Yuzvendra Chahal: ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಇಬ್ಬರು ಭಾರತೀಯ ಆಟಗಾರರಿಗೆ ಕೊರೊನಾ ದೃಢ!

Indian Cricket Team: ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಭಾರತದ ಮತ್ತೀರ್ವ ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಯಜುವೇಂದ್ರ ಚಾಹಲ್ ಹಾಗೂ ಕೃಷ್ಣಪ್ಪ ಗೌತಮ್ ಅವರಿಗೆ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಈರ್ವರೂ ಕೃನಾಲ್ ಪಾಂಡ್ಯ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು.

Yuzvendra Chahal: ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಇಬ್ಬರು ಭಾರತೀಯ ಆಟಗಾರರಿಗೆ ಕೊರೊನಾ ದೃಢ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on:Jul 30, 2021 | 12:59 PM

ಟೀಂ ಇಂಡಿಯಾದ ಇಬ್ಬರು ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಸ್ಪಿನ್ನರ್ ಯಜುವೇಂದ್ರ ಚಾಹಲ್(Yuzvendra Chahal) ಹಾಗೂ ಕರ್ನಾಟಕ ಮೂಲದ ಆಟಗಾರ ಕೃಷ್ಣಪ್ಪ ಗೌತಮ್​ಗೆ(Krishnappa Gowtham) ಕೊರೊನಾ ಸೋಂಕು ತಗುಲಿದೆ. ಶ್ರೀಲಂಕಾ ಪ್ರವಾಸದಲ್ಲಿದ್ದ ಚಹಲ್ ಮತ್ತು ಗೌತಮ್ ಅವರು ಇತ್ತೀಚೆಗೆ ಕೃನಾಲ್ ಪಾಂಡ್ಯ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದರು. ಆಟದ ಸಂದರ್ಭದಲ್ಲಿ ಈರ್ವರೂ ಕೃನಾಲ್ ಪಾಂಡ್ಯ  ಸಂಪರ್ಕಕ್ಕೆ ಬಂದಿದ್ದರು ಎನ್ನಕಾಗಿದ್ದು, ಈರ್ವರೂ ಸಹ ಕೊನೇ ಎರಡು ಪಂದ್ಯಗಳಿಂದ ದೂರವಿದ್ದರು.

ಭಾರತವು ಕೊನೇ ಎರಡು ಪಂದ್ಯಗಳಿಂದ ಒಟ್ಟು ಎಂಟು ಆಟಗಾರರನ್ನು ಬದಲಿಸಿ ಕಣಕ್ಕಿಳಿದಿತ್ತು. ಕಾರಣ, ಅವರೆಲ್ಲರೂ ಕೃನಾಲ್ ಪಾಂಡ್ಯ ಅವರ ನೇರ ಸಂಪರ್ಕಕ್ಕೆ ಬಂದಿದ್ದರು. ಕೃನಾಲ್ ಪಾಂಡ್ಯ ಜುಲೈ 27ರಂದು ಸೋಂಕಿಗೆ ತುತ್ತಾಗಿದ್ದರು. ಅದರಿಂದಾಗಿ ಕೃನಾಲ್ ಸಂಪರ್ಕಕ್ಕೆ ಬಂದಿದ್ದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ, ಮನೀಷ್ ಪಾಂಡೆ, ದೀಪಕ್ ಚಾಹರ್, ಯಜುವೇಂದ್ರ ಚಾಹಲ್, ಇಶಾನ್ ಕಿಶನ್ ಹಾಗೂ ಕೃಷ್ಣಪ್ಪ ಗೌತಮ್ ಅವರನ್ನು ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಲಾಗಿತ್ತು. ಈಗ ಮತ್ತೆ ಅವರೆಲ್ಲರಿಗೂ ಸೋಂಕು ಪತ್ತೆ ಪರೀಕ್ಷೆ ನಡೆಸಿದ್ದು ಚಾಹಲ್ ಹಾಗೂ ಗೌತಮ್​ಗೆ ಕೊರೊನಾ ಪಾಸಿಟಿವ್ ಬಂದಿದೆ.

ಇವರನ್ನು ಹೊರತುಪಡಿಸಿ ಉಳಿದವರು ಇಂದು ಭಾರತಕ್ಕೆ ಮರಳುವ ಸಾಧ್ಯತೆ ಇದೆ. ಗೌತಮ್ ಹಾಗೂ ಚಾಹಲ್​ಗೆ ನಿನ್ನೆ (ಗುರುವಾರ) ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿದ್ದು, ಇಂದು ನಡೆಸಿದಾಗ ಪಾಸಿಟಿವ್ ಬಂದಿದೆ. ಕೃನಾಲ್ ಪಾಂಡ್ಯ ಅವರನ್ನು ಐಸೋಲೇಷನ್​ನಲ್ಲಿರುವಂತೆ ಸೂಚಿಸಲಾಗಿದ್ದು, ಉಳಿದ ಆಟಗಾರರು ತಮ್ಮ ಹೊಟೆಲ್ ಕೋಣಣೆಗಳಲ್ಲಿ ಉಳಿದುಕೊಂಡಿದ್ದಾರೆ.

ಶ್ರೀಲಂಕಾದಲ್ಲಿರುವ ಕೊರೊನಾ ನಿಯಮಾವಳಿಗಳ ಪ್ರಕಾರ ಪಾಸಿಟಿವ್ ಬಂದ ವ್ಯಕ್ತಿಗಳು ಕನಿಷ್ಠ ಹತ್ತು ದಿನಗಳ ಕಾಲ ಐಸೋಲೇಷನ್​ನಲ್ಲಿರಬೇಕು. ನೆಗೆಟಿವ್ ವರದಿ ನಂತರ ದೇಶದಿಂದ ಹೊರ ಹೀಗಲು ಅನುಮತಿ ನೀಡಲಾಗುತ್ತದೆ. ಸೋಂಕಿತರ ಪ್ರಥಮ ಸಂಪರ್ಕಕ್ಕೆ ಬಂದವರು ಏಳು ದಿನಗಳ ಕಾಲ ಕ್ವಾರಂಟೈನ್ ಆಗಿದ್ದು, ನಂತರ ನೆಗೆಟಿವ್ ವರದಿ ಪಡೆದ ನಂತರ ಮರಳಬಹುದಾಗಿದೆ ಎಂದು ಇಎಸ್​​ಪಿಎನ್​ ವರದಿ ಮಾಡಿದೆ.

ಇದನ್ನೂ ಓದಿ: Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ

ಇದನ್ನೂ ಓದಿ: Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ

(Yuzvendra Chahal and Krishnappa Gowtham tests Covid positive in Srilanka)

Published On - 12:59 pm, Fri, 30 July 21

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ