Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಚಹಾಲ್​ಗಾಗಿ ಹರಾಜು ನಡೆಸದ RCB..!

Yuzvendra chahal: ಯುಜ್ವೇಂದ್ರ ಚಹಾಲ್ ಹರಾಜಿಗೂ ಮುನ್ನ ಆರ್‌ಸಿಬಿ ಪರ ಆಡುವ ಆಸೆ ವ್ಯಕ್ತಪಡಿಸಿದ್ದರು. ನಾನು 8 ವರ್ಷಗಳಿಂದ ಆರ್‌ಸಿಬಿಗೆ ಆಡಿದ್ದೇನೆ. ಮುಂದೆಯೂ ಆಡಲು ಬಯಸುತ್ತೇನೆ ಎಂದು ಹೇಳಿದ್ದರು.

IPL 2022 Auction: ಚಹಾಲ್​ಗಾಗಿ ಹರಾಜು ನಡೆಸದ RCB..!
Yuzvendra chahal
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 12, 2022 | 8:16 PM

ಆರ್‌ಸಿಬಿಯ ಖ್ಯಾತ ಸ್ಪಿನ್ ಬೌಲರ್ ಯುಜ್ವೇಂದ್ರ ಚಹಾಲ್ ಈ ಬಾರಿ ರಾಜಸ್ಥಾನ ರಾಯಲ್ಸ್ ಪರ ಆಡಲಿದ್ದಾರೆ . ಐಪಿಎಲ್ 2022 ಹರಾಜು (IPL 2022 Auction) ನ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಬರೋಬ್ಬರಿ 6.50 ಕೋಟಿ ನೀಡಿ ಚೈನಾಮನ್ ಸ್ಪಿನ್ನರ್‌ ಅನ್ನು ತನ್ನದಾಗಿಸಿಕೊಂಡಿತು. ಆರಂಭದಿಂದಲೇ ಚಹಲ್ ಖರೀದಿಗಾಗಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಬಿಡ್ಡಿಂಗ್ ನಡೆಸಿತು. ಆದರೆ ಐದು ಕೋಟಿಗಳ ನಂತರ ಡೆಲ್ಲಿ ಕ್ಯಾಪಿಟಲ್ಸ್ ರೇಸ್‌ನಿಂದ ಹಿಂದೆ ಸರಿಯಿತು. ಈ ಹಂತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಿಡ್ಡಿಂಗ್ ಪ್ರಾರಂಭಿಸಿತು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ಆರು ಕೋಟಿ 50 ಲಕ್ಷ ಹರಾಜಾಗುವ ಕೂಗುವ ಮೂಲಕ ಯುಜ್ವೇಂದ್ರ ಚಹಾಲ್ ಅವರನ್ನು ತನ್ನದಾಗಿಸಿಕೊಂಡಿತು. ಇದಾಗ್ಯೂ ಚಹಲ್ ಅವರ ಖರೀದಿಗೆ ಆರ್​ಸಿಬಿ ಬಿಡ್ಡಿಂಗ್ ನಡೆಸದೇ ಅಚ್ಚರಿ ಮೂಡಿಸಿತು.

ಚಹಾಲ್ ಆರ್‌ಸಿಬಿ ಪರ ದೀರ್ಘಕಾಲ ಆಡುತ್ತಿದ್ದಾರೆ. ಆರ್​ಸಿಬಿ ತಂಡದಲ್ಲಿ 50 ಪಂದ್ಯಗಳನ್ನು ಆಡಿರುವ ಚಹಲ್ ಒಟ್ಟು 64 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಆರ್​ಸಿಬಿ ತಂಡದ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದರು. ಇದಾಗ್ಯೂ ಚಹಲ್ ಅವರನ್ನು ಖರೀದಿಸಲು ಆರ್​ಸಿಬಿ ಯಾವುದೇ ಆಸಕ್ತಿ ತೋರದಿರುವುದು ಅಚ್ಚರಿಗೆ ಕಾರಣವಾಗಿದೆ.

ಆರ್‌ಸಿಬಿ ಪರ ಆಡಲು ಬಯಸಿದ್ದರು: ಯುಜ್ವೇಂದ್ರ ಚಹಾಲ್ ಹರಾಜಿಗೂ ಮುನ್ನ ಆರ್‌ಸಿಬಿ ಪರ ಆಡುವ ಆಸೆ ವ್ಯಕ್ತಪಡಿಸಿದ್ದರು. ನಾನು 8 ವರ್ಷಗಳಿಂದ ಆರ್‌ಸಿಬಿಗೆ ಆಡಿದ್ದೇನೆ. ಮುಂದೆಯೂ ಆಡಲು ಬಯಸುತ್ತೇನೆ ಎಂದು ಹೇಳಿದ್ದರು. ನಾನು ಬೇರೆ ತಂಡಕ್ಕೆ ಹೋದರೆ ನನಗೆ ಬೇಸರವಾಗುವುದಿಲ್ಲ. ಏಕೆಂದರೆ ಈ ಬಾರಿ ಎಲ್ಲರೂ ತಮ್ಮ ಹೊಸ ತಂಡವನ್ನು ರಚಿಸುತ್ತಿದ್ದಾರೆ. ಯಾವ ತಂಡ ನನ್ನನ್ನು ಖರೀದಿಸಿದರೂ, ನಾನು ನನ್ನ ಶೇಕಡಾ 100 ಅನ್ನು ನೀಡುತ್ತೇನೆ ಎಂದಿದ್ದರು. ಇದೀಗ ನಿರೀಕ್ಷೆಯಂತೆ ಚಹಲ್ ಹೊಸ ತಂಡದ ಪಾಲಾಗಿದ್ದಾರೆ.

(Yuzvendra chahal IPL 2022 Auction)

Published On - 8:15 pm, Sat, 12 February 22

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ