Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಹಲ್- ಧನಶ್ರೀ ವಿಚ್ಛೇದನ: ಮಾಜಿ ಮಡದಿಗೆ ಸಿಕ್ಕ ಜೀವನಾಂಶ ಎಷ್ಟು?

Yuzvendra Chahal, Dhanashree Verma Divorce: ಬಾಂಬೆ ಹೈಕೋರ್ಟ್, ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನ ಅರ್ಜಿಯ ಕುರಿತು ಮಾರ್ಚ್ 20 ರೊಳಗೆ ಅಂತಿಮ ತೀರ್ಪು ನೀಡುವಂತೆ ಬಾಂದ್ರಾ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದೆ. ಕೂಲಿಂಗ್-ಆಫ್ ಅವಧಿಯನ್ನು ಮನ್ನಾ ಮಾಡಲಾಗಿದ್ದು, ಚಾಹಲ್ 4.75 ಕೋಟಿ ರೂ. ಜೀವನಾಂಶ ನೀಡಲು ಒಪ್ಪಿದ್ದಾರೆ ಎಂದು ವರದಿಯಾಗಿದೆ. ಐಪಿಎಲ್ ಆರಂಭಕ್ಕೂ ಮುನ್ನ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

ಚಾಹಲ್- ಧನಶ್ರೀ ವಿಚ್ಛೇದನ: ಮಾಜಿ ಮಡದಿಗೆ ಸಿಕ್ಕ ಜೀವನಾಂಶ ಎಷ್ಟು?
ಚಾಹಲ್, ಧನಶ್ರೀ
Follow us
ಪೃಥ್ವಿಶಂಕರ
|

Updated on:Mar 19, 2025 | 4:25 PM

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನದ ಕುರಿತು ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಂಬೆ ಹೈಕೋರ್ಟ್ ಮಾರ್ಚ್ 20 ರಂದು ವಿಚ್ಛೇದನದ ಬಗ್ಗೆ ಅಂತಿಮ ತೀರ್ಪು ನೀಡುವಂತೆ ಬಾಂದ್ರಾ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದೆ. ಇದರ ಜೊತೆಗೆ ಹೈಕೋರ್ಟ್, 6 ತಿಂಗಳ ಕೂಲಿಂಗ್-ಆಫ್ ಅವಧಿಯನ್ನು ಸಹ ಮನ್ನಾ ಮಾಡಿದೆ. ಹೀಗಾಗಿ ಚಾಹಲ್ ಹಾಗೂ ಧನಶ್ರೀ ವರ್ಮಾ ಅವರ ವಿಚ್ಛೇದನ ತೀರ್ಪು ನಾಳೆಯೇ ಹೊರಬೀಳಲಿದ್ದು, ಇದರ ಜೊತೆಗೆ ಧನಶ್ರೀಗೆ ಚಾಹಲ್ ಜೀವನಾಂಶವಾಗಿ ಎಷ್ಟು ಹಣವನ್ನು ನೀಡುತ್ತಿದ್ದಾರೆ ಎಂಬುದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಕೂಲಿಂಗ್-ಆಫ್ ಅವಧಿ ಮನ್ನಾ

ಮಾರ್ಚ್ 22 ರಿಂದ ಐಪಿಎಲ್ ಆರಂಭವಾಗಲಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಚಾಹಲ್ ಕೂಡ ಆಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಚಾಹಲ್, ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದು, ಈ ತಂಡ ಮಾರ್ಚ್ 25 ರಂದು ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆ ಬಳಿಕ ಮುಂದಿನ ಎರಡು ತಿಂಗಳು ಚಾಹಲ್ ಐಪಿಎಲ್‌ನಲ್ಲಿ ನಿರತರಾಗಲಿದ್ದಾರೆ. ಹೀಗಾಗಿ ಚಾಹಲ್ ಅವರ ಭಾಗವಹಿಸುವಿಕೆಯನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್ 20 ರೊಳಗೆ ವಿಚ್ಛೇದನ ಅರ್ಜಿಯ ಕುರಿತು ಅಂತಿಮ ನಿರ್ಧಾರವನ್ನು ನೀಡುವಂತೆ ಹೈಕೋರ್ಟ್ ಕುಟುಂಬ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಎರಡೂವರೆ ವರ್ಷಗಳಿಂದ ಪ್ರತ್ಯೇಕ ವಾಸ

ಚಾಹಲ್ ಮತ್ತು ಧನಶ್ರೀ ಎರಡೂವರೆ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಬಹಿರಂಗಪಡಿಸಿದೆ. ಇದರರ್ಥ 2022 ರ ಜೂನ್​ನಿಂದಲೇ ದಂಪತಿಗಳಿಬ್ಬರು ಬೇರ್ಪಟ್ಟಿದ್ದು, ಬೇರೆ ಬೇರೆ ವಾಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಫೆಬ್ರವರಿ 5 ರಂದು ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಜಂಟಿ ಅರ್ಜಿಯನ್ನು ಸಲ್ಲಿಸಿದ್ದು, ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನವನ್ನು ಕೋರಿದ್ದಾರೆ. ಇದರಿಂದ ಚಾಹಲ್ ಮತ್ತು ಧನಶ್ರೀ ಇನ್ನು ಮುಂದೆ ಒಟ್ಟಿಗೆ ಬಾಳುವ ಸಾಧ್ಯೆಗಳಿಲ್ಲ ಎಂಬುದನ್ನು ಸಹ ಹೈಕೋರ್ಟ್ ಆದೇಶ ದೃಢಪಡಿಸಿದೆ.

4.75 ಕೋಟಿ ಜೀವನಾಂಶ

ವರದಿಯ ಪ್ರಕಾರ, ಜೀವನಾಂಶಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಪರಸ್ಪರ ಒಪ್ಪಂದಕ್ಕೆ ಬರಲಾಗಿದೆ. ಇದರ ಅಡಿಯಲ್ಲಿ ಯುಜ್ವೇಂದ್ರ ಚಾಹಲ್ ಧನಶ್ರೀ ವರ್ಮಾ ಅವರಿಗೆ 4.75 ಕೋಟಿ ರೂ.ಗಳನ್ನು ಜೀವನಾಂಶವಾಗಿ ನೀಡಲಿದ್ದಾರೆ. ಕುಟುಂಬ ನ್ಯಾಯಾಲಯದ ಪ್ರಕಾರ, ಚಾಹಲ್ ಈಗಾಗಲೇ ಇದರಲ್ಲಿ 2.37 ಕೋಟಿ ರೂ.ಗಳನ್ನು ಧನಶ್ರೀ ಅವರಿಗೆ ನೀಡಿದ್ದಾರೆ. ಇಬ್ಬರ ನಡುವಿನ ಒಪ್ಪಂದದ ಪ್ರಕಾರ, ವಿಚ್ಛೇದನ ಆದೇಶದ ನಂತರವೇ ಎರಡನೇ ಕಂತಿನ ಜೀವನಾಂಶವನ್ನು ಚಾಹಲ್ ಪಾವತಿಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 19 March 25

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ