ZIM vs IND: ಇಂದು ಝಿಂಬಾಬ್ವೆ vs ಭಾರತ ಮತ್ತೆ ಮುಖಾಮುಖಿ

Zimbabwe vs India: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಒಟ್ಟು 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 6 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಮೂರು ಮ್ಯಾಚ್​ಗಳಲ್ಲಿ ಝಿಂಬಾಬ್ವೆ ಗೆಲುವು ದಾಖಲಿಸಿದೆ. ಇದೀಗ 10ನೇ ಬಾರಿ ಮುಖಾಮುಖಿಯಾಗಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

ZIM vs IND: ಇಂದು ಝಿಂಬಾಬ್ವೆ vs ಭಾರತ ಮತ್ತೆ ಮುಖಾಮುಖಿ
ZIM vs IND
Follow us
|

Updated on:Jul 07, 2024 | 7:54 AM

ಹರಾರೆಯ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಝಿಂಬಾಬ್ವೆ (Zimbabwe) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 115 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 102 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಝಿಂಬಾಬ್ವೆ 13 ರನ್​ಗಳ ಜಯ ಸಾಧಿಸಿದೆ. ಇದೀಗ ಈ ಸರಣಿಯ 2ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದೆ.

ಭಾನುವಾರ ನಡೆಯಲಿರುವ ಈ ಪಂದ್ಯ ಕೂಡ ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲೇ ಜರುಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಝಿಂಬಾಬ್ವೆ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

ಭಾರತ ಟಿ20 ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ. (ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್- ಉಳಿದ ಮೂರು ಪಂದ್ಯಗಳಿಗೆ).

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಝಿಂಬಾಬ್ವೆ ತಂಡ: ಬ್ರಿಯಾನ್ ಬೆನೆಟ್, ತಡಿವಾನಾಶೆ ಮರುಮಣಿ, ಸಿಕಂದರ್ ರಾಝ (ನಾಯಕ), ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ಇನೋಸೆಂಟ್ ಕೈಯಾ, ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ, ವೆಲ್ಲಿಂಗ್‌ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಝರ್ಬಾನಿ, ರಿಚರ್ಡ್ ನ್ಗರವ, ಬ್ರಾಂಡನ್ ಮಯ್‌ರಾಂಡೈ ಮಯ್‌ರಾಂಡೈ, ಬ್ರಾಂಡನ್ ಮಯ್‌ರಾಂಡೈಸ್ , ಫರಾಜ್ ಅಕ್ರಮ್, ಅಂತುಮ್ ನಖ್ವಿ.

ಭಾರತ vs ಝಿಂಬಾಬ್ವೆ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟಿ20, ಝಿಂಬಾಬ್ವೆ vs ಭಾರತ ಶನಿವಾರ, 6 ಜುಲೈ 2024 4:30 PM ಹರಾರೆ
2ನೇ ಟಿ20, ಝಿಂಬಾಬ್ವೆ vs ಭಾರತ ಭಾನುವಾರ, 7 ಜುಲೈ 2024 4:30 PM ಹರಾರೆ
3ನೇ ಟಿ20, ಝಿಂಬಾಬ್ವೆ vs ಭಾರತ ಬುಧವಾರ, 10 ಜುಲೈ 2024 9:30 PM ಹರಾರೆ
4ನೇ ಟಿ20, ಝಿಂಬಾಬ್ವೆ vs ಭಾರತ ಶನಿವಾರ, 13 ಜುಲೈ 2024 4:30 PM ಹರಾರೆ
5ನೇ ಟಿ20, ಝಿಂಬಾಬ್ವೆ vs ಭಾರತ ಭಾನುವಾರ, 14 ಜುಲೈ 2024 4:30 PM ಹರಾರೆ

Published On - 7:50 am, Sun, 7 July 24

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ