ಮನಿಕಾ ಬಾತ್ರಾ ಮ್ಯಾಚ್ ಫಿಕ್ಸಿಂಗ್ ಆರೋಪ ನಿಜ: ರಾಷ್ಟ್ರೀಯ ಕೋಚ್ ಆರೋಪಿ ಎಂದ ದೆಹಲಿ ಹೈಕೋರ್ಟ್

ಭಾರತದ ರಾಷ್ಟ್ರೀಯ ಟೇಬಲ್ ಟೆನಿಸ್ ಕೋಚ್ ಸೌಮ್ಯದೀಪ್ ರಾಯ್ ವಿರುದ್ಧದ ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ದೆಹಲಿ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ ವಿರುದ್ಧವೂ ಆರೋಪ ಮಾಡಿದೆ.

ಮನಿಕಾ ಬಾತ್ರಾ ಮ್ಯಾಚ್ ಫಿಕ್ಸಿಂಗ್ ಆರೋಪ ನಿಜ:  ರಾಷ್ಟ್ರೀಯ ಕೋಚ್ ಆರೋಪಿ ಎಂದ ದೆಹಲಿ ಹೈಕೋರ್ಟ್
ಮನಿಕಾ ಬಾತ್ರಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 11, 2022 | 5:26 PM

ಭಾರತದ ರಾಷ್ಟ್ರೀಯ ಟೇಬಲ್ ಟೆನಿಸ್ ಕೋಚ್ ಸೌಮ್ಯದೀಪ್ ರಾಯ್ ವಿರುದ್ಧದ ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ದೆಹಲಿ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (Table Tennis Federation of India) ವಿರುದ್ಧವೂ ಆರೋಪ ಮಾಡಿದೆ. ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಬಾತ್ರಾ (Manika Batra) ಅವರು ಸೌಮ್ಯದೀಪ್ ಅವರು ಒಲಂಪಿಕ್ ಅರ್ಹತಾ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡುವಂತೆ ಮಣಿಕಾ ಅವರನ್ನು ಕೇಳಿದ್ದರು ಎಂದು ಆರೋಪಿಸಿದ್ದರು. ಇದಾದ ಬಳಿಕ ದೆಹಲಿ ಕೋರ್ಟ್ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು. ಕೋಚ್ ವಿರುದ್ಧ ಮಾಡಿದ್ದ ಮ್ಯಾಚ್ ಫಿಕ್ಸಿಂಗ್ ಆರೋಪ ಸತ್ಯ ಎಂದು ಸಾಬೀತಾಗಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ರಾಷ್ಟ್ರೀಯ ಕೋಚ್‌ನ ಸಹಾಯವನ್ನು ಪಡೆಯಲು ಮನಿಕಾ ಬಾತ್ರಾ ನಿರಾಕರಿಸಿದ್ದರು. ನಂತರ ಫೆಡರೇಶನ್ ಮಣಿಕಾಗೆ ಶೋಕಾಸ್ ನೋಟಿಸ್ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ಮಣಿಕಾ, ರಾಷ್ಟ್ರೀಯ ಕೋಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ನನ್ನ ಬಳಿ ಕೇಳಿಕೊಂಡಿದ್ದರು. ಆದ್ದರಿಂದ ಅವರು ತನ್ನೊಂದಿಗೆ ಕೋಚ್ ಆಗಿ ಕುಳಿತಿದ್ದರೆ, ಪಂದ್ಯದ ಮೇಲೆ ಕೇಂದ್ರೀಕರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಮನಿಕಾ ಹೇಳಿಕೊಂಡಿದ್ದರು.

ರಾಷ್ಟ್ರೀಯ ಕೋಚ್ ವಿರುದ್ಧ ಆರೋಪ ಮಾಡಿದ್ದ ಮನಿಕಾ

ಟಿಟಿಎಫ್‌ಐ ಕಾರ್ಯದರ್ಶಿ ಅರುಣ್ ಬ್ಯಾನರ್ಜಿ ಅವರಿಗೆ ನೀಡಿದ ಉತ್ತರದಲ್ಲಿ ಮಣಿಕಾ, ಮಾರ್ಚ್ 2021 ರಲ್ಲಿ ದೋಹಾದಲ್ಲಿ ನಡೆದ ಅರ್ಹತಾ ಪಂದ್ಯಾವಳಿಯಲ್ಲಿ ರಾಷ್ಟ್ರೀಯ ತರಬೇತುದಾರರು ತಾನು ಕೋಚಿಂಗ್ ಮಾಡುತ್ತಿರುವ ಆಟಗಾರ್ತಿಯ ವಿರುದ್ಧದ ಪಂದ್ಯದಲ್ಲಿ ಸೋಲುವಂತೆ ನನಗೆ ಒತ್ತಡ ಹೇರಿದರು. ಇದರಿಂದ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬಹುದು ಎಂಬುದು ಅವರ ಕಾರಣವಾಗಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ರಾಷ್ಟ್ರೀಯ ಕೋಚ್ ನನ್ನ ಬಳಿ ಮ್ಯಾಚ್-ಫಿಕ್ಸಿಂಗ್ ಮಾಡಿಕೊಳ್ಳುವಂತೆ ಒತ್ತಾಯ ಹೇರಿದ್ದರು ಎಂದು ಹೇಳಿಕೊಂಡಿದ್ದರು. ಸುರ್ತಿತಾ ಮುರ್ಖಾಜಿ ವಿರುದ್ಧದ ಪಂದ್ಯದಲ್ಲಿ ಉದ್ದೇಶಪೂರ್ವಕವಾಗಿ ಸೋಲುವಂತೆ ಮಾಣಿಕಾಗೆ ಸೌಮ್ಯದೀಪ್ ಕೇಳಿಕೊಂಡಿದ್ದರು ಎನ್ನಲಾಗಿದೆ. ಸೌಮ್ಯದೀಪ್ ಕೋರಿಕೆಗೆ ನಾನು ಯಾವುದೇ ಭರವಸೆ ನೀಡಲಿಲ್ಲ ಮತ್ತು ತಕ್ಷಣವೇ ಟಿಟಿಎಫ್‌ಐಗೆ ತಿಳಿಸಿದ್ದೇನೆ. ಆದರೆ, ಅವರ ಒತ್ತಡ ಮತ್ತು ಬೆದರಿಕೆ ನನ್ನ ಆಟದ ಮೇಲೆ ಪರಿಣಾಮ ಬೀರಿತು ಎಂದು ಮನಿಕಾ ಹೇಳಿಕೊಂಡಿದ್ದಾರೆ. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದಾಗಿನಿಂದ ಸೌಮ್ಯದೀಪ್ ರಾಯ್ ಅವರನ್ನು ರಾಷ್ಟ್ರೀಯ ಶಿಬಿರದಿಂದ ಹೊರಗಿಡಲಾಗಿದೆ.

ಇದನ್ನೂ ಓದಿ:IPL 2022: ಐಪಿಎಲ್ ಹರಾಜಿಗೂ ಮುನ್ನ ಪಂಜಾಬ್ ತಂಡಕ್ಕೆ ಆಘಾತ; ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ರಾಜೀನಾಮೆ!

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?