ಸೌರವ್ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು
ಸೌರವ್ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೋಲ್ಕತ್ತ: ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಸೌರವ್ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌರವ್ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಐಸಿಯುನಲ್ಲಿ ಇದ್ದಾರೆ. ಇನ್ನು ಗಂಗೂಲಿಗೆ ಕೊವಿಡ್-19 ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ.
ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ, ಕ್ರಿಕೆಟ್ ವಲಯದ ಹಲವರು ಹಾರೈಸಿದ್ದಾರೆ.
ಗಂಗೂಲಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ: ಜಯ್ ಶಾ