡಿದ ಯುವಿ, “ದಾದಾ ನನ್ನ ಬಳಿ ಬಂದು ‘ನನ್ನ ಅಸಿಸ್ಟೆಂಟ್ ಆಗುವಿಯಾ?’ ಎಂದು ಕೇಳಿದರು. ನಾನು ಕಳೆದ 25 ವರ್ಷಗಳಿಂದಲೂ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ, ಈಗಲೂ ಅದೇ ಕೆಲಸ ಮಾಡುತ್ತೇನೆ ಎಂದು ತಮಾಷೆ ಮಾಡಿದೆ. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್​ ತಂಡದೊಂದಿಗೆ ಹೊಸ ಅಧ್ಯಾಯ ಆರಂಭಿಸಲು ನಾನು ತುಂಬಾ ಉತ್ಸುಕನಾಗಿದ್ದೇನೆ” ಎಂದು ಸಂತಸ ಹಂಚಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮಹತ್ವದ ಬದಲಾವಣೆಗಳು:

ಕಳೆದ 2026ರ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು ಮತ್ತು ಪ್ಲೇ-ಆಫ್ ತಲುಪಲು ವಿಫಲವಾಗಿತ್ತು. ಹೀಗಾಗಿ ಫ್ರಾಂಚೈಸಿಯು ತನ್ನ ಸಂಪೂರ್ಣ ಕೋಚಿಂಗ್ ಸಿಬ್ಬಂದಿಯನ್ನು ಬದಲಾಯಿಸಿದೆ…

  • ಹೊಸ ಕೋಚಿಂಗ್ ತಂಡ: ಸೌರವ್ ಗಂಗೂಲಿ (ಮುಖ್ಯ ಕೋಚ್) ಮತ್ತು ಯುವರಾಜ್ ಸಿಂಗ್ (ಸಹಾಯಕ ಹಾಗೂ ಬ್ಯಾಟಿಂಗ್ ಕೋಚ್).
  • ಕೈಬಿಡಲಾದ ಸಿಬ್ಬಂದಿ: ಹೇಮಂಗ್ ಬದಾನಿ (ಹಿಂದಿನ ಮುಖ್ಯ ಕೋಚ್), ವೇಣುಗೋಪಾಲ್ ರಾವ್ (ಬ್ಯಾಟಿಂಗ್ ಕೋಚ್), ಮುನಾಫ್ ಪಟೇಲ್ (ಬೌಲಿಂಗ್ ಕೋಚ್), ಇಯಾನ್ ಬೆಲ್ (ಸಹಾಯಕ ಕೋಚ್).

11 ವರ್ಷಗಳ ಬಳಿಕ ಡೆಲ್ಲಿಗೆ ಮರಳಿದ ಯುವಿ!

ಯುವರಾಜ್ ಸಿಂಗ್ ಅವರಿಗೆ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿ ಹೊಸದೇನಲ್ಲ. 2015ರ ಐಪಿಎಲ್ ಹರಾಜಿನಲ್ಲಿ ಆಗಿನ ಡೆಲ್ಲಿ ಡೇರ್‌ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ತಂಡವು ಯುವಿ ಅವರನ್ನು ಬರೊಬ್ಬರಿ ₹16 ಕೋಟಿ ನೀಡಿ ಖರೀದಿಸಿತ್ತು. ಆ ಸಮಯದಲ್ಲಿ ಅವರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದರು. ಇದೀಗ ಸರಿಯಾಗಿ 11 ವರ್ಷಗಳ ಬಳಿಕ ಅವರು ಕೋಚ್ ರೂಪದಲ್ಲಿ ಡೆಲ್ಲಿ ಅಂಗಳಕ್ಕೆ ಮರಳಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ದಾಖಲೆಗಳ ಮೇಲೆ ದಾಖಲೆ… ಒಂದೇ ಪಂದ್ಯದಲ್ಲಿ 10 ದಾಖಲೆ ಬರೆದ ಶಾಯ್ ಹೋಪ್

ಒಟ್ಟಾರೆಯಾಗಿ ಹೇಳುವುದಾದರೆ, ಯುವರಾಜ್ ಸಿಂಗ್ ಅವರ ಈ ಹೊಸ ಇನಿಂಗ್ಸ್ ಐಪಿಎಲ್ 2027ರ ಅತಿ ದೊಡ್ಡ ಆಕರ್ಷಣೆಗಳಲ್ಲಿ ಒಂದಾಗುವುದರಲ್ಲಿ ಸಂಶಯವಿಲ್ಲ. ಆಟಗಾರನಾಗಿ ಮೈದಾನದಲ್ಲಿ ಎದುರಾಳಿಗಳನ್ನು ನಡುಗಿಸುತ್ತಿದ್ದ ಸಿಕ್ಸರ್‌ಗಳ ಸರದಾರ, ಈಗ ಡಗೌಟ್‌ನಲ್ಲಿ ಕುಳಿತು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಾವ ರೀತಿಯ ತಂತ್ರ ರೂಪಿಸಲಿದ್ದಾರೆ ಎಂಬುದು ಭಾರಿ ಕುತೂಹಲ ಮೂಡಿಸಿದೆ. ಸೌರವ್ ಗಂಗೂಲಿ ಅವರ ಅನುಭವ ಮತ್ತು ಯುವರಾಜ್ ಸಿಂಗ್ ಅವರ ಆಕ್ರಮಣಕಾರಿ ಚಿಂತನೆ ಒಟ್ಟಿಗೆ ಸೇರಿದಾಗ, ಇದುವರೆಗೆ ಐಪಿಎಲ್ ಟ್ರೋಫಿ ಗೆಲ್ಲದ ಡೆಲ್ಲಿ ತಂಡದ ಹಣೆಬರಹ ಬದಲಾದರೂ ಅಚ್ಚರಿಯಿಲ್ಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು