Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB Predicted Playing 11: ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಏನೇನು ಬದಲಾವಣೆ?

ಸರಣಿಯ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದು, ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಡೆಲ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಇಂದು ಸೆಣೆಸಾಡಲಿದೆ. ಬಹಳಷ್ಟು ಯುವ ಕ್ರಿಕೆಟಿಗರನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್, ಸದೃಢ ಬ್ಯಾಟಿಂಗ್ ಮತ್ತು ಬೌಲಿಂಗ್ ಲೈನ್‌ಅಪ್ ಹೊಂದಿರುವ ಆರ್‌ಸಿಬಿ ತಂಡವನ್ನು ಎದುರಿಸಲಿದೆ.

DC vs RCB Predicted Playing 11: ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಏನೇನು ಬದಲಾವಣೆ?
ವಿರಾಟ್ ಕೊಹ್ಲಿ, ರಿಷಭ್ ಪಂತ್
Follow us
TV9 Web
| Updated By: ganapathi bhat

Updated on:Sep 05, 2021 | 10:45 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಡುವೆ ಐಪಿಎಲ್ 2021 ಟೂರ್ನಿಯ 22ನೇ ಪಂದ್ಯವು ಇಂದು ನರೇಂದ್ರ ಮೋದಿ ಮೈದಾನ, ಅಹಮದಾಬಾದ್‌ನಲ್ಲಿ ನಡೆಯಲಿದೆ. ಸರಣಿಯ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದು, ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಡೆಲ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಇಂದು ಸೆಣೆಸಾಡಲಿದೆ. ಬಹಳಷ್ಟು ಯುವ ಕ್ರಿಕೆಟಿಗರನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್, ಸದೃಢ ಬ್ಯಾಟಿಂಗ್ ಮತ್ತು ಬೌಲಿಂಗ್ ಲೈನ್‌ಅಪ್ ಹೊಂದಿರುವ ಆರ್‌ಸಿಬಿ ತಂಡವನ್ನು ಎದುರಿಸಲಿದೆ.

ರಾಯಲ್ ಚಾಲೆಂಜರ್ಸ್ ತಂಡದ ಇಬ್ಬರು ಆಟಗಾರರು, ಆಡಮ್ ಜಂಪಾ ಮತ್ತು ಕೇನ್ ರಿಚರ್ಡ್‌‌ಸನ್ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಆದರೆ ಅವರಿಬ್ಬರಿಂದಾಗಿ ಪ್ಲೇಯಿಂಗ್ ಇಲೆವೆನ್‌ಗೆ ದೊಡ್ಡ ಸಮಸ್ಯೆ ಎದುರಾಗುತ್ತದೆ ಎಂದು ಹೇಳಲಾಗದು. ಆರ್‌ಸಿಬಿ ಬ್ಯಾಟಿಂಗ್ ಆರ್ಡರ್ ಸದೃಢವಾಗಿದೆ. ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್ ಆಟ ಬೃಹತ್ ಮೊತ್ತ ಪೇರಿಸುವ ಎಲ್ಲಾ ಸಾಮರ್ಥ್ಯವನ್ನೂ ಹೊಂದಿದೆ. ಹರ್ಷಲ್ ಪಟೇಲ್, ಸಿರಾಜ್ ಬೌಲಿಂಗ್ ಕಮಾಲ್ ಮಾಡುವುದೂ ತಂಡದ ಯಶಸ್ಸಿಗೆ ಕಾರಣವಾಗಿದೆ. ಸತತ ನಾಲ್ಕು ಪಂದ್ಯ ಗೆದ್ದಿದ್ದ ಆರ್‌ಸಿಬಿ ಕೊನೆಯ ಪಂದ್ಯದಲ್ಲಿ ಸೋತಿರುವುದು ತಂಡದ ವಿಶ್ವಾಸವನ್ನು ಕೊಂಚ ಕಡಿಮೆ ಮಾಡಿರುವ ಸಾಧ್ಯತೆಯೂ ಇದೆ.

ಇತ್ತ ಡೆಲ್ಲಿ ಕೂಡ ಈ ಬಾರಿಯ ಫೇವರಿಟ್ ತಂಡ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಪೃಥ್ವಿ ಶಾ, ಧವನ್ ಓಪನಿಂಗ್ ಆಟ, ಪಂತ್, ಸ್ಮಿತ್ ಮಧ್ಯಮ ಕ್ರಮಾಂಕದಲ್ಲಿ ಬಲವಾಗುವ ಆಟಗಾರರಾಗಿದ್ದಾರೆ. ಅಕ್ಸರ್ ಪಟೇಲ್ ತಂಡ ಸೇರಿದ್ದಾರೆ. ರಬಾಡ, ಅವೇಶ್ ಖಾನ್ ಕೂಡ ಉತ್ತಮ ಬೌಲಿಂಗ್ ಮಾಡುವ ನಿರೀಕ್ಷೆ ಇದೆ. ಅಂಕಪಟ್ಟಿಯಲ್ಲಿ ಸರಿಸಮ ಅಂಕ ಪಡೆದಿರುವ ಎರಡು ತಂಡಗಳ ಹೋರಾಟ ಕುತೂಹಲ ಮೂಡಿಸಿದೆ.

ದೆಹಲಿ ರಾಜಧಾನಿಗಳು ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ/ ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಸರ್ ಪಟೇಲ್, ಕಗಿಸೊ ರಬಾಡ, ಲಲಿತ್ ಯಾದವ್, ಅವೇಶ್ ಖಾನ್, ಉಮೇಶ್ ಯಾದವ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್​ವೆಲ್, ಡೇನಿಯಲ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್, ಮತ್ತು ಯುಜ್ವೇಂದ್ರ ಚಹಾಲ್

ಇದನ್ನೂ ಓದಿ:  RCB vs DC IPL 2021 Match Prediction: ಬಲಿಷ್ಠ ಆರ್​ಸಿಬಿ – ಡೆಲ್ಲಿ ನಡುವೆ ಹಣಾಹಣಿ, ಕೊಹ್ಲಿ ಗೆಲ್ಲುವ ಕುದುರೆ ಎನ್ನುತ್ತಿವೆ ಅಂಕಿ ಅಂಶ

RCB: ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ‘ಬಭ್ರುವಾಹನ’ ಸಿನಿಮಾ ಹಾಡಿನ ಸಾಲು ಬರೆದು ಶುಭಕೋರಿದ ಆರ್​ಸಿಬಿ!

(DC vs RCB Team Prediction IPL 2021 Delhi Capitals vs Royal Challengers Bangalore IPL 2021)

Published On - 5:16 pm, Tue, 27 April 21

ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?