IND vs ZIM: ಇಂದು ಭಾರತ vs ಝಿಂಬಾಬ್ವೆ ನಡುವೆ ಸರಣಿ ನಿರ್ಣಾಯಕ ಪಂದ್ಯ

Zimbabwe vs India: ಭಾರತ ಮತ್ತು ಝಿಂಬಾಬ್ವೆ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಝಿಂಬಾಬ್ವೆ ತಂಡವು 13 ರನ್​ಗಳ ರೋಚಕ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡವು 23 ರನ್​ಗಳ ವಿಜಯ ಸಾಧಿಸಿದೆ.

IND vs ZIM: ಇಂದು ಭಾರತ vs ಝಿಂಬಾಬ್ವೆ ನಡುವೆ ಸರಣಿ ನಿರ್ಣಾಯಕ ಪಂದ್ಯ
ZIM vs IND
Follow us
ಝಾಹಿರ್ ಯೂಸುಫ್
|

Updated on: Jul 13, 2024 | 7:39 AM

ಭಾರತ ಮತ್ತು ಝಿಂಬಾಬ್ವೆ (India vs Zimbabwe) ನಡುವಣ 4ನೇ ಟಿ೨೦ ಪಂದ್ಯವು ಇಂದು (ಜು.14) ನಡೆಯಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಆತಿಥೇಯರಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ 2-1 ಅಂತರದಿಂದ ಮುನ್ನಡೆಯಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಜಯದ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಝಿಂಬಾಬ್ವೆ ಗೆಲುವು ದಾಖಲಿಸಲೇ ಬೇಕು. ಹೀಗಾಗಿಯೇ 4ನೇ ಪಂದ್ಯವು ಝಿಂಬಾಬ್ವೆ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಇನ್ನು ಪಂದ್ಯದಲ್ಲೂ ಟೀಮ್ ಇಂಡಿಯಾ ಕಳೆದ ಬಾರಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್’ನೊಂದಿಗೆ ಆಡುವ ಸಾಧ್ಯತೆಯಿದೆ. ಅದರಂತೆ ಆರಂಭಿಕರಾಗಿ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ಲಾಲ್ ಕಣಕ್ಕಿಳಿದರೆ, ಅಭಿಷೇಕ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಹಾಗೆಯೇ ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ರಿಂಕು ಸಿಂಗ್ ಕ್ರಮವಾಗಿ 4,5, 6 ಮತ್ತು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಅದೇ ರೀತಿ ಸ್ಪಿನ್ನರ್ ಗಳಾಗಿ ವಾಷಿಂಗ್ಟನ್ ಸುಂದರ್ ಹಾಗೂ ರವಿ ಬಿಷ್ಟೋಯ್ ಆಡಿದ್ರೆ, ವೇಗಿಗಳಾಗಿ ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಶುಭಮನ್ ಗಿಲ್ (ನಾಯಕ) , ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್ , ಶಿವಂ ದುಬೆ, ರಿಂಕು ಸಿಂಗ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್ , ಅವೇಶ್ ಖಾನ್ , ಖಲೀಲ್ ಅಹ್ಮದ್.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಝಿಂಬಾಬ್ವೆ ಸರಣಿಯ 4ನೇ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ, ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಝಿಂಬಾಬ್ವೆ ತಂಡ: ಬ್ರಿಯಾನ್ ಬೆನೆಟ್, ತಡಿವಾನಾಶೆ ಮರುಮಣಿ, ಸಿಕಂದರ್ ರಾಝ (ನಾಯಕ), ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ಇನೋಸೆಂಟ್ ಕೈಯಾ, ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ, ವೆಲ್ಲಿಂಗ್‌ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಝರ್ಬಾನಿ, ರಿಚರ್ಡ್ ನ್ಗರವ, ಬ್ರಾಂಡನ್ ಮಯ್‌ರಾಂಡೈ ಮಯ್‌ರಾಂಡೈ, ಬ್ರಾಂಡನ್ ಮಯ್‌ರಾಂಡೈಸ್ , ಫರಾಜ್ ಅಕ್ರಮ್, ಅಂತುಮ್ ನಖ್ವಿ.