ಆರ್​ಸಿಬಿ ಆಟಗಾರ ಯಜ್ವೇಂದ್ರ ಚಹಲ್ ತಂದೆ- ತಾಯಿಗೆ ಕೊರೊನಾ ಪಾಸಿಟಿವ್; ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ

ಯುಜ್ವೇಂದ್ರ ಚಾಹಲ್ ಅವರ ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ತೀವ್ರ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನ ಅತ್ತೆ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ.

ಆರ್​ಸಿಬಿ ಆಟಗಾರ ಯಜ್ವೇಂದ್ರ ಚಹಲ್ ತಂದೆ- ತಾಯಿಗೆ ಕೊರೊನಾ ಪಾಸಿಟಿವ್; ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ
ಯಜ್ವೇಂದ್ರ ಚಹಲ್
Follow us
ಪೃಥ್ವಿಶಂಕರ
|

Updated on: May 13, 2021 | 4:47 PM

ಟೀಂ ಇಂಡಿಯಾ ಕ್ರಿಕೆಟಿಗ ಯಜ್ವೇಂದ್ರ ಚಹಲ್ ಅವರ ತಾಯಿ ಮತ್ತು ತಂದೆ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಈ ಮಾಹಿತಿಯನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ನೀಡಿದ್ದಾರೆ. ಯುಜ್ವೇಂದ್ರ ಚಾಹಲ್ ಅವರ ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ತೀವ್ರ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನ ಅತ್ತೆ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ. ಇಬ್ಬರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅತ್ತೆ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಐಪಿಎಲ್ ಬಯೋ ಬಬಲ್‌ನಲ್ಲಿದ್ದೆ ಇದಕ್ಕೂ ಮೊದಲು ಧನಶ್ರೀ ಅವರ ತಾಯಿ ಮತ್ತು ಸಹೋದರ ಕೊರೊನಾ ಪಾಸಿಟಿವ್ ಆಗಿದ್ದರು. ಆ ಸಮಯದಲ್ಲಿ ಧನಶ್ರೀ ಐಪಿಎಲ್​ನ ಬಯೋ ಬಬಲ್​ನಲ್ಲಿದ್ದರು. ಆದರೆ, ಈಗ ಧನಶ್ರೀ ಅವರ ತಾಯಿ ಮತ್ತು ಸಹೋದರ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಧನಶ್ರೀ, ಇದು ತುಂಬಾ ಕಷ್ಟಕರ ಮತ್ತು ಸವಾಲಿನ ಸಂಗತಿಯಾಗಿದೆ. ನನ್ನ ತಾಯಿ ಮತ್ತು ಸಹೋದರ ಕೊರೊನಾ ಪಾಸಿಟಿವ್​ ಆಗಿದ್ದರು. ಆದರೆ ನಾನು ಆ ಸಮಯದಲ್ಲಿ ಐಪಿಎಲ್ ಬಯೋ ಬಬಲ್‌ನಲ್ಲಿದ್ದೆ ಮತ್ತು ಅಸಹಾಯಕಳಾಗಿದ್ದೆ ಆದರೆ ಕಾಲಕಾಲಕ್ಕೆ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದೆ. ಕುಟುಂಬದಿಂದ ದೂರವಿರುವುದು ತುಂಬಾ ಕಷ್ಟ. ಅವರು ಚೇತರಿಸಿಕೊಂಡಿರುವುದು ಒಳ್ಳೆಯದು ಎಂದಿದ್ದಾರೆ.

ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ

ಧನಶ್ರೀ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಕೊರೊನಾದಿಂದ ನಿಧನ ಕೊರೊನಾಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಮೃತಪಟ್ಟಿದ್ದಾರೆ ಎಂದು ಧನಶ್ರೀ ಹೇಳಿದ್ದಾರೆ. ಯುಜ್ವೇಂದ್ರ ಚಾಹಲ್ ಇತ್ತೀಚೆಗೆ ಅಮಾನತುಗೊಂಡ ಐಪಿಎಲ್ 2021 ರಲ್ಲಿ ಆಡುತ್ತಿದ್ದರು. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದರು. ತಂಡದ ಪರ ಎಲ್ಲಾ ಏಳು ಪಂದ್ಯಗಳನ್ನು ಆಡಿ, ನಾಲ್ಕು ವಿಕೆಟ್ ಪಡೆದುಕೊಂಡಿದ್ದರು. ಈ ತಂಡದ ಪ್ರಮುಖ ಆಟಗಾರರಲ್ಲಿ ಚಹಲ್ ಕೂಡ ಒಬ್ಬರು. ಪಂದ್ಯಾವಳಿಯಲ್ಲಿ ಅವರ ಪತ್ನಿ ಧನಶ್ರೀ ಕೂಡ ಅವರೊಂದಿಗೆ ಇದ್ದರು. ನಂತರ, ಕೊರೊನಾ ಪ್ರಕರಣ ಬೆಳಕಿಗೆ ಬಂದಾಗ ಐಪಿಎಲ್ 2021 ಅನ್ನು ಅಮಾನತುಗೊಳಿಸಲಾಗಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ