ZIM vs IND: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ
India vs Zimbabwe: ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 5 ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಯ ಮೊದಲ ಪಂದ್ಯ ಜುಲೈ 6 ರಂದು ನಡೆದರೆ, 2ನೇ ಪಂದ್ಯವು ಜುಲೈ 7 ರಂದು ಜರುಗಲಿದೆ. ಇನ್ನು 3ನೇ ಟಿ20 ಪಂದ್ಯವು ಜುಲೈ 10 ರಂದು ನಡೆದರೆ, 4ನೇ ಮತ್ತು 5ನೇ ಪಂದ್ಯಗಳು ಕ್ರಮವಾಗಿ ಜುಲೈ 13 ಮತ್ತು 14 ರಂದು ಜರುಗಲಿದೆ.
ಭಾರತ ಮತ್ತು ಝಿಂಬಾಬ್ವೆ (IND vs ZIM) ನಡುವಣ ಟಿ20 ಸರಣಿಯು ಇಂದಿನಿಂದ (ಜು.6) ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ಆಟಗಾರರ ದಂಡು ಕಣಕ್ಕಿಳಿಯಲಿದೆ. ಏಕೆಂದರೆ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯುವ ಆಟಗಾರರು ಕಣಕ್ಕಿಳಿಯಲಿದ್ದಾರೆ.
ಅದರಂತೆ ಮೊದಲ ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ರುತುರಾಜ್ ಗಾಯಕ್ವಾಡ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ರಿಯಾನ್ ಪರಾಗ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಹಾಗೆಯೇ ರಿಂಕು ಸಿಂಗ್ ಐದನೇ ಕ್ರಮಾಂಕದಲ್ಲಿ ಆಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೇಲ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.
ಆಲ್ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಹಾಗೆಯೇ ಸ್ಪಿನ್ನರ್ ಆಗಿ ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಖಲೀಲ್ ಅಹ್ಮದ್, ಅವೇಶ್ ಖಾನ್ ಹಾಗೂ ಮುಖೇಶ್ ಕುಮಾರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
- ಶುಭ್ಮನ್ ಗಿಲ್ (ನಾಯಕ)
- ಅಭಿಷೇಕ್ ಶರ್ಮಾ
- ರುತುರಾಜ್ ಗಾಯಕ್ವಾಡ್
- ರಿಯಾನ್ ಪರಾಗ್
- ರಿಂಕು ಸಿಂಗ್
- ಧ್ರುವ್ ಜುರೆಲ್ (ವಿಕೆಟ್ ಕೀಪರ್)
- ವಾಷಿಂಗ್ಟನ್ ಸುಂದರ್
- ರವಿ ಬಿಷ್ಣೋಯ್
- ಅವೇಶ್ ಖಾನ್
- ಖಲೀಲ್ ಅಹ್ಮದ್
- ಮುಖೇಶ್ ಕುಮಾರ್
ಎಷ್ಟು ಗಂಟೆಗೆ ಪಂದ್ಯ ಶುರು?
ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಝಿಂಬಾಬ್ವೆ ನಡುವಣ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ.
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?
ಲೈವ್ ಯಾವ ಚಾನೆಲ್ನಲ್ಲಿ?
ಈ ಪಂದ್ಯದ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲೂ ಪಂದ್ಯದ ನೇರ ಪ್ರಸಾರ ಇರಲಿದೆ.
ಭಾರತ ಟಿ20 ತಂಡ
ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ.