IND vs PAK: ಭಾರತದ ವಿರುದ್ಧ ಪಾಕಿಸ್ತಾನ್ ಮೇಲುಗೈ: ಯುವರಾಜ್ ಸಿಂಗ್
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಜಿದ್ದಾಜಿದ್ದಿನ ಕದನ ನಡೆಯುತ್ತಿರುವುದು ದುಬೈನಲ್ಲಿ. ಅಂದರೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅದರಂತೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ದುಬೈನಲ್ಲೇ ಮುಖಾಮುಖಿಯಾಗಲಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಕ್ರಿಕೆಟ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 23 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಇಂಡೊ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗಲಿದೆ. ಸಾಂಪ್ರದಾಯಿಕ ಎದುರಾಳಿಗಳು ಈ ಬಾರಿ ದುಬೈನಲ್ಲಿ ಮುಖಾಮುಖಿಯಾಗುತ್ತಿರುವುದು ವಿಶೇಷ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತ ತಂಡದ ಮ್ಯಾಚ್ಗಳು ದುಬೈನಲ್ಲಿ ನಡೆಯಲಿದೆ. ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕಿರುವುದು.
ಅದರಂತೆ ಇದೀಗ ಉಭಯ ತಂಡಗಳು ಇಂಡೊ-ಪಾಕ್ ಕದನಕ್ಕಾಗಿ ಸಜ್ಜಾಗುತ್ತಿದೆ. ಈ ಸಜ್ಜಾಗುವಿಕೆಯೊಂದಿಗೆ ಈ ಬಾರಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಕುತೂಹಲಕಾರಿ ಪ್ರಶ್ನೆಯನ್ನು ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರ ಮುಂದಿಡಲಾಗಿತ್ತು.
ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಯುವರಾಜ್ ಸಿಂಗ್ ಅವರಿಗೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಯುವಿ, ಈ ಬಾರಿ ಪಾಕಿಸ್ತಾನ್ ತಂಡ ಮೇಲುಗೈ ಹೊಂದಿದೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇಲ್ಲಿ ಪಾಕಿಸ್ತಾನ್ ತಂಡ ಹೆಚ್ಚಿನ ಪಂದ್ಯಗಳನ್ನಾಡಿದೆ. ಹೀಗಾಗಿ ಗೆಲ್ಲುವ ಫೇವರೇಟ್ಗಳಲ್ಲಿ ಪಾಕಿಸ್ತಾನ್ ತಂಡ ಮೇಲುಗೈ ಹೊಂದಿದೆ ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಪಾಕಿಸ್ತಾನ್ ತಂಡವು ಯುಎಇನಲ್ಲಿ ಈವರೆಗೆ 28 ಪಂದ್ಯಗಳನ್ನಾಡಿದ್ದು, ಈ ವೇಳೆ 19 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಅದರಲ್ಲೂ ಕಳೆದ ಕೆಲ ವರ್ಷಗಳ ಕಾಲ ಪಾಕ್ ಪಡೆ ಶಾರ್ಜಾ ಹಾಗೂ ದುಬೈ ಅನ್ನು ತವರು ಮೈದಾನವಾಗಿ ಪರಿಗಣಿಸಿತ್ತು. ಇದರ ಸಂಪೂರ್ಣ ಲಾಭ ಪಾಕಿಸ್ತಾನ್ ತಂಡಕ್ಕೆ ಸಿಗಲಿದೆ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ
ಇದೇ ಕಾರಣದಿಂದಾಗಿ ಯುವರಾಜ್ ಸಿಂಗ್ ಈ ಬಾರಿ ಪಾಕಿಸ್ತಾನ್ ತಂಡ ಮೇಲುಗೈ ಹೊಂದಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸಮತೋಲಿತ ಹಾಗೂ ಬಲಿಷ್ಠ ಪಡೆಯನ್ನು ಹೊಂದಿರುವ ಟೀಮ್ ಇಂಡಿಯಾ ಮರಳುಗಾಡಿನ ಮೈದಾನದಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿಯುವುದನ್ನು ಎದುರು ನೋಡಬಹುದು.
