AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanashree Verma: ಆಸ್ಪತ್ರೆಗೆ ದಾಖಲಾದ ಚಹಾಲ್ ಪತ್ನಿ ಧನಶ್ರೀ ವರ್ಮಾ

Yuzvendra chahal: ಯುಜ್ವೇಂದ್ರ ಚಹಾಲ್ ಸದ್ಯ ಟೀಮ್ ಇಂಡಿಯಾ ಜೊತೆ ದುಬೈನಲ್ಲಿದ್ದಾರೆ. ಏಷ್ಯಾಕಪ್ ತಂಡದ ಭಾಗವಾಗಿರುವ ಚಹಾಲ್ ಮುಂದಿನ ಪಂದ್ಯಕ್ಕಾಗಿ ಭರ್ಜರಿ ಸಿದ್ದತೆಯಲ್ಲಿದ್ದಾರೆ.

Dhanashree Verma: ಆಸ್ಪತ್ರೆಗೆ ದಾಖಲಾದ ಚಹಾಲ್ ಪತ್ನಿ ಧನಶ್ರೀ ವರ್ಮಾ
yuzvendra chahal, dhanashree verma
TV9 Web
| Edited By: |

Updated on: Sep 03, 2022 | 12:35 PM

Share

ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ (Yuzvendra chahal) ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು. ಅಲ್ಲದೆ ಅಸ್ಥಿರಜ್ಜು ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಇದೀಗ ಯಶಸ್ವಿ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.

“ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಜೀವನದಲ್ಲಿ ಹಿನ್ನಡೆಯು ಪುನರಾಗಮನಕ್ಕೆ ಉತ್ತಮ ವೇದಿಕೆಯಾಗಿದೆ. ನಾನು ಸಹ ಸ್ಟ್ರಾಂಗ್ ಆಗಿ ಕಂಬ್ಯಾಕ್ ಮಾಡುತ್ತೇನೆ. ಇದು ದೇವರ ಇಚ್ಛೆ. ನಿಮ್ಮ ಪ್ರಾರ್ಥನೆಗಾಗಿ ಧನ್ಯವಾದಗಳು” ಎಂದು ಧನಶ್ರೀ ವರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಪತ್ನಿಯ ಈ ಪೋಸ್ಟ್​ಗೆ ಚಹಾಲ್ ಕೂಡ ಕಾಮೆಂಟ್ ಮಾಡಿದ್ದಾರೆ. ಹೃದಯದ ಎಮೋಜಿಯನ್ನು ಪೋಸ್ಟ್ ಮಾಡುವ ಮೂಲಕ ‘ಬೇಗ ಗುಣಮುಖರಾಗಿ’ ಎಂದು ಯುಜ್ವೇಂದ್ರ ಚಹಾಲ್ ತಿಳಿಸಿದ್ದಾರೆ. ಇದಲ್ಲದೇ ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್, ಅಶ್ವಿನ್ ಪತ್ನಿ ಪ್ರೀತಿ ನಾರಾಯಣ್, ಯಶಸ್ವಿ ಜೈಸ್ವಾಲ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಕಾಮೆಂಟ್ ಮಾಡಿದ್ದಾರೆ.

ಚಹಾಲ್ ಡೈವೋರ್ಸ್ ವದಂತಿ: ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ಬಹುಚರ್ಚಿತ ಜೋಡಿಗಳಲ್ಲಿ ಒಂದಾದ ಯುಜ್ವೇಂದ್ರ ಚಹಾಲ್ (Yuzvendra Chahal ) ಮತ್ತು ಧನಶ್ರೀ ವರ್ಮಾ (Dhanashree Verma) ನಡುವೆ ಮನಸ್ತಾಪ ಉಂಟಾಗಿದೆ ಎಂದು ವರದಿಯಾಗಿತ್ತು. ಧನಶ್ರೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ‘ಚಹಾಲ್’ ಎಂಬ ಉಪನಾಮವನ್ನು ತೆಗೆದುಹಾಕಿದ್ದರು. ಮತ್ತೊಂದೆಡೆ ಚಹಾಲ್ “ಹೊಸ ಜೀವನವು ಲೋಡ್ ಆಗುತ್ತಿದೆ…” ಎಂದು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದರು. ಇದರೊಂದಿಗೆ ಚಹಾಲ್ ದಾಂಪತ್ಯ ಜೀವನದಲ್ಲಿ ಬಿರುಕುಂಟಾಗಿದೆ. ಇಬ್ಬರೂ ದೂರವಾಗುತ್ತಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು.

ಈ ಊಹಾಪೋಹಗಳು ಮಹತ್ವ ಪಡೆದುಕೊಳ್ಳುತ್ತಿದ್ದಂತೆ, ನಮ್ಮ ವೈಯುಕ್ತಿಕ ಜೀವನಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವದಂತಿಗಳನ್ನು ನಂಬಬೇಡಿ ಎಂದು ಚಹಾಲ್ ತಿಳಿಸಿದ್ದರು. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ, ಸುಳ್ಳು ಸುದ್ದಿಗಳನ್ನು ಹರಬೇಡಿ ಎಂದು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದರು. ಅಲ್ಲದೆ ಇಂತಹ ಸುಳ್ಳು ಸುದ್ದಿಯನ್ನು ಹರಿಬಿಡಬೇಡಿ ಎಂದು ಧನಶ್ರೀ ವರ್ಮಾ ಕೂಡ ಇನ್​ಸ್ಟಾಗ್ರಾಮ್ ಪೋಸ್ಟ್ ಮೂಲಕ ಮನವಿ ಮಾಡಿದ್ದರು.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​