ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು! ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ರೊನಾಲ್ಡೊ

Cristiano Ronaldo: ದುಬೈನ ಹೃದಯಭಾಗದಲ್ಲಿರುವ ಐಕಾನಿಕ್ ಟವರ್‌ ಮೇಲೆ ತನ್ನ ಮಡದಿಗೆ ಜನ್ಮ ದಿನದ ಶುಭಾಷಯ ಕೋರಲು ಬರೋಬ್ಬರಿ 50,000 ಪೌಂಡ್‌ಗಳನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.

ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು! ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ರೊನಾಲ್ಡೊ
ಮಡದಿಯೊಂದಿಗೆ ರೊನಾಲ್ಡೊ
Follow us
TV9 Web
| Updated By: ಪೃಥ್ವಿಶಂಕರ

Updated on: Jan 28, 2022 | 10:05 PM

ಮ್ಯಾಂಚೆಸ್ಟರ್ ಯುನೈಟೆಡ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ತಮ್ಮ ಮಡದಿ ಜಾರ್ಜಿನಾ ರೊಡ್ರಿಗಸ್‌ ಹುಟ್ಟುಹಬ್ಬಕ್ಕೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಅದೆನೆಂದರೆ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನಲ್ಲಿರುವ ಬುರ್ಜ್ ಖಲೀಫಾದ ಮೇಲೆ ತಮ್ಮ ಮಡದಿಯ ಭಾವಚಿತ್ರವಿರುವ ಲೇಸರ್ ಶೋ ಏರ್ಪಡಿಸುವ ಮೂಲಕ ಮಡದಿ ಜಾರ್ಜಿನಾ ರೊಡ್ರಿಗಸ್​ಗೆ ಸವಿ ನೆನಪಿನ ಕಾಣಿಕೆ ನೀಡಿದ್ದಾರೆ. ಐದು ಬ್ಯಾಲನ್ ಡಿ ಓರ್ ಪ್ರಶಸ್ತಿಗಳ ವಿಜೇತ ರೊನಾಲ್ಡೊ, ದುಬೈನ ಹೃದಯಭಾಗದಲ್ಲಿರುವ ಐಕಾನಿಕ್ ಟವರ್‌ ಮೇಲೆ ತನ್ನ ಮಡದಿಗೆ ಜನ್ಮ ದಿನದ ಶುಭಾಷಯ ಕೋರಲು ಬರೋಬ್ಬರಿ 50,000 ಪೌಂಡ್‌ಗಳನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.

370 ಮಿಲಿಯನ್ ಪೌಂಡ್‌ ಆಸ್ತಿಯ ಒಡೆಯನಾಗಿರುವ 36 ವರ್ಷದ ರೊನಾಲ್ಡೊ, ಗುರುವಾರ ರಾತ್ರಿ ಗಗನಚುಂಬಿ ಕಟ್ಟಡದ ಮೇಲೆ ತನ್ನ 28 ವರ್ಷದ ಮಾಡೆಲ್ ಗೆಳತಿಯ ಚಿತ್ರಗಳು ಮತ್ತು ವೀಡಿಯೊಗಳನ್ನು ಐಕಾನಿಕ್ ಟವರ್‌ನ ಮೇಲೆ 30 ಸೆಕೆಂಡುಗಳ ಕಾಲ ಪೋಸ್ಟ್ ಮಾಡಿದ್ದಾರೆ. ಸದ್ಯ ಇಂಗ್ಲಿಷ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿರುವ ರೊನಾಲ್ಡೊ, ಚಳಿಗಾಲದ ವಿರಾಮದ ಸಮಯವನ್ನು ಕುಟುಂಬದೊಂದಿಗೆ ದುಬೈನಲ್ಲಿ ಕಳೆಯುತ್ತಿದ್ದಾರೆ. ರೊನಾಲ್ಡೊ ಮತ್ತು ಜಾರ್ಜಿನಾ ದಂಪತಿಗಳಿಗೆ ನಾಲ್ಕು ವರ್ಷದ ಮಗನೂ ಇದ್ದು, ಆತ ಕೂಡ ಅವರೊಂದಿಗೆ ರಜೆಯ ಮಜಾದಲ್ಲಿದ್ದಾನೆ.

ಲೈಟ್ ಮತ್ತು ಲೇಸರ್ ಶೋನಲ್ಲಿ ಮಾಜಿ ರಿಯಲ್ ಮ್ಯಾಡ್ರಿಡ್ ಮತ್ತು ಜುವೆಂಟಸ್ ತಂಡದ ಆಟಗಾರ ರೊನಾಲ್ಡೊ ಹಾಗೂ ಅವರ ಗೆಳತಿಯ ಹೆಸರು ಗೋಪುರದ ಮೇಲೆ ಪ್ರದರ್ಶನಗೊಂಡಿತು. ನಂತರ ಹ್ಯಾಪಿ ಬರ್ತ್‌ಡೇ ಜಿಯೋ ಸಂದೇಶದೊಂದಿಗೆ ಕೊನೆಗೊಂಡಿತು.

ಐಕಾನಿಕ್ ಟವರ್ ರಾತ್ರಿಯಲ್ಲಿ ವಿಶ್ವದ ಅತಿದೊಡ್ಡ ಪ್ರದರ್ಶನ ಪರದೆಯಾಗುತ್ತದೆ. ಇತ್ತೀಚಿನ ವರದಿಗಳ ಪ್ರಕಾರ ಗೋಪುರದ ಮುಂಭಾಗದಲ್ಲಿ ಮೂರು-ನಿಮಿಷದ ಪ್ರಚಾರ ಜಾಹೀರಾತು ಅಥವಾ ಸಂದೇಶವನ್ನು ಹಾಕಲು ಬರೊಬ್ಬರಿ ಕನಿಷ್ಠ 50,000 ಪೌಂಡ್‌ಗಳನ್ನು ಪಾವತಿಸಬೇಕು. ವರದಿಗಳ ಪ್ರಕಾರ ಈ ಮೊತ್ತ ವಾರಾಂತ್ಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ