6,6,6,6,4,6: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಜಿಂಬಾಬ್ವೆ ಬ್ಯಾಟ್ಸ್​ಮನ್

| Updated By: ಝಾಹಿರ್ ಯೂಸುಫ್

Updated on: Aug 03, 2022 | 11:53 AM

Ryan Burl: ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ರಿಯಾನ್ ಬರ್ಲ್ 28 ಎಸೆತಗಳಲ್ಲಿ 54 ರನ್ ಸಿಡಿಸಿದರು.

6,6,6,6,4,6: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಜಿಂಬಾಬ್ವೆ ಬ್ಯಾಟ್ಸ್​ಮನ್
Ryan Burl
Follow us on

ಬಾಂಗ್ಲಾದೇಶ್ ವಿರುದ್ದದ 3ನೇ ಟಿ20 ಸರಣಿಯಲ್ಲಿ ಜಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ 3 ಪಂದ್ಯಗಳ ಸರಣಿಯನ್ನು ಜಿಂಬಾಬ್ವೆ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ನಿರ್ಣಾಯಕವಾಗಿದ್ದ 3ನೇ ಪಂದ್ಯದ ಗೆಲುವಿನ ರೂವಾರಿ ರಿಯಾನ್ ಬರ್ಲ್​. ಏಕೆಂದರೆ ಈ ಪಂದ್ಯದಲ್ಲಿ ರಿಯಾನ್ ಬರ್ಲ್​ ಒಂದೇ ಓವರ್​ನಲ್ಲಿ 34 ರನ್​ ಬಾರಿಸಿದ್ದರು. ಬಾಂಗ್ಲಾದೇಶ್ ಸ್ಪಿನ್ನರ್ ನಾಸುಮ್ ಅಹಮದ್ ಎಸೆದ ಪಂದ್ಯದ 15ನೇ ಓವರ್​ನಲ್ಲಿ ರಿಯಾನ್ ಬರ್ಲ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಬಾರಿಸಿದರು. ಇನ್ನು ಐದನೇ ಎಸೆತದಲ್ಲಿ ಫೋರ್ ಹೊಡೆದರು . ಹಾಗೆಯೇ ಕೊನೆಯ ಎಸೆತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸಿದರು. ಈ ಮೂಲಕ ಒಂದೇ ಓವರ್​ನಲ್ಲಿ 34 ರನ್ ಬಾರಿಸಿ ಹೊಸ ದಾಖಲೆ ಬರೆದರು.

ಅಂದರೆ ಜಿಂಬಾಬ್ವೆ ಪರ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಇದೀಗ ರಿಯಾನ್ ಬರ್ಲ್​ ಪಾಲಾಗಿದೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಓಂದೇ ಓವರ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ಓಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದರೆ, ಆರು ಎಸೆತಗಳಿಗೆ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಕೀರನ್ ಪೋಲಾರ್ಡ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 5 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ರಿಯಾನ್ ಬರ್ಲ್​ 3ನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಸಿಕ್ಸ್​ಗಳ ಮೂಲಕ ವಿಶ್ವ ದಾಖಲೆ ಬರೆದ ಆಟಗಾರರ ಪಟ್ಟಿಗೆ ಜಿಂಬಾಬ್ವೆ ಆಟಗಾರ ಕೂಡ ಎಂಟ್ರಿ ಕೊಟ್ಟಿದ್ದಾನೆ.

ನಾಸುಮ್ ಕಳಪೆ ದಾಖಲೆ:

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೇ ದುಬಾರಿ ಓವರ್ ಎಂಬುದು ವಿಶೇಷ. ಈ ಪಟ್ಟಿಯಲ್ಲಿ ಇಂಗ್ಲೆಂಡ್‌ನ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಮೊದಲ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಸ್ಪಿನ್ನರ್ ಅಕಿಲಾ ಧನಂಜಯ್ ಎರಡನೇ ಸ್ಥಾನದಲ್ಲಿದ್ದಾರೆ.

2007 ರ T20 ವಿಶ್ವಕಪ್‌ನಲ್ಲಿ, ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಶ್ರೀಲಂಕಾದ ಅಕಿಲ ಧನಂಜಯ್ ಓವರ್​ನಲ್ಲಿ ಪೊಲಾರ್ಡ್ 6 ಸಿಕ್ಸ್ ಸಿಡಿಸಿ ಯುವಿಯ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ 34 ರನ್​ ನೀಡುವ ಮೂಲಕ ನಾಸುಮ್ ಅಹ್ಮದ್ ದುಬಾರಿ ಓವರ್ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

ಅಷ್ಟೇ ಅಲ್ಲದೆ ಬಾಂಗ್ಲಾದೇಶ್ ತಂಡದ ಪರ ಅತ್ಯಧಿಕ ರನ್ ನೀಡಿದ ಬೌಲರ್​ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2017 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಸೈಫುದ್ದೀನ್ ಅಹ್ಮದ್ 31 ರನ್ ನೀಡಿದ್ದರು. ಇದೀಗ 34 ರನ್​ ನೀಡುವ ಮೂಲಕ ಸೈಫುದ್ದೀನ್ ಕಳಪೆ ದಾಖಲೆಯನ್ನು ದಾಟಿ ನಾಸುಮ್ ಅಹ್ಮದ್ ಕೆಟ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜಿಂಬಾಬ್ವೆಗೆ ಸರಣಿ ಜಯ:
ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ರಿಯಾನ್ ಬರ್ಲ್ 28 ಎಸೆತಗಳಲ್ಲಿ 54 ರನ್ ಸಿಡಿಸಿದರು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ರಿಯಾನ್ ಬರ್ಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.