AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಭಾರತ ತಂಡದಲ್ಲಿ ಮೂರು ಬದಲಾವಣೆ ಸಾಧ್ಯತೆ

Zimbabwe vs India: ಭಾರತ ಮತ್ತು ಝಿಂಬಾಬ್ವೆ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಝಿಂಬಾಬ್ವೆ ತಂಡವು 13 ರನ್​ಗಳ ರೋಚಕ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿ ನಿಂತಿದೆ.

IND vs ZIM: ಭಾರತ ತಂಡದಲ್ಲಿ ಮೂರು ಬದಲಾವಣೆ ಸಾಧ್ಯತೆ
Team India
ಝಾಹಿರ್ ಯೂಸುಫ್
|

Updated on: Jul 10, 2024 | 9:00 AM

Share

ಭಾರತ ಮತ್ತು ಝಿಂಬಾಬ್ವೆ (India vs Zimbabwe) ನಡುವಣ ಮೂರನೇ ಟಿ20 ಪಂದ್ಯ ಇಂದು (ಜೂ.10) ನಡೆಯಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದೆರಡು ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಇದೀಗ ತಂಡವನ್ನು ಕೂಡಿಕೊಂಡಿದ್ದಾರೆ.

ಈ ಮೂವರು ಆಟಗಾರರು ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಹೀಗಾಗಿ ಝಿಂಬಾಬ್ವೆ ಸರಣಿಗೆ ತೆರಳಲು ವಿಳಂಬವಾಗಿದೆ. ಇದೀಗ ಮೂವರು ಆಟಗಾರರು ಹರಾರೆಯಲ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಇವರು ಕಣಕ್ಕಿಳಿಯುವ ಸಾಧ್ಯತೆಯಿದೆ.

ಆದರೆ ಈ ಮೂವರು ಆಟಗಾರರಿಗಾಗಿ ಇಲ್ಲಿ ಯಾರನ್ನು ಕೈ ಬಿಡಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ನಾಯಕನಾಗಿ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಅತ್ತ ಕಳೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (100) ಶತಕ ಸಿಡಿಸಿದರೆ, ರುತುರಾಜ್ ಗಾಯಕ್ವಾಡ್ (77) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಹೀಗಾಗಿ ಟಾಪ್-3 ನಿಂದ ಮೂವರನ್ನು ಕೈ ಬಿಡಲು ಸಾಧ್ಯವಾಗುವುದಿಲ್ಲ.

ಇದಾಗ್ಯೂ 4ನೇ ಕ್ರಮಾಂಕದಲ್ಲಿರುವ ಸಾಯಿ ಸುದರ್ಶನ್ ಅವರನ್ನು ಕೈ ಬಿಟ್ಟರೆ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ಸಿಗಬಹುದು. ಇನ್ನು ಧ್ರುವ್ ಜುರೇಲ್ ಸ್ಥಾನದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯಬಹುದು. ಅದೇ ರೀತಿ ರಿಯಾನ್ ಪರಾಗ್ ಬದಲಿಗೆ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಮೂರು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯಬಹುದು. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಶುಭಮನ್ ಗಿಲ್ (ನಾಯಕ) , ಅಭಿಷೇಕ್ ಶರ್ಮಾ , ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ , ಶಿವಂ ದುಬೆ, ರಿಂಕು ಸಿಂಗ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್ , ಅವೇಶ್ ಖಾನ್ , ಮುಖೇಶ್ ಕುಮಾರ್.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ