ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ತಂಡಕ್ಕೆ ಜ್ಯಾಕ್ ಕ್ಯಾಲಿಸ್ ಬ್ಯಾಟಿಂಗ್ ಸಲಹೆ

ಆಲ್​ರೌಂಡರ್ ಆಗಿದ್ದರೂ ತಮ್ಮ ಸಮಕಾಲೀನ ಶ್ರೇಷ್ಠ ಬ್ಯಾಟ್ಸ್​ಮನ್​ಗಳಿಗಿಂತ ಉತ್ತಮ ಬ್ಯಾಟಿಂಗ್ ಸರಾಸರಿಯನ್ನು ಹೊಂದಿರುವ ದಕ್ಷಿಣ ಆಫ್ರಿಕಾದ ಜ್ಯಾಕ್ ಕ್ಯಾಲಿಸ್ ಅವರನ್ನು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್ ಟೀಮಿನ ಬ್ಯಾಟಿಂಗ್ ಕನ್ಸ್​ಲ್ಟಂಟ್ ಆಗಿ ನೇಮಕ ಮಾಡಿಕೊಳ್ಳಲಾಗಿದೆ.

ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ತಂಡಕ್ಕೆ ಜ್ಯಾಕ್ ಕ್ಯಾಲಿಸ್ ಬ್ಯಾಟಿಂಗ್ ಸಲಹೆ
ಜ್ಯಾಕ್ ಕ್ಯಾಲಿಸ್
Follow us
ಅರುಣ್​ ಕುಮಾರ್​ ಬೆಳ್ಳಿ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 21, 2020 | 9:47 PM

ಭಾರತ ಉಪಖಂಡದ ಪಿಚ್​ಗಳಲ್ಲಿ ಉತ್ಕೃಷ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ಆಲ್​ರೌಂಡರ್ ಜ್ಯಾಕ್ ಕ್ಯಾಲಿಸ್ ಅವರನ್ನು ಜನವರಿ 14ರಿಂದ ಆರಂಭಗೊಳ್ಳಲಿರುವ ಶ್ರೀಲಂಕಾ ಪ್ರವಾಸಕ್ಕೆ ಇಂಗ್ಲೆಂಡ್ ಟೀಮಿನ ಬ್ಯಾಟಿಂಗ್ ಕನ್ಸಲ್​​ಟಂಟ್​  ಆಗಿ ನೇಮಕ ಮಾಡಿಕೊಳ್ಳಲಾಗಿದೆಯೆಂದು ಇಂಗ್ಲೆಂಡ್ ಮತ್ತು ವೇಲ್ಸ್​ ಕ್ರಿಕೆಟ್ ಬೋರ್ಡ್ (ಇಸಿಬಿ)ಸೋಮವಾರ ಬಿಡುಗಡೆ ಮಾಡಿರುವ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಕ್ರಿಕೆಟ್​ ಇತಿಹಾಸದ ಸರ್ವಶ್ರೇಷ್ಠ ಆಲ್​ರೌಂಡರ್​ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಕ್ಯಾಲಿಸ್ ಅವರನ್ನು ಇಸಿಬಿ ಆಯ್ಕೆ ಮಾಡಿರುವುದಕ್ಕೆ ಕ್ರಿಕೆಟ್ ವಲಯಗಳಲ್ಲಿ ಆಶ್ಚರ್ಯ ವ್ಯಕ್ತವಾಗುತ್ತಿದೆ. ಇಂಗ್ಲೆಂಡ್​ ಮಾಜಿ ಆಟಗಾರರಾಗಿರುವ ಜೊನಾಥನ್ ಟ್ರಾಟ್ ಮತ್ತು ಮಾರ್ಕಸ್ ಟ್ರೆಸ್ಕೋಥಿಕ್ ಕಳೆದ 12-ತಿಂಗಳ ಅವಧಿಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದ್ದರು.

ವಿಶ್ವದ ಶ್ರೇಷ್ಠ ಬ್ಯಾಟ್ಸ್​ಮನ್​ಗಳಲ್ಲೂ ಒಬ್ಬರಾಗಿದ್ದ 45 ವರ್ಷ ವಯಸ್ಸಿನ ಕ್ಯಾಲಿಸ್ ಟೆಸ್ಟ್​ಗಳಲ್ಲಿ 55.37 ಸರಾಸರಿಯೊಂದಿಗೆ 13,206 ರನ್ ಗಳಿಸಿ ನಿವೃತ್ತರಾದರು. ಉಪಖಂಡದ ಪಿಚ್​ಗಳ ಮೇಲೆ ಅವರು 8 ಶತಕಗಳನ್ನು ಬಾರಿಸಿದ್ದು 55.82 ಸರಾಸರಿ ಹೊಂದಿದ್ದಾರೆ.

ಕ್ಯಾಲಿಸ್ ಬ್ಯಾಟಿಂಗ್ ಶೈಲಿ

ಪ್ರಾಯಶಃ ಇದೇ ಕಾರಣಕ್ಕೆ ಅವರನ್ನು ಇಸಿಬಿ ಅಯ್ಕೆ ಮಾಡಿಕೊಂಡಿರಬಹುದು. ಶ್ರೀಲಂಕಾದಲ್ಲಿ ಎರಡು ಟೆಸ್ಟ್​ಗಳನ್ನಾಡಲಿರುವ ಇಂಗ್ಲೆಂಡ್ ನಂತರ ಭಾರತ ಪ್ರವಾಸ ಕೈಗೊಳ್ಳಲಿದೆ. ಆದರೆ, ಕ್ಯಾಲಿಸ್ ಸೇವೆಯನ್ನು ಭಾರತದ ಪ್ರವಾಸಕ್ಕೂ ವಿಸ್ತರಿಸುವ ಬಗ್ಗೆ ಇಸಿಬಿ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.

ಟೀಮಿನ ಸಹಾಯಕ ಕೋಚ್ ಆಗಿರುವ ಮಾಜಿ ಆಟಗಾರ ಗ್ರಹಾಂ ಥೋರ್ಪ್​ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಅವರ ಸ್ಥಾನದಲ್ಲಿ ಮತ್ತೊಬ್ಬ ಮಾಜಿ ಆಟಗಾರ ಪಾಲ್ ಕಾಲಿಂಗ್​ವುಡ್​ಗೆ ಜವಾಬ್ದಾರಿ ವಹಿಸಲಾಗಿದೆ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ