ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಅಲ್ಲೋಲ ಕಲ್ಲೋಲ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಝಾಕಾ ಅಶ್ರಫ್..!

Zaka Ashraf: ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಾಲಿ ಮುಖ್ಯಸ್ಥ, ಅಂದರೆ ಪಿಸಿಬಿ ಆಡಳಿತ ಸಮಿತಿಯ ಅಧ್ಯಕ್ಷ ಝಾಕಾ ಅಶ್ರಫ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಅಲ್ಲೋಲ ಕಲ್ಲೋಲ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಝಾಕಾ ಅಶ್ರಫ್..!
ಝಾಕಾ ಅಶ್ರಫ್
Follow us
ಪೃಥ್ವಿಶಂಕರ
|

Updated on:Jan 19, 2024 | 10:07 PM

2023 ರ ಏಷ್ಯಾಕಪ್​ನಿಂದ (Asia Cup 2023) ಆರಂಭವಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿನ (Pakistan Cricket Board) ಗೊಂದಲಗಳು ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸಾಕಷ್ಟು ಅಡೆತಡೆಗಳೊಂದಿಗೆ ಏಷ್ಯಾಕಪ್​ ಹಾಗೂ ವಿಶ್ವಕಪ್ (ODI World Cup 2023) ಆಡಿದ್ದ ಪಾಕಿಸ್ತಾನ ತಂಡ ಎರಡೂ ಟೂರ್ನಿಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಅಂದಿನಿಂದ ತಂಡ ಹಾಗೂ ಕ್ರಿಕೆಟ್ ಮಂಡಳಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ತಂಡದಲ್ಲಿ ನಾಯಕರೇ ಬದಲಾದರೆ ಇತ್ತ ಕ್ರಿಕೆಟ್​ ಮಂಡಳಿಯ ಅಧ್ಯಕ್ಷರನ್ನೇ ಬದಲಿಸಲಾಗಿತ್ತು. ಆದರೀಗ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಾಲಿ ಮುಖ್ಯಸ್ಥ, ಅಂದರೆ ಪಿಸಿಬಿ ಆಡಳಿತ ಸಮಿತಿಯ ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಕಿಸ್ತಾನಿ ಸುದ್ದಿ ವಾಹಿನಿ ಜಿಯೋ ವರದಿಯ ಪ್ರಕಾರ , ಶುಕ್ರವಾರ, ಜನವರಿ 19 ರಂದು ನಿರ್ವಹಣಾ ಸಮಿತಿಯ ಸಭೆಯಲ್ಲಿ ಝಕಾ ಅಶ್ರಫ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಿತಿ ಸದಸ್ಯರ ಮುಂದೆ ರಾಜೀನಾಮೆ ಘೋಷಿಸಿದ ಅಶ್ರಫ್, ಪಾಕಿಸ್ತಾನದಲ್ಲಿ ಕ್ರಿಕೆಟ್‌ನ ಉನ್ನತಿಗಾಗಿ ಕೆಲಸ ಮಾಡಲು ಬಯಸಿದ್ದೆ. ಆದರೆ ಆ ರೀತಿಯ ಕೆಲಸ ಮಾಡುವುದು ತುಂಬಾ ಕಷ್ಟ ಎಂದು ಅಶ್ರಫ್ ಹೇಳಿದ್ದಾರೆ ಎಂದು ವರದಿಯಾಗಿದೆ.

ವಿಶ್ವಕಪ್ ನಂತರ ಬದಲಾವಣೆಯ ಪರ್ವ

ವಾಸ್ತವವಾಗಿ 2023 ರ ವಿಶ್ವಕಪ್ ನಂತರ ಪಾಕ್ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಟೂರ್ನಿಯಲ್ಲಿ ತಂಡ ಲೀಗ್ ಹಂತದಲ್ಲೇ ಸೋತು ಹೊರಬಿದ್ದ ಬಳಿಕ ಮಂಡಳಿಯು ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕಿತು. ಹಾಗೆಯೇ ತಂಡದ ಕೋಚಿಂಗ್ ಸಿಬ್ಬಂದಿ ಮತ್ತು ಆಯ್ಕೆ ಸಮಿತಿಯನ್ನು ಸಹ ಬದಲಾಯಿಸಿತು. ಈ ಎಲ್ಲದರ ನಡುವೆ, ಅಶ್ರಫ್ ತನ್ನ ಕುರ್ಚಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಲ್ಲದೆ, ತಮ್ಮ ಅಧಿಕಾರಾವಧಿಯ ವಿಸ್ತರಣೆಯನ್ನು ಮಾಡಿಕೊಂಡಿದ್ದರು. ಆದರೆ ಇದೀಗ ಝಾಕಾ ಅಶ್ರಫ್ ಅವರೇ ತಮ್ಮ ಕುರ್ಚಿ ಬಿಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಪಿಸಿಬಿಯ ಆಡಳಿತ ಮಂಡಳಿಯಲ್ಲೂ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇದೀಗ ಝಾಕಾ ಅಶ್ರಫ್ ರಾಜೀನಾಮೆಯಿಂದ ತೆರವಾದ ಪಾಕ್ ಮಂಡಳಿಯ ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪ್ರಧಾನಿ ಮಾತ್ರ ನಿರ್ಧರಿಸುತ್ತಾರೆ ಎಂದು ಅಶ್ರಫ್ ಹೇಳಿದ್ದಾರೆ ಎಂದು ವರದಿಯಾಗಿದೆ.

ತಂಡದ ಕಳಪೆ ಪ್ರದರ್ಶನ

ಝಾಕಾ ಅಶ್ರಫ್ ಅವರು ಕಳೆದ ವರ್ಷ ಜುಲೈ 6 ರಂದು ಪಿಸಿಬಿ ನಿರ್ವಹಣಾ ಸಮಿತಿಯ ಮುಖ್ಯಸ್ಥರ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರಿಗಿಂತ ಮೊದಲು ನಜಮ್ ಸೇಥಿ ಅವರು ಸುಮಾರು 6 ತಿಂಗಳ ಕಾಲ ಅಧ್ಯಕ್ಷರಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರನ್ನು ಈ ಸ್ಥಾನದಿಂದ ತೆಗೆದುಹಾಕಿ, ಅಶ್ರಫ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. ಅಶ್ರಫ್ ಅವಧಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ಕಳಪೆಯಾಗಿತ್ತು. ಏಷ್ಯಾಕಪ್ ಮತ್ತು ವಿಶ್ವಕಪ್‌ನಲ್ಲಿ ತಂಡಕ್ಕೆ ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾದಲ್ಲಿ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಕ್ಲೀನ್ ಸ್ವೀಪ್ ಮುಖಭಂಗ ಎದುರಿಸಿತ್ತು. ಪ್ರಸ್ತುತ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲೂ ಸತತ 4 ಟಿ20 ಪಂದ್ಯಗಳನ್ನು ತಂಡ ಸೋತಿದೆ.

2 ದಿನಗಳಲ್ಲಿ 4 ರಾಜೀನಾಮೆ

ಅಶ್ರಫ್ ರಾಜೀನಾಮೆಯಿಂದ 2 ದಿನಗಳೊಳಗೆ ನಾಲ್ವರು ದಿಗ್ಗಜರು ಪಾಕ್ ಕ್ರಿಕೆಟ್ ತೊರೆದಿದ್ದಾರೆ. ಒಂದು ದಿನ ಮುಂಚಿತವಾಗಿ, ಮಿಕ್ಕಿ ಆರ್ಥರ್, ಗ್ರ್ಯಾಂಡ್ ಬ್ರಾಡ್‌ಬರ್ನ್ ಮತ್ತು ಆಂಡ್ರ್ಯೂ ಪುಟ್ಟಿಕ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ರಾಜೀನಾಮೆ ನೀಡಿದ್ದರು. ಈ ಮೂವರೂ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚಿಂಗ್ ಸ್ಟಾಫ್‌ನಲ್ಲಿದ್ದರು. ಆದರೆ ತಂಡದ ಕಳಪೆ ಪ್ರದರ್ಶನದ ನಂತರ ಈ ಮೂವರನ್ನು ಎನ್​ಸಿಎಗೆ ಕಳುಹಿಸಲಾಗಿತ್ತು.

Published On - 9:56 pm, Fri, 19 January 24

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ