AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಬಾಲ ಯಾವತ್ತಿದ್ರೂ ಡೊಂಕು… ಪಾಕ್ ವಿರುದ್ಧ ಕ್ರಿಕೆಟಿಗರ ಆಕ್ರೋಶ

India vs Pakistan: ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ್ ಭಾರತದ ಮೇಲೆ ದಾಳಿ ನಡೆಸಿದೆ. ಜಮ್ಮುವಿನ ಆರ್​ಎಸ್​ ಪುರದಲ್ಲಿ ನಡೆದ ಶೆಲ್ ದಾಳಿಯಲ್ಲಿ ಬಿಎಸ್​ಎಫ್ ಎಸ್​ಐ ಎಂಡಿ ಇಮ್ತಿಯಾಜ್ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 7 ಸೈನಿಕರು ಗಾಯಗೊಂಡಿದ್ದಾರೆ. ಇದೀಗ ಈ ಹೇಯ ಕೃತ್ಯವನ್ನು ಟೀಮ್ ಇಂಡಿಯಾ ಕ್ರಿಕೆಟಿಗರು ಖಂಡಿಸಿದ್ದಾರೆ.

ನಾಯಿ ಬಾಲ ಯಾವತ್ತಿದ್ರೂ ಡೊಂಕು... ಪಾಕ್ ವಿರುದ್ಧ ಕ್ರಿಕೆಟಿಗರ ಆಕ್ರೋಶ
Chahal - Sehwag - Rahul
ಝಾಹಿರ್ ಯೂಸುಫ್
|

Updated on: May 11, 2025 | 8:30 AM

Share

ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಕದನ ವಿರಾಮದ ಘೋಷಣೆ ಬೆನ್ನಲ್ಲೇ ಪಾಕ್ ಸೇನೆಯು ಜಮ್ಮು-ಕಾಶ್ಮೀರದ ಮೇಲೆ ಡ್ರೋನ್ ದಾಳಿ ನಡೆಸಿದೆ. ಪಾಕಿಸ್ತಾನದ ಈ ಹೇಯ ಕೃತ್ಯಯನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕರು ಖಂಡಿಸಿದ್ದಾರೆ. ಅದರಲ್ಲೂ ಯುಜ್ವೇಂದ್ರ ಚಹಲ್, ಸೆಹ್ವಾಗ್ ಹಾಗೂ ರಾಹುಲ್ ತೆವಾಠಿಯಾ ಗಾದೆ ಮಾತಿನೊಂದಿಗೆ ಪಾಕ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ವೀರೇಂದ್ರ ಸೆಹ್ವಾಗ್, ನಾಯಿ ಬಾಲ ಯಾವತ್ತಿದ್ರೂ ಡೊಂಕು, ಇವರು ಯಾವತ್ತೂ ಸುಧಾರಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಇಂತಹದ್ದೇ ಪೋಸ್ಟ್ ಅನ್ನು ಯುಜ್ವೇಂದ್ರ ಚಹಲ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, ನಾಯಿ ಬಾಲ ಯಾವತ್ತಿದ್ರೂ ಡೊಂಕು ಎಂದು ಪಾಕಿಸ್ತಾನವನ್ನು ನಾಯಿಗೆ ಹೋಲಿಸಿದ್ದಾರೆ.

ಇನ್ನು ರಾಹುಲ್ ತೆವಾಠಿಯಾ ಕೂಡ ನಾಯಿ ಬಾಲ ಯಾವತ್ತಿದ್ರೂ ಡೊಂಕು ಎಂಬ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಪಾಕಿಸ್ತಾನದ ಹೇಯ ಕೃತ್ಯವನ್ನು ಖಂಡಿಸಿದ್ದಾರೆ.

ಇದೀಗ ಈ ಪೋಸ್ಟರ್​ಗಳು ವೈರಲ್ ಆಗಿದ್ದು, ಕದನ ವಿರಾಮಕ್ಕೆ ಗೋಗರೆದು ಮತ್ತೆ ಖ್ಯಾತೆ ತೆಗೆದ ಪಾಕಿಸ್ತಾನ್ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಅತ್ತ ಪಾಕಿಸ್ತಾನ್ ಕದನ ವಿರಾಯ ಉಲ್ಲಂಘಿಸಿದ ಬೆನ್ನಲ್ಲೇ ಪ್ರತಿದಾಳಿ ನಡೆಸುವಂತೆ ಭಾರತೀಯ ಸೈನಿಕರಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಉಭಯ ದೇಶಗಳ ಗಡಿಭಾಗದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೂರಿದೆ.

ಐಪಿಎಲ್ ಯಾವಾಗ ಶುರು?

ಈ ಬಾರಿಯ ಐಪಿಎಲ್​ನಲ್ಲಿ ಯುಜ್ವೇಂದ್ರ ಚಹಲ್ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿದ್ದರೆ, ರಾಹುಲ್ ತೆವಾಠಿಯಾ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಕದನ ವಿರಾಮ ಘೋಷಣೆಯಾದ ಹಿನ್ನಲೆ ಮುಂದಿನ ವಾರದಿಂದ ಟೂರ್ನಿ ಪುನರಾರಂಭವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಪ್ರಸ್ತುತ ಮಾಹಿತಿ ಪ್ರಕಾರ, ಮುಂದಿನ ಗುರುವಾರ ಅಥವಾ ಶುಕ್ರವಾರ ಐಪಿಎಲ್​ಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ನಿರ್ಧರಿಸಿದೆ. ಅಲ್ಲದೆ ಇದಕ್ಕಾಗಿ ಕೇಂದ್ರ ಅನುಮತಿಯನ್ನು ಪಡೆಯಲಿದ್ದಾರೆ. ಕೇಂದ್ರ ಸರ್ಕಾರದಿಂದ ಅನುಮತಿ ಲಭಿಸಿದರೆ ಮೇ 15 ಅಥವಾ 16 ರಿಂದ ಐಪಿಎಲ್ ಸೀಸನ್-18 ಮತ್ತೆ ಶುರುವಾಗಲಿದೆ. ಈ ಮುಲಕ 17 ಪಂದ್ಯಗಳನ್ನು ಆಯೋಜಿಸಿ ಮೇ ತಿಂಗಳಲ್ಲೇ ಟೂರ್ನಿಯನ್ನು ಪೂರ್ಣಗೊಳಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು