AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಯುವರಾಜ್ ಸಿಂಗ್: ಧೋನಿಗಿಲ್ಲ ಸ್ಥಾನ..!

Yuvraj Singh: ಯುವರಾಜ್ ಸಿಂಗ್ ಅವರು ಈ ಹಿಂದೆ ತಮ್ಮ ನೆಚ್ಚಿನ ನಾಯಕನಾಗಿ ಸೌರವ್ ಗಂಗೂಲಿ ಅವರನ್ನು ಹೆಸರಿಸಿದ್ದರು. ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ಹೆಚ್ಚು ಕಾಲ ಆಡಿದ್ದರೂ, ನಾನು ಕಂಡಂತಹ ಬೆಸ್ಟ್ ಕ್ಯಾಪ್ಟನ್ ಗಂಗೂಲಿ ಎಂದು ಯುವಿ ಹೇಳಿದ್ದರು. ಇದೀಗ ಯುವರಾಜ್ ಸಿಂಗ್ ಆಯ್ಕೆ ಮಾಡಿದ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲೂ ಧೋನಿ ಕಾಣಿಸಿಕೊಂಡಿಲ್ಲ.

ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಯುವರಾಜ್ ಸಿಂಗ್: ಧೋನಿಗಿಲ್ಲ ಸ್ಥಾನ..!
Yuvi-Dhoni
ಝಾಹಿರ್ ಯೂಸುಫ್
|

Updated on: Jul 14, 2024 | 11:22 AM

Share

ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿರುವ ಯುವರಾಜ್ ಸಿಂಗ್ (Yuvraj Singh) ತಮ್ಮ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ್ದಾರೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರತ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸ್ಥಾನ ನೀಡಿಲ್ಲ ಎಂಬುದು ವಿಶೇಷ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಬಿಡುವಿನಲ್ಲಿ ಟಿವಿ ನಿರೂಪಕಿ ಶೆಫಾಲಿ ಬಗ್ಗಾ ಅವರ ಸಂದರ್ಶನದಲ್ಲಿ ಯುವರಾಜ್ ಸಿಂಗ್ ಕಾಣಿಸಿಕೊಂಡಿದ್ದರು. ಈ ವೇಳೆ ನಿಮ್ಮ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆಲ್ಲಾ ಸ್ಥಾನ ನೀಡುತ್ತೀರಿ ಎಂಬ ಪ್ರಶ್ನೆ ಕೇಳಲಾಗಿತ್ತು.

ಈ ಪ್ರಶ್ನೆಗೆ ಉತ್ತರಿಸಿದ ಯುವರಾಜ್ ಸಿಂಗ್, ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರನ್ನು ಟಾಪ್-5 ಆಟಗಾರರಾಗಿ ಆಯ್ಕೆ ಮಾಡಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆ್ಯಡಂ ಗಿಲ್​ಕ್ರಿಸ್ಟ್ ಅವರನ್ನು ಹೆಸರಿಸಿದರು.

ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಶೇನ್ ವಾರ್ನ್ ಮತ್ತು ಮುತ್ತಯ್ಯ ಮುರಳೀಧರನ್ ಅವರನ್ನು ಹೆಸರಿಸಿದರೆ, ವೇಗಿಗಳಾಗಿ ಆಸ್ಟ್ರೇಲಿಯಾದ ಗ್ಲೆನ್ ಮೆಕ್‌ಗ್ರಾತ್ ಹಾಗೂ ಪಾಕಿಸ್ತಾನದ ವಾಸಿಮ್ ಅಕ್ರಮ್ ಅವರನ್ನು ಆಯ್ಕೆ ಮಾಡಿದರು. ಇನ್ನು ಆಲ್​ರೌಂಡರ್ ಸ್ಥಾನದಲ್ಲಿ ಇಂಗ್ಲೆಂಡ್​ನ ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ಹೆಸರಿಸಿದರು. ಇನ್ನು 12ನೇ ಆಟಗಾರನಾಗಿ ಯುವರಾಜ್ ಸಿಂಗ್ ತಮ್ಮನ್ನೇ ಆಯ್ಕೆ ಮಾಡಿಕೊಂಡರು.

ಇದನ್ನೂ ಓದಿ: James Anderson: 3 ವಿಶ್ವ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಜೇಮ್ಸ್ ಅ್ಯಂಡರ್ಸನ್

ಯುವರಾಜ್ ಸಿಂಗ್ ಹೆಸರಿಸಿದ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರತದ ಮೂವರನ್ನು ಆಯ್ಕೆ ಮಾಡಿದ್ದರೂ, ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹೆಸರಿಸಿಲ್ಲ ಎಂಬುದು ವಿಶೇಷ. ಇದೀಗ ಯುವಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಯುವರಾಜ್ ಸಿಂಗ್ ವಿಡಿಯೋ:

ಯುವರಾಜ್ ಸಿಂಗ್ ಅವರ ಸಾರ್ವಕಾಲಿಕ ಪ್ಲೇಯಿಂಗ್ 11:

  1. ಸಚಿನ್ ತೆಂಡೂಲ್ಕರ್ (ಭಾರತ)
  2. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ)
  3. ರೋಹಿತ್ ಶರ್ಮಾ (ಭಾರತ)
  4. ವಿರಾಟ್ ಕೊಹ್ಲಿ (ಭಾರತ)
  5. ಎಬಿ ಡಿವಿಲಿಯರ್ಸ್ (ಸೌತ್ ಆಫ್ರಿಕಾ)
  6. ಆ್ಯಡಂ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)
  7. ಶೇನ್ ವಾರ್ನ್ (ಆಸ್ಟ್ರೇಲಿಯಾ)
  8. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ)
  9. ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)
  10. ವಾಸಿಮ್ ಅಕ್ರಮ್ (ಪಾಕಿಸ್ತಾನ್)
  11. ಆಂಡ್ರ್ಯೂ ಫ್ಲಿಂಟಾಫ್ (ಇಂಗ್ಲೆಂಡ್).
  12. ಯುವರಾಜ್ ಸಿಂಗ್ (ಭಾರತ)
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ