ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾಗಿರುವ ಯುವರಾಜ್ ಸಿಂಗ್ (Yuvraj Singh) ತಮ್ಮ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ್ದಾರೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರತ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸ್ಥಾನ ನೀಡಿಲ್ಲ ಎಂಬುದು ವಿಶೇಷ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಬಿಡುವಿನಲ್ಲಿ ಟಿವಿ ನಿರೂಪಕಿ ಶೆಫಾಲಿ ಬಗ್ಗಾ ಅವರ ಸಂದರ್ಶನದಲ್ಲಿ ಯುವರಾಜ್ ಸಿಂಗ್ ಕಾಣಿಸಿಕೊಂಡಿದ್ದರು. ಈ ವೇಳೆ ನಿಮ್ಮ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರಿಗೆಲ್ಲಾ ಸ್ಥಾನ ನೀಡುತ್ತೀರಿ ಎಂಬ ಪ್ರಶ್ನೆ ಕೇಳಲಾಗಿತ್ತು.
ಈ ಪ್ರಶ್ನೆಗೆ ಉತ್ತರಿಸಿದ ಯುವರಾಜ್ ಸಿಂಗ್, ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರನ್ನು ಟಾಪ್-5 ಆಟಗಾರರಾಗಿ ಆಯ್ಕೆ ಮಾಡಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆ್ಯಡಂ ಗಿಲ್‌ಕ್ರಿಸ್ಟ್ ಅವರನ್ನು ಹೆಸರಿಸಿದರು.
ಹಾಗೆಯೇ ಬೌಲರ್ಗಳ ಪಟ್ಟಿಯಲ್ಲಿ ಸ್ಪಿನ್ನರ್ಗಳಾಗಿ ಶೇನ್ ವಾರ್ನ್ ಮತ್ತು ಮುತ್ತಯ್ಯ ಮುರಳೀಧರನ್ ಅವರನ್ನು ಹೆಸರಿಸಿದರೆ, ವೇಗಿಗಳಾಗಿ ಆಸ್ಟ್ರೇಲಿಯಾದ ಗ್ಲೆನ್ ಮೆಕ್‌ಗ್ರಾತ್ ಹಾಗೂ ಪಾಕಿಸ್ತಾನದ ವಾಸಿಮ್ ಅಕ್ರಮ್ ಅವರನ್ನು ಆಯ್ಕೆ ಮಾಡಿದರು. ಇನ್ನು ಆಲ್ರೌಂಡರ್ ಸ್ಥಾನದಲ್ಲಿ ಇಂಗ್ಲೆಂಡ್ನ ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ಹೆಸರಿಸಿದರು. ಇನ್ನು 12ನೇ ಆಟಗಾರನಾಗಿ ಯುವರಾಜ್ ಸಿಂಗ್ ತಮ್ಮನ್ನೇ ಆಯ್ಕೆ ಮಾಡಿಕೊಂಡರು.
ಇದನ್ನೂ ಓದಿ: James Anderson: 3 ವಿಶ್ವ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಜೇಮ್ಸ್ ಅ್ಯಂಡರ್ಸನ್
ಯುವರಾಜ್ ಸಿಂಗ್ ಹೆಸರಿಸಿದ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರತದ ಮೂವರನ್ನು ಆಯ್ಕೆ ಮಾಡಿದ್ದರೂ, ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹೆಸರಿಸಿಲ್ಲ ಎಂಬುದು ವಿಶೇಷ. ಇದೀಗ ಯುವಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
— Out Of Context Cricket (@GemsOfCricket) July 13, 2024