ನಿಜಕ್ಕೂ ನಾನು ಐಪಿಎಲ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ -ರಾಹುಲ್​

ಈ ಬಾರಿಯ ಐಪಿಎಲ್‌ನಲ್ಲಿ ಕಣಕ್ಕಿಳಿಯೋದಕ್ಕೆ ಕಾತರನಾಗಿರೋದಾಗಿ ಟೀಮ್ ಇಂಡಿಯಾ ಆಟಗಾರ ಕನ್ನಡಿಗ ಕೆ.ಎಲ್.ರಾಹುಲ್ ಹೇಳಿದ್ದಾರೆ. ನಿಜಕ್ಕೂ ನಾನು ಐಪಿಎಲ್ ಅನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಈ ಸೀಸನ್ ನನಗೆ ತಂಡದ ನಾಯಕತ್ವ ವಹಿಸೋದಕ್ಕೆ ತುಂಬಾ ಮಹತ್ವದ್ದಾಗಿದೆ. ಯಾಕಂದ್ರೆ ನಾವು ತಂಡದಲ್ಲಿ ಅದ್ಭುತವಾದ ಆಟಗಾರರನ್ನ ಹೊಂದಿದ್ದೇವೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ. ಕಿಂಗ್ಸ್ ಇಲವೆನ್ ಪಂಜಾಬ್ ತಂಡವನ್ನ ಈ ಹಿಂದೆ ರವಿಚಂದ್ರನ್ ಅಶ್ವಿನ್ ಮುನ್ನಡೆಸುತ್ತಿದ್ರು. 2018 ಮತ್ತು 2019 ಆವೃತ್ತಿಯಲ್ಲಿ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಅಶ್ವಿನ್​ರನ್ನ, ಈ ಬಾರಿ ಡೆಲ್ಲಿ ತಂಡ […]

ನಿಜಕ್ಕೂ ನಾನು ಐಪಿಎಲ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ -ರಾಹುಲ್​
ಕೆ. ಎಲ್ ರಾಹುಲ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 29, 2020 | 1:05 PM

ಈ ಬಾರಿಯ ಐಪಿಎಲ್‌ನಲ್ಲಿ ಕಣಕ್ಕಿಳಿಯೋದಕ್ಕೆ ಕಾತರನಾಗಿರೋದಾಗಿ ಟೀಮ್ ಇಂಡಿಯಾ ಆಟಗಾರ ಕನ್ನಡಿಗ ಕೆ.ಎಲ್.ರಾಹುಲ್ ಹೇಳಿದ್ದಾರೆ. ನಿಜಕ್ಕೂ ನಾನು ಐಪಿಎಲ್ ಅನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಈ ಸೀಸನ್ ನನಗೆ ತಂಡದ ನಾಯಕತ್ವ ವಹಿಸೋದಕ್ಕೆ ತುಂಬಾ ಮಹತ್ವದ್ದಾಗಿದೆ. ಯಾಕಂದ್ರೆ ನಾವು ತಂಡದಲ್ಲಿ ಅದ್ಭುತವಾದ ಆಟಗಾರರನ್ನ ಹೊಂದಿದ್ದೇವೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಕಿಂಗ್ಸ್ ಇಲವೆನ್ ಪಂಜಾಬ್ ತಂಡವನ್ನ ಈ ಹಿಂದೆ ರವಿಚಂದ್ರನ್ ಅಶ್ವಿನ್ ಮುನ್ನಡೆಸುತ್ತಿದ್ರು. 2018 ಮತ್ತು 2019 ಆವೃತ್ತಿಯಲ್ಲಿ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಅಶ್ವಿನ್​ರನ್ನ, ಈ ಬಾರಿ ಡೆಲ್ಲಿ ತಂಡ ಖರೀದಿಸಿದೆ. ಹೀಗಾಗಿ ಕೆಎಲ್ ರಾಹುಲ್‌ಗೆ ಪಂಜಾಬ್ ತಂಡದ ನಾಯಕತ್ವ ನಿಭಾಯಿಸೋ ಸುವರ್ಣಾವಕಾಶ ಸಿಕ್ಕಿದೆ.

ಕಿಂಗ್ಸ್ ಇಲವೆನ್ ಪಂಜಾಬ್ ತಂಡದಲ್ಲಿರೋ ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ಜೊತೆ ಓಪನ್ ನೆಟ್ಸ್ ವಿತ್ ಮಯಾಂಕ್ ವಿಶೇಷ ಎಪಿಸೋಡ್‌ನಲ್ಲಿ ಪಾಲ್ಗೊಂಡಿದ್ದ ರಾಹುಲ್ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಈ ವಿಡಿಯೋದಲ್ಲಿ ರಾಹುಲ್ ಐಪಿಎಲ್‌ಗಾಗಿ ಕಾತರದಿಂದ ಕಾಯುತ್ತಿರೋದಾಗಿ ಹೇಳಿಕೊಂಡಿದ್ದಾರೆ. ಕ್ರಿಸ್ ಗೇಲ್, ನೀವು(ಮಯಾಂಕ್ ಅಗರ್ವಾಲ್) ಮತ್ತು ಮ್ಯಾಕ್ಸ್‌ವೆಲ್ ಹಾಗೂ ಇನ್ನೂ ಹಲವು ಆಟಗಾರರ ಜೊತೆಗೆ ಆಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

Published On - 1:57 pm, Thu, 25 June 20

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!