AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ವದಂತಿಯ ನಡುವೆ ಮತ್ತೊಬ್ಬ ಹುಡುಗಿ ಜೊತೆ ಚಹಾಲ್ ಸುತ್ತಾಟ; ವಿಡಿಯೋ ವೈರಲ್

Yuzvendra Chahal: ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರ ಸಂಬಂಧದಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದು, ಚಹಾಲ್ ತಮ್ಮ ಖಾತೆಯಿಂದ ಧನಶ್ರೀಯವರ ಫೋಟೋಗಳನ್ನು ತೆಗೆದಿದ್ದಾರೆ. ಈ ನಡುವೆ ಚಹಾಲ್ ಮತ್ತೊಬ್ಬ ಹುಡುಗಿಯೊಂದಿಗೆ ಇರುವ ವಿಡಿಯೋ ವೈರಲ್ ಆಗಿದ್ದು, ವಿಚ್ಛೇದನಕ್ಕೆ ಇದು ಕಾರಣವಾಯಿತಾ ಎಂಬ ಗುಮಾನಿ ಎದ್ದಿದೆ.

ವಿಚ್ಛೇದನ ವದಂತಿಯ ನಡುವೆ ಮತ್ತೊಬ್ಬ ಹುಡುಗಿ ಜೊತೆ ಚಹಾಲ್ ಸುತ್ತಾಟ; ವಿಡಿಯೋ ವೈರಲ್
ಯುಜ್ವೇಂದ್ರ ಚಹಾಲ್
ಪೃಥ್ವಿಶಂಕರ
|

Updated on:Jan 06, 2025 | 4:47 PM

Share

ಟೀಂ ಇಂಡಿಯಾದಲ್ಲಿ ಅವಕಾಶಗಳು ಸಿಗದೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿರುವ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಚಹಾಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರೊಂದಿಗಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿ ಇಡೀ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿದೆ. ಇದಕ್ಕೆ ಪೂರಕವಾಗಿ ಇವರಿಬ್ಬರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪರಸ್ಪರ ಅನ್​ಫಾಲೋ ಮಾಡಿದ್ದಾರೆ. ಇದಲ್ಲದೆ ಒಂದು ಹೆಜ್ಜೆ ಮುಂದಿಟ್ಟಿರುವ ಚಹಾಲ್, ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಿಂದ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಈ ಇಬ್ಬರು ವಿಚ್ಛೇದನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ, ಯುಜ್ವೇಂದ್ರ ಚಹಾಲ್ ಬೇರೊಬ್ಬ ಹುಡುಗಿಯೊಂದಿಗೆ ಓಡಾಟ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಬೇರೊಬ್ಬ ಯುವತಿ ಜೊತೆ ಚಹಾಲ್ ಸುತ್ತಾಟ

ಅಷ್ಟಕ್ಕೂ ಧನಶ್ರೀ ವರ್ಮಾ ಹಾಗೂ ಯುಜ್ವೇಂದ್ರ ಚಹಾಲ್ ವಿಚ್ಛೇದನ ಪಡೆಯುತ್ತಿದ್ದಾರಾ ಎಂಬುದರ ಬಗ್ಗೆ ಇದುವರೆಗೆ ಈ ಇಬ್ಬರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಅವರ ಆಪ್ತ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಈ ಇಬ್ಬರು ಪರಸ್ಪರ ಬೇರೆ ಬೇರೆಯಾಗಿ ಜೀವನ ನಡೆಸಲು ತೀರ್ಮಾನಿಸಿದ್ದು, ಇಷ್ಟರಲ್ಲೇ ವಿಚ್ಛೇದನ ಪಡೆಯುವ ಸಾಧ್ಯತೆ ಇದೆ. ಇದೀಗ ಈ ವಿಚ್ಛೇದನ ವದಂತಿಯ ನಡುವೆ ಚಹಲ್ ಮತ್ತೊಬ್ಬ ಹುಡುಗಿಯ ಜೊತೆ ಓಡಾಟ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಖ ಮರೆಮಾಡಿದ ಚಹಾಲ್

ಸದ್ಯಕ್ಕೆ ಚಹಾಲ್ ಜೊತೆಗೆ ಕಾಣಿಸಿಕೊಂಡಿರುವ ಆ ಯುವತಿ ಯಾರೆಂಬುದು ತಿಳಿದುಬಂದಿಲ್ಲ. ಆದರೆ ಈ ಇಬ್ಬರು ಜೊತೆಯಾಲ್ಲಿ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮದ ಕ್ಯಾಮರಾಗಳು ಚಹಾಲ್​ ಅವರನ್ನು ಸೆರೆಹಿಡಿಯಲು ಪ್ರಯತ್ನಿಸಿದಾಗ ಅವರು ತನ್ನ ಮುಖವನ್ನು ಮರೆಮಾಚಿದ್ದಾರೆ. ಅಂದಿನಿಂದ ಧನಶ್ರೀ ಮತ್ತು ಚಹಾಲ್ ವಿಚ್ಛೇದನದ ಸುದ್ದಿಗೆ ಈ ನಿಗೂಢ ಹುಡುಗಿಯೇ ಕಾರಣ ಎಂಬ ಚರ್ಚೆಗಳು ನಡೆಯುತ್ತಿವೆ.

ಇಷ್ಟರಲ್ಲೇ ವಿಚ್ಛೇದನ?

ವಾಸ್ತವವಾಗಿ 2023 ರಲ್ಲೇ ಧನಶ್ರೀ ವರ್ಮಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಚಹಾಲ್ ಎಂಬ ಉಪನಾಮವನ್ನು ತೆಗೆದುಹಾಕಿದ್ದರು. ಅಂದಿನಿಂದ ಇವರಿಬ್ಬರ ಸಂಬಂಧದ ಬಗ್ಗೆ ನಾನಾ ರೀತಿಯ ಮಾತುಕತೆಗಳು ಕೇಳಿಬಂದಿದ್ದವು. ಆದಾಗ್ಯೂ, ಈ ಇಬ್ಬರು ಇದನ್ನೇಲ್ಲ ವದಂತಿ ಎಂದಿದ್ದರು. ಆದರೆ ಈಗ ಇಬ್ಬರ ವದಂತಿಯ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದ್ದು ಅದರಲ್ಲಿ ಈ ಇಬ್ಬರೂ ವಿಚ್ಛೇದನ ಪಡೆಯುವುದು ಖಚಿತ. ಇದರ ಔಪಚಾರಿಕ ಘೋಷಣೆ ಇನ್ನಷ್ಟೇ ಆಗಬೇಕಿದೆ ಎಂದು ಬರೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Mon, 6 January 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ