AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್

Yuzvendra Chahal's County Cricket Comeback: ಭಾರತ ತಂಡದಿಂದ ನಿರ್ಲಕ್ಷಿಸಲ್ಪಟ್ಟಿರುವ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್, ಮತ್ತೆ ಪುಟಿದೇಳಲು ಸಜ್ಜಾಗಿದ್ದಾರೆ. 2024ರ ಟಿ20 ವಿಶ್ವಕಪ್‌ನಲ್ಲಿ ಆಡಲು ಅವಕಾಶ ಸಿಗದ ನಂತರ, ಚಾಹಲ್ 2026ರ ಕೌಂಟಿ ಕ್ರಿಕೆಟ್‌ಗಾಗಿ ನಾರ್ಥಾಂಪ್ಟನ್‌ಶೈರ್ ಸೇರಿದ್ದಾರೆ. ವಿದೇಶಿ ಪಿಚ್‌ಗಳಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿ, ಉತ್ತಮ ಪ್ರದರ್ಶನ ನೀಡಿ ಭಾರತ ತಂಡಕ್ಕೆ ಮರಳುವ ಗುರಿ ಹೊಂದಿದ್ದಾರೆ.

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್
Yuzvendra Chahal
ಪೃಥ್ವಿಶಂಕರ
|

Updated on: Jul 20, 2026 | 10:00 PM

Share

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (Yuzvendra Chahal) ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಒಂದು ಸಮಯದಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ನರ್ ಎನಿಸಿಕೊಂಡಿದ್ದ ಚಾಹಲ್​ರನ್ನು ನಿರ್ಲಕ್ಷಿಸಲಾಗುತ್ತಿದೆ. ಚಾಹಲ್ ಕೊನೆಯ ಬಾರಿಗೆ 2023 ರಲ್ಲಿ ಭಾರತೀಯ ಜೆರ್ಸಿಯಲ್ಲಿ ಆಡಿದ್ದರು. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರೂ, ಇಡೀ ಪಂದ್ಯಾವಳಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಸೋಲೊಪ್ಪಿಕ್ಕೊಳ್ಳದ ಚಾಹಲ್ ಮತ್ತೆ ಪುಟಿದೇಳಲು ನಿರ್ಧರಿಸಿ ವಿದೇಶಿ ಮೈದಾನದಲ್ಲಿ ತನ್ನ ಪರಾಕ್ರಮ ತೊರಲು ಸಜ್ಜಾಗಿದ್ದಾರೆ.

ಮತ್ತೆ ಕೌಂಟಿ ಕ್ರಿಕೆಟ್​ನತ್ತ ಚಾಹಲ್

ಯುಜ್ವೇಂದ್ರ ಚಾಹಲ್ ಈಗ ಇಂಗ್ಲೆಂಡ್‌ನಲ್ಲಿ 2026 ರ ಕೌಂಟಿ ಕ್ರಿಕೆಟ್ ಆವೃತ್ತಿಯ ದ್ವಿತೀಯಾರ್ಧಕ್ಕಾಗಿ ನಾರ್ಥಾಂಪ್ಟನ್‌ಶೈರ್ ಕೌಂಟಿ ಕ್ರಿಕೆಟ್ ಕ್ಲಬ್‌ ಸೇರಿದ್ದಾರೆ. ಈ ಕ್ಲಬ್ ಪರಿಸರವು ಚಾಹಲ್‌ಗೆ ಹೊಸದೇನಲ್ಲ. ಅವರು ಈ ಹಿಂದೆ 2024 ಮತ್ತು 2025 ರ ದೇಶೀಯ ಆವೃತ್ತಿಗಳಲ್ಲಿ ಸ್ವಲ್ಪ ಸಮಯದವರೆಗೆ ನಾರ್ಥಾಂಪ್ಟನ್‌ಶೈರ್ ಪರ ಆಡಿದ್ದರು. ಈಗ, 2026 ರಲ್ಲಿ, ಅವರು ಮತ್ತೊಮ್ಮೆ ತಂಡದ ಪರ ಆಡುವುದನ್ನು ಕಾಣಬಹುದು. ಈ ಬಾರಿ, ಕೌಂಟಿ ಚಾಂಪಿಯನ್‌ಶಿಪ್ ಮತ್ತು ಏಕದಿನ ಕಪ್ ಎರಡರಲ್ಲೂ ಚಾಹಲ್ ತಂಡಕ್ಕೆ ಆಯ್ಕೆಯಾಗಲಿದ್ದಾರೆ. ಜುಲೈ 21 ರಂದು ಏಕದಿನ ಕಪ್ ಆರಂಭವಾಗಲಿದೆ.

ವೇಗದ ಬೌಲರ್‌ಗಳು ಸಾಮಾನ್ಯವಾಗಿ ಪ್ರಾಬಲ್ಯ ಹೊಂದಿರುವ ಇಂಗ್ಲಿಷ್ ಪಿಚ್‌ಗಳಲ್ಲಿ, ಯುಜ್ವೇಂದ್ರ ಚಾಹಲ್ ತಮ್ಮ ಸ್ಪಿನ್‌ನಿಂದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿದ್ದಾರೆ. ನಾರ್ಥಾಂಪ್ಟನ್‌ಶೈರ್‌ ಪರ ಆಡುತ್ತಿರುವ ಚಾಹಲ್, ತನ್ನ ಕೊನೆಯ ಎರಡು ಕೌಂಟಿ ಚಾಂಪಿಯನ್‌ಶಿಪ್ ಪ್ರವಾಸಗಳಲ್ಲಿ ಕೌಂಟಿ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ, ಒಟ್ಟು 31 ವಿಕೆಟ್‌ಗಳನ್ನು ಪಡೆದಿದ್ದಾರೆ.

IPL 2026: ವಿಮಾನದಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ಯುಜ್ವೇಂದ್ರ ಚಾಹಲ್; ವಿಡಿಯೋ ವೈರಲ್

ಚಾಹಲ್ ಅನುಭವ ತಂಡಕ್ಕೆ ಪ್ರಯೋಜನಕಾರಿ

35 ವರ್ಷದ ಯುಜ್ವೇಂದ್ರ ಚಾಹಲ್ ದೀರ್ಘ ಮತ್ತು ಅತ್ಯಂತ ಯಶಸ್ವಿ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ಸುಮಾರು ಏಳು ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಅವರು ಭಾರತದ ಪರ ಏಕದಿನ ಮತ್ತು ಟಿ20 ಸ್ವರೂಪಗಳಲ್ಲಿ ಒಟ್ಟು 217 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಚಾಹಲ್ ಅವರ ಅನುಭವ ಮತ್ತು ಪ್ರದರ್ಶನಗಳು 2026 ರ ಆವೃತ್ತಿಯಲ್ಲಿ ನಾರ್ಥಾಂಪ್ಟನ್‌ಶೈರ್‌ ತಂಡದ ಇತರ ಬೌಲರ್‌ಗಳು ಮತ್ತು ಯುವ ಆಟಗಾರರಿಗೆ ಹೆಚ್ಚಿನ ಸಹಾಯ ಮಾಡಬಹುದು. ಮುಂಬರುವ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮತ್ತೊಮ್ಮೆ ಆಯ್ಕೆದಾರರ ಗಮನ ಸೆಳೆಯುವುದು ಚಾಹಲ್ ಅವರ ಗುರಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌